ಮಂಗಳೂರು: ಕಾರಿನ ಸಹಪ್ರಯಾಣಿಕ ಹೆಲ್ಮೆಟ್ ಧರಿಸಿಲ್ಲವೆಂದು ದಂಡ !
Team Udayavani, Dec 30, 2022, 8:15 AM IST
ಸಾಂದರ್ಭಿಕ ಚಿತ್ರ
ಮಂಗಳೂರು : ಕಾರಿನಲ್ಲಿ ಸಹಪ್ರಯಾಣಿಕ ಹೆಲ್ಮೆಟ್ ಧರಿಸಿಲ್ಲವೆಂದು ಪೊಲೀಸರು ದಂಡ ವಿಧಿಸಿರುವ ವಿಲಕ್ಷಣ ಪ್ರಕರಣವೊಂದು ಮಂಗಳೂರಿನಲ್ಲಿ ನಡೆದಿದೆ. ಕಾರು ಚಾಲಕನಿಗೆ ನೋಟಿಸ್ ಬಂದಿದ್ದು, 500 ರೂ. ದಂಡ ಕಟ್ಟುವಂತೆ ತಿಳಿಸಲಾಗಿದೆ.
ನವೆಂಬರ್ 29ರಂದು ಮಂಗಳಾದೇವಿಯಲ್ಲಿ ನಡೆದ ಟ್ರಾಫಿಕ್ ಉಲ್ಲಂಘನೆಗೆ ಸಂಬಂಧಿಸಿದಂತೆ ಈ ನೋಟಿಸ್ ಜಾರಿಯಾಗಿದ್ದು, ಡಿ. 22ರಂದು ಚಾಲಕನ ಕೈಸೇರಿದೆ. ಉಲ್ಲಂಘನೆ ವಿವರಗಳು ಎನ್ನುವಲ್ಲಿ “ಕಾರು’ ಎಂದು ನಮೂದಿಸಲಾಗಿದ್ದು, ಉಲ್ಲಂಘನೆ ರೀತಿ ಕಾಲಂನಲ್ಲಿ “ಸಹಸವಾರ ಹೆಲ್ಮೆಟ್ ಧರಿಸಿಲ್ಲ’ ಎಂದಿದೆ.
ದ್ವಿಚಕ್ರ ವಾಹನ ಬದಲಿಗೆ ಕಾರು
ನೋಟಿಸ್ನಲ್ಲಿ ಉಲ್ಲಂಘನೆ ನಡೆದ ಸ್ಥಳದ ಚಿತ್ರವಿದೆ. ಅದರಲ್ಲಿ ದ್ವಿಚಕ್ರ ವಾಹನವೊಂದರಲ್ಲಿ ಸಹ ಸವಾರ ಹೆಲ್ಮೆಟ್ ಇಲ್ಲದೆ ಸಂಚರಿಸುತ್ತಿರುವುದು ಕಾಣಿಸುತ್ತಿದ್ದು, ಸ್ವಲ್ಪ ದೂರದಲ್ಲಿ ಕಾರು ಕೂಡ ಇದೆ. ಮಂಗಳೂರು ನಗರ ಸಂಚಾರ ಪೊಲೀಸ್ ಆಟೋಮೇಶನ್ ಸೆಂಟರ್ನಿಂದ ನೋಟಿಸ್ ಕಳುಹಿಸುವ ಸಂದರ್ಭ ದ್ವಿಚಕ್ರ ವಾಹನ ಸವಾರನಿಗೆ ನೋಟಿಸ್ ಕಳುಹಿಸುವ ಬದಲು ಕಾರು ಚಾಲಕನ ವಿಳಾಸಕ್ಕೆ ಕಳುಹಿಸಿರುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ