Ujire; ಯಶೋವರ್ಮರ ಗ್ರೀನ್‌ ಸಿಟಿ ಕಲ್ಪನೆ ನನಸು: ಡಾ| ಮೋಹನ್‌ಆಳ್ವ

ಡಾ| ಬಿ.ಯಶೋವರ್ಮ ಸ್ಮರಣಾರ್ಥ ಯಶೋವನ ಲೋಕಾರ್ಪಣೆ

Team Udayavani, Mar 31, 2024, 12:44 AM IST

1-dsaasd

ಬೆಳ್ತಂಗಡಿ: ಹಲವಾರು ರೀತಿಯ ಅಭಿರುಚಿಯೊಂದಿಗೆ ಆಳವಾದ ಅಧ್ಯಯನ ಮತ್ತು ಯೋಚನೆಯನ್ನು ಯೋಜನೆಗಳ ಮೂಲಕ ನೂರಕ್ಕೆ ನೂರು ಅನುಷ್ಠಾನ ಮಾಡುವ ಸ್ವಭಾವ ಯಶೋವರ್ಮರದ್ದಾಗಿತ್ತು. ಸಸ್ಯಶಾಸ್ತ್ರದಲ್ಲಿ ಆಸಕ್ತಿ ಹೊಂದಿದ್ದ ಅವರು ಉಜಿರೆ ಗ್ರೀನ್‌ ಸಿಟಿ (ಹಸುರೀಕರಣ) ಆಗಬೇಕೆಂಬ ಕನಸು ಯಶೋವನದಿಂದ ಸಾಕಾರಗೊಂಡಿದೆ ಎಂದು ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ್‌ ಆಳ್ವ ಹೇಳಿದರು.

ಎಸ್‌.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಹಾಗೂ ಶಿಕ್ಷಣ ತಜ್ಞರಾಗಿದ್ದ ದಿ| ಡಾ| ಬಿ.ಯಶೋವರ್ಮ ಅವರ ಸ್ಮರಣಾರ್ಥ ಮಾ.30ರಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಎಸ್‌.ಡಿ.ಎಂ. ಕಾಲೇಜಿನ ಆಬೋìರೇಟಂ- ಸಸ್ಯೋಧ್ಯಾನ “ಯಶೋವನ’ ಎಂದು ಮರುನಾಮಕರಣಗೊಳಿಸಿ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಡಾ| ಹೆಗ್ಗಡೆಯವರ ಆಶಯದಂತೆ ಯಶೋವನದಲ್ಲಿ ಬಾಲಿಯ ಲಿಂಪುಯಂಗ್‌ ದೇವಾಲಯದ ಆವರಣದಲ್ಲಿರುವ ವಿಶ್ವ ವಿಖ್ಯಾತ ಗೇಟ್‌ ಆಫ್‌ ಹೆವನ್‌ ಅಂದರೆ ಸ್ವರ್ಗದ ದ್ವಾರದ ಮಾದರಿಯ ಗೋಪುರವನ್ನು ನಿರ್ಮಿಸಿ ಆ ಮೂಲಕ ಸ್ವರ್ಗಸದೃಶ ಪ್ರಕೃತಿಯ ಲೋಕಕ್ಕೆ ಎಲ್ಲರಿಗೂ ಸ್ವಾಗತ ಕೋರುವಂತೆ ಮಾಡಲಾಗಿದೆ ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಸಸ್ಯ ರಕ್ಷಣೆ ಪ್ರಾಮುಖ್ಯತೆ ಎಲ್ಲರಿಗೂ ಬೇಕಿದೆ. ಹಸುರು ಎಂದರೆ ಉಸಿರು, ಹಸುರಿದ್ದರೆ ಉಸಿರು ಎಂಬಂತೆ ಉಜಿರೆಯನ್ನು ಹಸುರೀಕರಣಗೊಳಿಸಿದವರು ಡಾ| ಯಶೋವರ್ಮರವರು. ದಶದಿಕ್ಕುಗಳಲ್ಲಿ ದಶಯೋಜನೆ ರೂಪಿಸುವ ಶಕ್ತಿ ಅವರಿಗಿತ್ತು. ಎಲ್ಲ ವಿದ್ಯಾಸಂಸ್ಥೆಗಳಲ್ಲಿ ಹಸುರು ಬೆಳೆಸುವ ಕೆಲಸವಾಗಬೇಕಿದೆ ಎಂದರು.

ಡಾ| ಹೇಮಾವತಿ ವೀ.ಹೆಗ್ಗಡೆ, ಡಿ.ಹರ್ಷೆàಂದ್ರ ಕುಮಾರ್‌, ಮಂಗಳೂರು ವಿ.ವಿ.ಯ ಉಪಕುಲಪತಿ ಪಿ.ಎಲ್‌.ಧರ್ಮ, ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ| ಎಸ್‌.ಸತೀಶ್ಚಂದ್ರ ಸುರ್ಯಗುತ್ತು, ಡಾ| ಚಿನ್ನಪ್ಪ ಗೌಡ, ಎಂಎಲ್‌ಸಿ ಪ್ರತಾಪಸಿಂಹ ನಾಯಕ್‌. ಸೋನಿಯಾ ಯಶೋವರ್ಮ, ಎಸ್‌.ಡಿ.ಎಂ. ಐಟಿ ವಿಭಾಗ ಸಿಇಒ ಪೂರಣ್‌ ವರ್ಮ, ಕೆಯೂರು ವರ್ಮ ಮೊದಲಾದವರು ಉಪಸ್ಥಿತರಿದ್ದರು.

ಉಜಿರೆ ಕಾಲೇಜು ಪ್ರಾಚಾರ್ಯ ಡಾ| ಕುಮಾರ ಹೆಗ್ಡೆ ಸ್ವಾಗತಿಸಿದರು, ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ| ಶ್ರೀಧರ ಭಟ್‌ ಕಾರ್ಯಕ್ರಮ ನಿರೂಪಿಸಿದರು.

ಏನಿದು ಯಶೋವನ?
1999ರಲ್ಲಿ ಡಾ| ಬಿ.ಯಶೋವರ್ಮ ಅವರ ಮುತುವರ್ಜಿಯಿಂದ ಆರಂಭವಾದ ಅಪರೂಪದ ಸಸ್ಯಸೌರಭಗಳನ್ನು ರಕ್ಷಿಸುವ ಸಸ್ಯೋದ್ಯಾನವೇ ಈ ಯಶೋವನ. ಪಶ್ಚಿಮಘಟ್ಟಗಳ ಅಪರೂಪದ ಸಸ್ಯ ಸಂಕುಲಗಳನ್ನು ಸಂರಕ್ಷಿಸುವ ಮತ್ತು ಅವುಗಳ ತಳಿಗಳನ್ನು ದಾಖಲಿಸುವ ಸಲುವಾಗಿ ಉಜಿರೆಯ ಸಿದ್ಧವನ ಸಮೀಪದಲ್ಲಿ 8 ಎಕರೆ ಜಾಗದಲ್ಲಿ ಉಜಿರೆಯ ಎಸ್‌.ಡಿ.ಎಂ. ಶಿಕ್ಷಣ ಸಂಸ್ಥೆ ಆಬೊìàರೇಟಂ (ಸಸ್ಯೋದ್ಯಾನ) ಹೆಸರಿನಲ್ಲಿ ಈ ಸಂರಕ್ಷಣ ವನವನ್ನು ಸ್ಥಾಪಿಸಲಾಗಿದೆ. ಪ್ರಸ್ತುತ ಇಲ್ಲಿ 1116 ಮರಗಳಿವೆ. ನವಗ್ರಹ ವನ, ತೀರ್ಥಂಕರ ವನ, ಅಶೋಕ ವನ, ಪಂಪವನ ಹಾಗೂ ಕುವೆಂಪು ವನಗಳು, ಇವಿಷ್ಟೇ ಅಲ್ಲದೆ ಹಲವು ತೋಟಗಾರಿಕಾ ಸಸ್ಯ, ವಿವಿಧ ಔಷಧೀಯ ಸಸ್ಯ, ಮನೆ ಮದ್ದು ಸಹಿತ ಸುಮಾರು 500ಕ್ಕೂ ಹೆಚ್ಚಿನ ಜಾತಿಯ ಸಸ್ಯ ಪ್ರಭೇದಗಳು ಇಲ್ಲಿವೆ. ಈ ಮೂಲಕ ಪರಿಸರ ಕಾಳಜಿಯ ದ್ಯೋತಕವಾಗಿದ್ದ ಡಾ| ಬಿ. ಯಶೋವರ್ಮರ ಹೆಸರನ್ನು ಚಿರಸ್ಥಾಯಿಯಾಗಿಸಿದೆ.

ಟಾಪ್ ನ್ಯೂಸ್

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.