ಚುನಾವಣೆ ಘೋಷಣೆ: ಉಡುಪಿ ಮಂಗಳೂರಿನಲ್ಲಿ ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಲು ಸೂಚನೆ


Team Udayavani, Mar 29, 2023, 7:25 PM IST

ಚುನಾವಣೆ ಘೋಷಣೆ: ಉಡುಪಿ ಮಂಗಳೂರಿನಲ್ಲಿ ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಲು ಸೂಚನೆ

ಮಂಗಳೂರು: ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದು ಬೆಳಿಗ್ಗೆಯಿಂದಲೇ ಮಾದರಿ ಸಂಹಿತೆ ಜಾರಿಗೊಂಡ ಕಾರಣ ಸರಕಾರದ ಅನುದಾನವನ್ನು ಬಳಸಿಕೊಂಡು ಹಾಕಿರುವ ಜಾಹೀರಾತು ಫ್ಲೆಕ್ಸ್, ಬ್ಯಾನರ್ ಹಾಗೂ ಬಂಟಿಂಗ್ಸ್ ಗಳನ್ನು ಜಿಲ್ಲೆಯಾದ್ಯಂತ ಕೂಡಲೇ ತೆರವುಗೊಳಿಸುವಂತೆ ಜಿಲ್ಲೆಯ ಎಲ್ಲಾ ಚುನಾವಣಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ನಿರ್ದೇಶನ ನೀಡಿದರು.

ಅವರು ಮಾ.29ರ ಬುಧವಾರ ಈ ಕುರಿತು ಹಮ್ಮಿಕೊಂಡಿದ್ದ ವಿಡಿಯೋ ಕಾನ್ಪರೆನ್ಸ್ ಸಭೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೊಂಡಿದೆ, ಕಾರಣ ಅಧಿಕೃತ ಹಾಗೂ ಅನಧಿಕೃತವಾಗಿ ಹಾಕಲಾಗಿರುವ ಎಲ್ಲಾ ರೀತಿಯ ಜಾಹೀರಾತುಗಳನ್ನು ತೆರವುಗೊಳಿಸಬೇಕು, ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಬೇಕು, ಯಾವುದೇ ಸರ್ಕಾರಿ ಕಚೇರಿಯಲ್ಲಿ, ಸರ್ಕಾರದ ಅಧಿಕೃತ ವೆಬ್‍ಸೈಟ್‍ಗಳಲ್ಲಿ ಹಾಕಲಾಗಿರುವ ರಾಜಕೀಯ ಪಕ್ಷಗಳ ಮುಖಂಡರ ಭಾವಚಿತ್ರಗಳನ್ನು ಈ ಕೂಡಲೇ ತೆರವುಗೊಳಿಸಬೇಕು ಎಂದ ಅವರು, 24, 72 ಗಂಟೆಯೊಳಗೆ ನಿರ್ವಹಿಸಬೇಕಾದ ಕರ್ತವ್ಯಗಳನ್ನು ವಿವರಿಸಿದರು.

ಒಮ್ಮೆ ತೆರವು ಮಾಡಲಾದ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ ಹಾಗೂ ಕಟ್‍ಔಟ್‍ಗಳನ್ನು ಪುನಃ ಅಳವಡಿಸಿದ್ದಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ ಹಾಗೂ ಕರ್ನಾಟಕ ತೆರೆದ ಸ್ಥಳಗಳ (ವಿರೂಪಗೊಳಿಸುವಿಕೆ ತಡೆಗಟ್ಟುವ) ಕಾಯ್ದೆ-1981ರಂತೆ ಆರು ತಿಂಗಳ ಜೈಲು ಶಿಕ್ಷೆ, ಎರಡು ಸಾವಿರ ರೂ.ಗಳ ದಂಡ ವಿಧಿಸಬಹುದಾಗಿದೆ, ಅದನ್ನು ಅನುಷ್ಠಾನಗೊಳಿಸುವಂತೆಯೂ ಸಲಹೆ ನೀಡಿದರು.

ಅದೇ ರೀತಿ ಸಂಬಂಧಿಸಿದ ಅಧಿಕಾರಿಗಳು ಕೈಗೊಂಡ ಕ್ರಮಗಳ ಬಗ್ಗೆ ನಿಗದಿತ ಕಾಲಮಿತಿಯಲ್ಲಿ ವರದಿ ನೀಡಬೇಕು, ಅಧಿಕಾರಿಗಳು ಚುನಾವಣಾ ಕರ್ತವ್ಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು, ನಿರ್ಲಕ್ಷ್ಯತನಕ್ಕೆ ಅವಕಾಶವಿಲ್ಲದಂತೆ ಕಾರ್ಯನಿರ್ವಹಿಸುವಂತೆ ಎಚ್ಚರಿಕೆ ನೀಡಿದರು.

ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಅವರು ಮಾತನಾಡಿ, ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾ ಅಧಿಕಾರಿಗಳು ಚುನಾವಣಾ ಆಯೋಗಕ್ಕೆ ನೀಡಬೇಕಾದ ವರದಿಗಳನ್ನು ಕೂಡಲೇ ನೀಡುವಂತೆ ತಿಳಿಸಿದರು.

ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾ ಅಧಿಕಾರಿಗಳು, ತಹಶೀಲ್ದಾರರು, ಸಂಬಂಧಪಟ್ಟ ತಾಲೂಕು ಪಂಚಾಯತ್ ಕಾರ್ಯನಿರ್ವಣಾಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪುರಸಭೆಗಳ ಮುಖ್ಯಾಧಿಕಾರಿಗಳು ಭಾಗವಹಿಸಿದ್ದರು.

ಉಡುಪಿಯಲ್ಲೂ ಬ್ಯಾನರ್‌, ಬಂಟಿಂಗ್ಸ್‌ ತೆರವಿಗೆ ಸೂಚನೆ:
ನಗರಸಭೆ ಸಿಬಂದಿ ಸಹಿತವಾಗಿ ಗ್ರಾ.ಪಂ., ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಿಬಂದಿ ವರ್ಗ ಜಿಲ್ಲಾಡಳಿತದ ಸೂಚನೆ ಮೇರೆಗೆ ಬ್ಯಾನರ್‌, ಬಂಟಿಂಗ್ಸ್‌ ಇತ್ಯಾದಿಗಳನ್ನು ತೆರವುಗೊಳಿಸುವ ಕಾರ್ಯ ಆರಂಭಿಸಿದೆ.

ಜಿಲ್ಲಾಧಿಕಾರಿ ಕಚೇರಿ ಆವರಣದ ಸಚಿವರ ಕಚೇರಿ ಹಾಗೂ ಸಂಸದರ ಕಚೇರಿಗೆ ಸರಕಾರದಿಂದ ನೀಡಿರುವ ಸವಲತ್ತುಗಳನ್ನು ನೀತಿ ಸಂಹಿತೆ ನಿಯಮ ಆಧಾರದಲ್ಲಿ ವಾಪಸ್‌ ಪಡೆಯಲಾಗಿದೆ. ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ಅವರು ಎಲ್ಲ ರಾಜಕೀಯ ಪಕ್ಷಗಳ ಪ್ರಮುಖರ ಸಭೆ ನಡೆಸಿ, ಚುನಾವಣೆ ವೆಚ್ಚ ಸಹಿತವಾಗಿ ಕಾರ್ಯಕ್ರಮ ಆಯೋಜನೆ ಸಂದರ್ಭದಲ್ಲಿ ಯಾವುದೇ ನಿಯಮದ ಉಲ್ಲಂಘನೆ ಆಗದಂತೆ ಎಚ್ಚರ ವಹಿಸಲು ಸೂಚನೆಯನ್ನು ರವಾನಿಸಿದ್ದಾರೆ. ಒಟ್ಟಾರೆಯಾಗಿ ಜಿಲ್ಲಾದ್ಯಂತ ನೀತಿ ಸಂಹಿತೆ ಇಫೆಕ್ಟ್ ಶುರುವಾಗಿದೆ.

ಇದನ್ನೂ ಓದಿ: 14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

ಟಾಪ್ ನ್ಯೂಸ್

ISSF Junior World Cup: ಧನುಷ್‌ ಶ್ರೀಕಾಂತ್‌ಗೆ ಚಿನ್ನ

ISSF Junior World Cup: ಧನುಷ್‌ ಶ್ರೀಕಾಂತ್‌ಗೆ ಚಿನ್ನ

enWorld Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

World Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

vijayendra

PSI ಹಗರಣ; ನನ್ನ ಹೆಸರು ತೇಲಿ ಬಿಟ್ಟಿದ್ದಾರೆ‌, ತನಿಖೆ ಮಾಡಲಿ:ಬಿ‌.ವೈ.ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ರಾಮ ಪಂಚಾಯತ್‌ಗಳ ನೌಕರರ ಮಾಸಿಕ ವೇತನಕ್ಕೆ ತಡೆ

ಗ್ರಾಮ ಪಂಚಾಯತ್‌ಗಳ ನೌಕರರ ಮಾಸಿಕ ವೇತನಕ್ಕೆ ತಡೆ

8-ullala

Ullala: ಅಕ್ರಮ ಜಾನುವಾರು ಸಾಗಾಟ ಪತ್ತೆ ಹಚ್ಚಿದ ಬಜರಂಗದಳ

ಕರಾವಳಿಯ ದೇಗುಲಗಳಲ್ಲಿ ಭಕ್ತಸಾಗರ

ಕರಾವಳಿಯ ದೇಗುಲಗಳಲ್ಲಿ ಭಕ್ತಸಾಗರ

7–ullala

Hit and Run ಪ್ರಕರಣ; ಬೈಕ್ ಸವಾರ ಗಂಭೀರ

2019ರಂತೆ ಈ ಬಾರಿಯೂ ಮುಂಗಾರು ವಿಳಂಬ

2019ರಂತೆ ಈ ಬಾರಿಯೂ ಮುಂಗಾರು ವಿಳಂಬ

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

Cricket World Cup Qualifier: ಜಿಂಬಾಬ್ವೆ ಬಲಿಷ್ಠ ತಂಡ ಪ್ರಕಟ

Cricket World Cup Qualifier: ಜಿಂಬಾಬ್ವೆ ಬಲಿಷ್ಠ ತಂಡ ಪ್ರಕಟ

ISSF Junior World Cup: ಧನುಷ್‌ ಶ್ರೀಕಾಂತ್‌ಗೆ ಚಿನ್ನ

ISSF Junior World Cup: ಧನುಷ್‌ ಶ್ರೀಕಾಂತ್‌ಗೆ ಚಿನ್ನ

enWorld Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

World Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

Perampalli: ಡಿವೈಡರ್‌ ಮೇಲೇರಿದ ಕಾರು!

Perampalli: ಡಿವೈಡರ್‌ ಮೇಲೇರಿದ ಕಾರು!

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ