ಚಾರ್ಮಾಡಿ ಘಾಟಿಯಲ್ಲಿ ಟ್ರಾಫಿಕ್‌ ಜಾಮ್‌: ಕಿ.ಮೀ.ಗಟ್ಟಲೆ ವಾಹನಗಳ ಸಾಲು

Team Udayavani, Aug 19, 2018, 9:53 AM IST

charmadi-2.jpg

ಬೆಳ್ತಂಗಡಿ: ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ ಉಂಟಾದ ಟ್ರಾಫಿಕ್‌ ಜಾಮ್‌ ಸಮಸ್ಯೆ ಶನಿವಾರ ಬೆಳಗ್ಗಿನವರೆಗೂ ಮುಂದುವರಿದು ಪ್ರಯಾಣಿಕರು ಪರದಾಡಿದರು. ಶುಕ್ರವಾರ ಕಂಟೈನರ್‌ ಲಾರಿ ಘಾಟಿ ರಸ್ತೆಯ 10ನೇ ತಿರುವಿನಲ್ಲಿ ಕೆಟ್ಟುನಿಂತು ಉಂಟಾದ ಟ್ರಾಫಿಕ್‌ ಜಾಮ್‌ ಶನಿವಾರ 11 ಗಂಟೆಯವರೆಗೂ ಮುಂದು ವರಿದು, 5 ಕಿ.ಮೀ. ವರೆಗೆ ವಾಹನಗಳು ಸಾಲುಗಟ್ಟಿದ್ದವು. 

ತಿರುವಿನಲ್ಲಿ ಲಾರಿ ಕೆಟ್ಟು ನಿಂತಿದ್ದರೂ ಒಂದು ಬದಿಯಲ್ಲಿ ಸಂಚಾರಕ್ಕೆ ಅವಕಾಶವಿತ್ತು. ಆದರೆ ಘಾಟಿ ರಸ್ತೆಯ ಎರಡೂ ಬದಿಗಳಲ್ಲೂ ವಾಹನ ಸಾಲುಗಟ್ಟಿ ದ್ದವು. ಬಳಿಕ ಪೊಲೀಸರು, ಸ್ಥಳೀಯರು ಸೇರಿ ಸಂಚಾರಕ್ಕೆ ತೊಂದರೆಯಾಗದಂತೆ ನೋಡಿ ಕೊಂಡರು. ಲಾರಿ ತಿರುವಿನ ಅಪಾಯಕಾರಿ ಜಾಗದಲ್ಲಿ ನಿಂತ ಪರಿಣಾಮ ತೆರವುಗೊಳಿಸಲು ಪರದಾಡಬೇಕಾಯಿತು. ತೆರವು ಕಾರ್ಯ ತಡ ರಾತ್ರಿಯ ವರೆಗೆ ಮುಂದುವರಿದಿತ್ತು.

ಘನ ವಾಹನಗಳ ಗೊಂದಲ
ಜಿಲ್ಲಾಧಿಕಾರಿ ಘನ ವಾಹನ ಸಂಚಾರವನ್ನು ಶುಕ್ರವಾರ ತಡರಾತ್ರಿಯೇ ನಿಷೇಧಿಸಿದ್ದರೂ ಸಾಕಷ್ಟು ಘನ ವಾಹನಗಳು ಬಂದು ನಿಂತಿದ್ದವು. ಜತೆಗೆ ಹಲವು ಘನ ವಾಹನಗಳು ಮಾಹಿತಿ ಇಲ್ಲದೆ ಆಗಮಿಸಿದ್ದರಿಂದ ಪೊಲೀಸರು ಅನಿವಾರ್ಯವಾಗಿ ಅವನ್ನು ಬಿಡಬೇಕಾಯಿತು. ಶನಿವಾರ ಬೆಳಗ್ಗಿನ ಬಳಿಕ ಘನ ವಾಹನಗಳನ್ನು ಘಾಟಿ ರಸ್ತೆಯಲ್ಲಿ ಬಿಟ್ಟಿಲ್ಲ ಎಂದು ಬೆಳ್ತಂಗಡಿ ಸಂಚಾರ ಪೊಲೀಸ್‌ ಎಸ್‌ಐ ಓಡಿಯಪ್ಪ ಗೌಡ ತಿಳಿಸಿದ್ದಾರೆ. ತಿರುವುಗಳು ಕಿರಿದಾಗಿರುವುದರಿಂದ ಘನ ವಾಹನಗಳ ಸಂಚಾರ ನಿಷೇಧಿಸುವಂತೆ ಆಗ್ರಹಿಸುತ್ತಲೇ ಬಂದಿದ್ದೇವೆ ಎಂದು ಹಸನಬ್ಬ ಚಾರ್ಮಾಡಿ ತಿಳಿಸಿದ್ದಾರೆ.

ಮಧ್ಯಾಹ್ನ ತಲುಪಿದ ಬಸ್‌ಗಳು
ಟ್ರಾಫಿಕ್‌ ಜಾಮ್‌ನಿಂದ ದೂರದೂರಿಗೆ ಪ್ರಯಾಣಿ ಸುತ್ತಿದ್ದ ಪ್ರಯಾಣಿಕರು ತೊಂದರೆ ಅನುಭವಿಸಿದರು. ಮಂಗಳೂರಿಗೆ ಬೆಳಗ್ಗೆ ತಲುಪಬೇಕಿದ್ದ ಬಸ್‌ಗಳು, ತಲುಪುವ ವೇಳೆಗೆ ಮಧ್ಯಾಹ್ನವಾಗಿತ್ತು. ಮಂಗಳೂರಿನಿಂದ ತೆರಳಿದ ಬಸ್‌ಗಳೂ ಗುರಿ ಸೇರುವಾಗ ವಿಳಂಬವಾಗಿತ್ತು.

ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್‌
ಪುತ್ತೂರು;
ಸಂಪಾಜೆ ಘಾಟಿ ರಸ್ತೆ ಕುಸಿದಿರುವ ಹಿನ್ನೆಲೆಯಲ್ಲಿ ಪುತ್ತೂರು- ಮಂಗಳೂರು, ಸುಳ್ಯ- ಮಂಗಳೂರು ನಡುವೆ ಕೆಎಸ್‌ಆರ್‌ಟಿಸಿ ಘಟಕ ವತಿಯಿಂದ ಹೆಚ್ಚುವರಿ ಬಸ್‌ಗಳನ್ನು ಹಾಕಲಾಗಿದೆ. ಮಂಗಳೂರಿನಿಂದ ಪುತ್ತೂರಿಗೆ ಕೊನೆಯ ಬಸ್‌ 8.45ರ ಬದಲು 9.30ಕ್ಕೆ ಹೊರಡಲಿದೆ. ಹೆಚ್ಚುವರಿ ಬಸ್‌ಗಳು ಪುತ್ತೂರು- ಮಂಗಳೂರು ನಡುವೆ 6 ಟ್ರಿಪ್‌ ಹಾಗೂ ಸುಳ್ಯ- ಮಂಗಳೂರು ನಡುವೆ ನಾಲ್ಕು ಬಾರಿ ಸಂಚರಿಸಲಿವೆ ಎಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.