ಬುಡೋಳಿ : ಲಾರಿ-ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ, ಸವಾರ ಸ್ಥಳದಲ್ಲೇ ಸಾವು
Team Udayavani, May 3, 2021, 7:35 PM IST
ವಿಟ್ಲ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿಯ ಜೋಗಿಬೆಟ್ಟು ಎಂಬಲ್ಲಿ ಲಾರಿ ಮತ್ತು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ, ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ.
ಬುಡೋಳಿ ನಿವಾಸಿ ಮಹಮ್ಮದ್ ಶರೀಫ್(35) ಮೃತಪಟ್ಟವರು. ಇವರು ಬುಡೋಳಿಯಿಂದ ಗಡಿಯಾರ ಕಡೆಗೆ ತನ್ನ ಡಿಯೋ ವಾಹನದಲ್ಲಿ ತೆರಳುತ್ತಿದ್ದ ವೇಳೆ ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಸಿಮೆಂಟ್ ಸಾಗಾಟ ಮಾಡುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ.
ಇದನ್ನೂ ಓದಿ :ಕೋವಿಡ್ ಸೋಂಕಿಗೆ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಹೋದರ ಕಿರಣ್ ಬಲಿ