ಉದ್ಯೋಗ ಖಾತರಿಯಲ್ಲಿ “ರಿಯಾಯಿತಿ’ ಭಾಗ್ಯ

Team Udayavani, Mar 16, 2017, 12:41 PM IST

udyoga-khatri.jpg

“ಬಿಸಿಲು ಉಲ್ಬಣ-ಬರಗಾಲದ ತಲ್ಲಣ’ಕ್ಕೆ

ಮಂಗಳೂರು: ಉದ್ಯೋಗಿಯೊಬ್ಬನಿಗೆ ಭರ್ತಿ ಸಂಬಳ ದೊರೆಯಬೇಕಾದರೆ, ನಿಗದಿತ ಕೆಲಸವನ್ನು ಸಮಯ ಪರಿಯಲ್ಲಿ ಮಾಡಬೇಕು. ಆದರೆ ಬರಗಾಲ ಹಾಗೂ ಬೇಸಗೆ ಕಾರಣದಿಂದ ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ಪಡೆದು ಭರ್ತಿ ಸಂಬಳ ಪಡೆಯಬಹುದು. ಆದರೆ, ಇದು ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮಾತ್ರ…!

ರಾಜ್ಯದ ಎಲ್ಲ ತಾಲೂಕುಗಳ ಗ್ರಾಮೀಣ ಪ್ರದೇಶದಲ್ಲಿ ಕೆಲಸ ನಿರ್ವಹಿಸುವ ನೋಂದಾಯಿತ ಕಾರ್ಮಿಕರಿಗೆ ಈಗಿನ ಬೇಸಗೆ ಕಾಲದಲ್ಲಿ ತಾಪಮಾನ ಹೆಚ್ಚಾಗಿರುವುದರಿಂದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ದುಡಿಯುವ ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ನೀಡಲು ರಾಜ್ಯ ಸರಕಾರ ಆದೇಶಿಸಿದೆ. ಇದರಂತೆ ಈ ತಿಂಗಳಿನಲ್ಲಿ ಉದ್ಯೋಗ ಖಾತರಿ ಯೋಜನೆ ಕೆಲಸದವರಿಗೆ ಶೇ. 25ರಷ್ಟು ರಿಯಾಯಿತಿ ದೊರೆಯಲಿದೆ. ಅಂದರೆ, 1 ದಿನದಲ್ಲಿ ಶೇ. 100ರಷ್ಟು ಕಾಮಗಾರಿ ಮಾಡಬೇಕಾದ ಇವರು ಈ ತಿಂಗಳಿನಲ್ಲಿ ಶೇ. 75ರಷ್ಟು ಪ್ರಮಾಣದಲ್ಲಿ ಮಾತ್ರ
ಕೆಲಸ ಮಾಡಬಹುದು. ಎಪ್ರಿಲ್‌ ಹಾಗೂ ಮೇ ತಿಂಗಳಿನಲ್ಲಿ ಶೇ. 30ರಷ್ಟು ರಿಯಾಯಿತಿ ಪ್ರಕಟಿಸಲಾಗಿದ್ದು, ಜೂನ್‌ನಲ್ಲಿ ಶೇ. 20 ರಿಯಾಯಿತಿ ದೊರೆಯಲಿದೆ. ರಾಜ್ಯದ 160 ಬರಪೀಡಿತ ತಾಲೂಕುಗಳಲ್ಲಿ ಇದನ್ನು ಅನುಷ್ಠಾನಿಸುವ ಜತೆಗೆ ರಾಜ್ಯದ ಎಲ್ಲ ತಾಲೂಕುಗಳ ಗ್ರಾಮೀಣ ಪ್ರದೇಶಗಳಲ್ಲಿ ಕೆಲಸ ನಿರ್ವಹಿಸುವ ಉದ್ಯೋಗ ಖಾತರಿಯ ಕೂಲಿ ಕಾರ್ಮಿಕರಿಗೂ ಇದು ಅನ್ವಯವಾಗಲಿದೆ.

ರಾಜ್ಯದಲ್ಲಿ ಒಟ್ಟು 52.88 ಲಕ್ಷ ಜಾಬ್‌ ಕಾರ್ಡ್‌ ಜಾರಿಗೊಳಿಸಲಾಗಿದ್ದು, ಇದರಲ್ಲಿ 28.96 ಲಕ್ಷ ಕಾರ್ಡ್‌ಗಳು ಪ್ರಸ್ತುತ ಕಾರ್ಯನಿರತವಾಗಿದ್ದು, ಇವರಿಗೆ ಈ ರಿಯಾಯಿತಿ ಲಾಭ ದೊರೆಯಲಿದೆ. 

ಗ್ರಾಮೀಣ ಅಭಿವೃದ್ಧಿಗಾಗಿ “ಉದ್ಯೋಗ ಖಾತರಿ’
ರಸ್ತೆ, ಬಾವಿ ನಿರ್ಮಾಣ, ಶ್ಮಶಾನ ರಚನೆ ಸೇರಿದಂತೆ ಗ್ರಾಮದ ಸಮಗ್ರ ಅಭಿವೃದ್ಧಿ, ದನದ ಹಟ್ಟಿ ನಿರ್ಮಾಣ, ಕೆರೆ ಅಭಿವೃದ್ಧಿ ಸಹಿತ ಅರ್ಹ ಫಲಾನುಭವಿ ರೈತರ ಕೃಷಿ ಸಂಬಂಧಿತ ಕೆಲಸಗಳು ಹಾಗೂ ತೋಟಗಾರಿಕಾ ಅಭಿವೃದ್ಧಿ ಚಟುವಟಿಕೆಗಳನ್ನು ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೈಗೊಳ್ಳಲು ಅವಕಾಶವಿದೆ. ಗ್ರಾ.ಪಂ. ವ್ಯಾಪ್ತಿಯ ಅರ್ಹ ಪ್ರತೀ ಕುಟುಂಬಕ್ಕೆ ಕನಿಷ್ಠ 100 ದಿನಗಳ ಉದ್ಯೋಗ ನೀಡಲಾಗುತ್ತದೆ. 1 ದಿನಕ್ಕೆ 224 ರೂ. ವೇತನ ನಿಗದಿಪಡಿಸಲಾಗಿದ್ದು, ವರ್ಷಕ್ಕೆ 22,400 ದೊರೆಯಲಿದೆ. 1 ದಿನದಲ್ಲಿ 1 ಕ್ಯುಬಿಕ್‌ ಮೀಟರ್‌ನಷ್ಟು ಕೆಲಸ ನಡೆಸಬೇಕಾಗುತ್ತದೆ. ಇದರಲ್ಲಿ ಬಿಸಿಲಿನ ಕಾರಣದಿಂದ ಶೇಕಡಾವಾರು ರಿಯಾಯಿತಿ ನೀಡಲು ಇದೀಗ ಸರಕಾರ ನಿರ್ಧರಿಸಿದೆ. 

ಉದ್ಯೋಗ ಖಾತರಿ ಯೋಜನೆಯಲ್ಲಿ ಕೆಲಸ ಮಾಡಬೇಕಾದರೆ ಆ ಕಾಮಗಾರಿಯ ಪೂರ್ಣ ಹೆಸರನ್ನು ಗ್ರಾಮ ಸಭೆ ಮುಂದಿರಿಸಿ, ಗ್ರಾ.ಪಂ. ಅನುಮತಿ ಪಡೆದು, ತಾ.ಪಂ. ಹಾಗೂ ಜಿ. ಪಂ.ನಲ್ಲಿ ಅದಕ್ಕೆ ಅನುಮೋದನೆ ದೊರೆಯಬೇಕಿದೆ. ಅನಂತರ‌ ಸಂಬಂಧಿತರಿಗೆ ವೈಯಕ್ತಿಕ “ಜಾಬ್‌ ಕಾರ್ಡ್‌’ ಜಾರಿಗೊಳಿಸಲಾಗುತ್ತದೆ. ಬಳಿಕ ಸಂಬಂಧಿತ ಕಾರ್ಮಿಕನ ಬ್ಯಾಂಕ್‌ ಅಕೌಂಟ್‌ಗೆ ಹಣ ಸಲ್ಲಿಕೆಯಾಗುತ್ತದೆ.

ರಾಜ್ಯದ 30 ಕಂದಾಯ ಜಿಲ್ಲೆಗಳ 176 ತಾಲೂಕುಗಳ ಪೈಕಿ 160 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ರಾಜ್ಯ ಸರಕಾರ ಈಗಾಗಲೇ ಘೋಷಿಸಿದೆ. ಬರ ಪರಿಸ್ಥಿತಿ ತಡೆಗಟ್ಟಲು ಮಹಾತ್ಮಾಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಎಲ್ಲ ಅಗತ್ಯ ಕ್ರಮಕೈಗೊಳ್ಳಲು ಎಲ್ಲ ಜಿ. ಪಂ.ಗಳ ಮುಖ್ಯಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ತೆಲಂಗಾಣದಲ್ಲೂ “ರಿಯಾಯಿತಿ’ 
ಪ್ರಸ್ತುತ ಬರಗಾಲದ ತೀವ್ರತೆ ಹಾಗೂ ಬಿಸಿಲಿನ ತಾಪ ಮತ್ತು ಉಷ್ಣಾಂಶದ ಪ್ರಖರತೆ ಹೆಚ್ಚಾಗಿರುವುದರಿಂದ ಬೇಸಗೆ ಕಾಲದಲ್ಲಿ ನರೇಗಾ ಯೋಜನೆಯಡಿ ನಿಗದಿಪಡಿಸಿದ ಕಾಮಗಾರಿಗಳ ಕೆಲಸದ ಪ್ರಮಾಣ ನಿರ್ವಹಿಸುವುದು ಕಷ್ಟವಾಗುತ್ತಿದೆ. ಇದರಿಂದ ಕೂಲಿ ಕಾರ್ಮಿಕರಿಗೆ, ತಮಗೆ ದೊರೆಯ ಬೇಕಾದ ಕೂಲಿ ಹಣ ಕಡಿಮೆಯಾಗುತ್ತಿದೆ ಎಂಬುದನ್ನು ಮನಗಂಡು ರಾಜ್ಯ ಸರಕಾರ “ರಿಯಾಯಿತಿ’ ಕ್ರಮ ಕೈಗೊಂಡಿದೆ. ಉಷ್ಣಾಂಶದ ಪ್ರಖರತೆ ಹೆಚ್ಚಾಗಿದ್ದು, ಇದರಿಂದ ಕಾಮಗಾರಿಗಳಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರ ದಣಿವು ಹೆಚ್ಚಾಗಿ ನಿಗದಿ ಪಡಿಸಿದ ಕೆಲಸದ ಪ್ರಮಾಣ ಕಡಿಮೆಯಾಗುತ್ತಿದೆ. ಹೀಗಾಗಿ ಬೇಸಗೆ ಕಾಲದಲ್ಲಿ ಕೆಲಸ ಪ್ರಮಾಣದಲ್ಲಿ ರಿಯಾಯಿತಿಯನ್ನು ತೆಲಂಗಾಣ ಸರಕಾರ ಈಗಾಗಲೇ ಪ್ರಕಟಿಸಿದೆ.

– ದಿನೇಶ್‌ ಇರಾ

ಟಾಪ್ ನ್ಯೂಸ್

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.