ಕಡಬ: ಸರಕಾರಿ ಪ.ಪೂ. ಕಾಲೇಜಿನಲ್ಲಿ ವನಮಹೋತ್ಸವ

Team Udayavani, Jul 23, 2017, 7:35 AM IST

kabaka.jpg

ಕಡಬ: ನಾಗರಿಕತೆ ಬೆಳೆದಂತೆಯೇ ಮನುಷ್ಯ ಪ್ರಕೃತಿಯಿಂದ ದೂರವಾಗಲು ಆರಂಭಿಸಿದ. ಅದರಿಂದಾಗಿಯೇ ಇಂದು ವಾತಾವರಣದಲ್ಲಿ ಅಸಮ ತೋಲನ ಉಂಟಾಗಿ ಮನುಷ್ಯನ ಆರೋಗ್ಯದ ಮೇಲೆಯೂ ದುಷ್ಪರಿಣಾಮ ಕಾಣಿಸಿಕೊಳ್ಳುತ್ತಿದೆ ಎಂದು ಕಡಬ ಸರಕಾರಿ ಪ.ಪೂ. ಕಾಲೇಜಿನ ಪ್ರಾಂಶುಪಾಲ ಜನಾರ್ದನ ಕೆ.ಎ. ಅವರು ಹೇಳಿದರು.
ಅವರು ಕಡಬ ಸರಕಾರಿ ಪ.ಪೂ. ಕಾಲೇಜಿನ ಸಭಾಂಗಣದಲ್ಲಿ  ಶ್ರೀ  ಕ್ಷೇ.ಧ.ಗ್ರಾ. ಯೋಜನೆಯ ಕಡಬ “ಬಿ’ ಒಕ್ಕೂಟ, ಕಡಬ ಸರಕಾರಿ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ  ಪೂರ್ವ ವಿದ್ಯಾರ್ಥಿ ಸಂಘದ ಸಹಯೋಗದೊಂದಿಗೆ ಜರಗಿದ ವನಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 
ಮರಗಳನ್ನು ಬೆಳೆಸಿ ಶುದ್ಧ ಗಾಳಿ ಮತ್ತು ಆರೋಗ್ಯಕರ ವಾತಾವರಣ ನಿರ್ಮಾಣಕ್ಕೆ ನಾವೆಲ್ಲರೂ ಕೈಜೋಡಿಸಬೇಕು ಎಂದರು. 

ಮುಖ್ಯಅತಿಥಿಯಾಗಿ ತಾ.ಪಂ.ಸದಸ್ಯ ಗಣೇಶ್‌ ಕೈಕುರೆ ಅವರು ಮಾತನಾಡಿ, ಪ್ರಕೃತಿ ಇದ್ದರೆ ಮಾತ್ರ ಮನುಷ್ಯ ಎನ್ನುವ ಅರಿವು ಮೂಡಿದಾಗ ಮಾತ್ರ ಪರಿಸರ ಸಂರಕ್ಷಣೆಯಾಗಲು ಸಾಧ್ಯ ಎಂದರು. 

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಡಬ ಸಿ.ಎ. ಬ್ಯಾಂಕ್‌ಅಧ್ಯಕ್ಷ  ಸುಂದರ ಗೌಡ ಮಂಡೆಕರ ಅವರು ಸಸಿಗಳನ್ನು ನೆಟ್ಟು ಬೆಳೆಸುವುದರೊಂದಿಗೆ ನಾವು ಜಲಸಂರಕ್ಷಣೆಯ ಬಗ್ಗೆಯೂ ಕಾಳಜಿ ವಹಿಸಬೇಕು ಎಂದರು. ಕಾಲೇಜಿನ ಪರಿಸರದಲ್ಲಿ ಇಂಗುಗುಂಡಿಗಳನ್ನು ಮಾಡುವ ಮೂಲಕ ನೀರಿಂಗಿಸುವ ಕೆಲಸಕ್ಕೆ ಕಾಲೇಜಿನ ಪೂರ್ವ ವಿದ್ಯಾರ್ಥಿ ಸಂಘ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಮುಂದಾಗುವುದಾದರೆ ಸಿ.ಎ.ಬ್ಯಾಂಕ್‌ ವತಿಯಿಂದ 5 ಸಾವಿರ ರೂ. ದೇಣಿಗೆಯನ್ನು ಪರಿಸರ  ಕಾಳಜಿಗಾಗಿ ನೀಡುವುದಾಗಿ ಅವರು ಘೋಷಿಸಿದರು. 

ಕಾಲೇಜಿನ ಉಪ ಪ್ರಾಂಶುಪಾಲೆ ವೇದಾವತಿ ಬಿ.,  ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಕಡಬ ಸಮಿತಿಯ ಉಪಾಧ್ಯಕ್ಷ  ಶಿವಪ್ರಸಾದ್‌ ರೈ ಮೈಲೇರಿ,  ಕಾಲೇಜಿನ ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷ ದಯಾನಂದ ಉಂಡಿಲ, ಗ್ರಾಮಾಭಿವೃದ್ಧಿ ಯೋಜನೆಯ “ಬಿ’ ಒಕ್ಕೂಟದ ಅಧ್ಯಕ್ಷ ಆನಂದ ಗೌಡ ಕೋಂಕ್ಯಾಡಿ, ಉಪನ್ಯಾಸಕ ಇ.ಸಿ.ಚೆರಿಯನ್‌ ಬೇಬಿ, ಪೂರ್ವ ವಿದ್ಯಾರ್ಥಿ ಕುಶಾಲಪ್ಪ ಗೌಡ ಕಂಪ ಅವರು ಮಾತನಾಡಿದರು.

ಅರಣ್ಯ ರಕ್ಷಕ ಸುಬ್ರಹ್ಮಣ್ಯ ಗೌಡ, ಗ್ರಾಮಾಭಿವೃದ್ಧಿ ಯೋಜನೆಯ ಕಡಬ ವಲಯ ಮೇಲ್ವಿಚಾರಕ ಬಾಬು, ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ನಾಯಕ ಗಣೇಶ್‌ ಉಪಸ್ಥಿತರಿದ್ದರು. ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿ ಪುಷ್ಪಾವತಿ ಸ್ವಾಗತಿಸಿ, ಒಕ್ಕೂಟದ ಕಾರ್ಯದರ್ಶಿ ನಳಿನಾಕ್ಷಿ ವಂದಿಸಿದರು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಕಾರ್ಯಕ್ರಮಾಧಿಕಾರಿ ಸೆಲಿನ್‌ ಕೆ.ಪಿ. ನಿರೂಪಿಸಿದರು.

ಟಾಪ್ ನ್ಯೂಸ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.