ಇಂದು ಯುಗಾದಿ ಹಬ್ಬ: ಸಂಭ್ರಮದ ಸಿದ್ಧತೆ


Team Udayavani, Mar 18, 2018, 9:48 AM IST

18-March-1.jpg

ಮಹಾನಗರ : ಹಿಂದೂಗಳ ಹೊಸ ವರ್ಷವೆಂದೇ ಆಚರಿಸಲ್ಪಡುವ ಚಾಂದ್ರಮಾನ ಯುಗಾದಿ ಹಬ್ಬ (ಮಾ.18ರಂದು) ಮತ್ತೆ ಬಂದಿದ್ದು, ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲು ನಗರ ಈಗಾಗಲೇ ಸಜ್ಜಾಗಿದೆ. ಯುಗಾದಿ ಆಚರಣೆಗೆಂದೇ ದೇವಾಲಯಗಳು ಸಿಂಗಾರಗೊಂಡಿವೆ. ಮಾರುಕಟ್ಟೆಯಲ್ಲಿ ಹೂವು, ಹಣ್ಣುಗಳ ಖರೀದಿ ಜೋರಾಗಿದೆ.

ಚಂದ್ರನ ಚಲನೆಯನ್ನು ಅನುಸರಿಸಿ, ಅಮಾವಾಸ್ಯೆ-ಹುಣ್ಣಿಮೆಗಳ ಆಧಾರದ ಮೇಲೆ ಮಾಸ ಗಣನೆ ಮಾಡುವ ಪದ್ಧತಿಗೆ ಚಾಂದ್ರಮಾನ ಎಂದು ಕರೆಯುತ್ತಾರೆ. ವಿಶ್ವಕರ್ಮ ಮತ್ತು ಗೌಡ ಸಾರಸ್ವತ ಬ್ರಾಹ್ಮಣ (ಜಿಎಸ್‌ಬಿ) ಸಮುದಾಯಕ್ಕೆ ಈ ಹಬ್ಬ ವಿಶೇಷ. ಚಾಂದ್ರಮಾನ ಯುಗಾದಿ ಹಬ್ಬದೊಡನೆ ಚೈತ್ರಮಾಸವನ್ನು ಈ ಸಮುದಾಯಗಳು ಆಚರಿಸುತ್ತವೆ. ವಿಶ್ವಕರ್ಮ ಸಮುದಾಯದಲ್ಲಿ ಯುಗಾದಿಯ ದಿನ ಬೆಳಗ್ಗೆ ಬೇಗನೆ ಎದ್ದು, ಸ್ನಾನ ಮಾಡಿ, ಮನೆಗಳನ್ನು ಸಿಂಗರಿಸಲಾಗುತ್ತದೆ. ಆ ಬಳಿಕ ಮನೆಯ ಹಿರಿಯರಿಗೆ ನಮಸ್ಕರಿಸುವುದು ಪದ್ಧತಿ. ಅನಂತರ ಹೊಸ ಬಟ್ಟೆ ತೊಟ್ಟು ಮನೆ ಮಂದಿ ವಿಶೇಷ ಭೋಜನ ಸವಿಯುತ್ತಾರೆ.

ಬೇವು ಬೆಲ್ಲ ಹಂಚಿಕೆ
ಜಿಎಸ್‌ಬಿ ಸಮುದಾಯದಲ್ಲಿ ಹೊಸ ವರ್ಷದ ಆಚರಣೆಯಾಗಿ ಈ ಹಬ್ಬವನ್ನು ವಿಶೇಷವಾಗಿ ಆಚರಿಸಲಾಗುತ್ತದೆ. ಈ ದಿನದಂದು ಮನೆ ಸಿಂಗರಿಸಿ, ಬೆಳಗ್ಗೆ ಬೇವು ಬೆಲ್ಲ ಹಂಚಲಾಗುತ್ತದೆ. ದೇವರಿಗೆ ನೈವೇದ್ಯ ಮಾಡಿ, ಅದರಲ್ಲೂ ಕಡ್ಲೆಬೇಳೆ ಪಾಯಸ ಈ ದಿನದ ವಿಶೇಷ. ಗೇರು ಬೀಜದ ಮಡಗಣೆ ಮಾಡಲಾಗುತ್ತದೆ. ಹೊಸ ಬಟ್ಟೆಗಳನ್ನು ದೇವರ ಪ್ರಸಾದದೊಡನೆ ಇಟ್ಟು, ಆರತಿ ಮಾಡಲಾಗುತ್ತದೆ. ಆ ಬಳಿಕ ಹೊಸ ಬಟ್ಟೆ ತೊಟ್ಟು ಹಿರಿಯರಿಗೆ ನಮಸ್ಕರಿಸುವುದು ಸಂಪ್ರದಾಯ.

ದ.ಕ., ಉಡುಪಿಯನ್ನು ಹೊರತು ಪಡಿಸಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಚಾಂದ್ರ ಮಾನ ಯುಗಾದಿ ಯನ್ನು ಬಹಳ ವಿಶೇಷ ರೀತಿಯಲ್ಲಿ ಆಚರಿಸಲಾಗುತ್ತದೆ. ಅಲ್ಲಿನ ಮೂಲದವರು ಈಗ ಜಿಲ್ಲೆಯಲ್ಲಿ ಬಂದು ನೆಲೆಸಿರುವ ಹಲವರು ಚಾಂದ್ರಮಾನ ಯುಗಾದಿ ಹಬ್ಬವನ್ನು ಸಡಗರದಿಂದ ಆಚರಿಸಲು ಸಿದ್ಧತೆಯಲ್ಲಿ ತೊಗಡಿದ್ದಾರೆ. 

9 ದಿನಗಳ ಕಾಲ ಆಚರಣೆ 
ನಗರದ ಶ್ರೀ ಗುರುಮಠ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದಲ್ಲಿ 9 ದಿನಗಳ ಕಾಲ ಯುಗಾದಿ ಹಬ್ಬವನ್ನು ಆಚರಿಸಲಾಗುತ್ತದೆ. ಮಾ. 18 ರಂದು ಧ್ವಜಾರೋಹಣಗೊಂಡು ದೇವರಿಗೆ ಮಹಾಪೂಜೆ, ಪಂಚಾಂಗ ಶ್ರವಣದೊಂದಿಗೆ ರಾತ್ರಿ ಉತ್ಸವ ಪ್ರಾರಂಭವಾಗುತ್ತದೆ. ಉಳಿದ ದಿನಗಳಲ್ಲಿ ಯಜ್ಞ ಕಾರ್ಯಕ್ರಮ, ಗಣಪತಿಹೋಮ, ಶ್ರೀದೇವಿ ಪಾರಾಯಣ, ವಿಶೇಷ ಬಲಿ ಹೊರಟು ಪಲ್ಲಕ್ಕಿ, ಚಂದ್ರ ಮಂಡಲೋತ್ಸವ, ಬೀದಿ ಸವಾರಿ, ಭೂತಬಲಿ, ಶಯನೋತ್ಸವ ಇತ್ಯಾದಿ ಕಾರ್ಯಕ್ರಮಗಳು ನಡೆಯಲಿವೆ. ಯುಗಾದಿ ದಿನದಂದು ನಗರದ ಅನೇಕ ದೇವಾಲಯಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ.

ಟಾಪ್ ನ್ಯೂಸ್

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.