ಉಳ್ಳಾಲ ನಗರ ಸಭೆ: ಕಾಂಗ್ರೆಸ್‌ಗೆ ಅಧಿಕಾರದ ನಿರೀಕ್ಷೆ ?

Team Udayavani, Jun 8, 2019, 5:50 AM IST

g-8

ಉಳ್ಳಾಲ: ಇಲ್ಲಿನ ನಗರಸಭೆಯ ಚುನಾವಣೆ ಮುಗಿದು ಫಲಿತಾಂಶ ಬಂದು 9 ತಿಂಗಳುಗಳು ಕಳೆದಿವೆ. ನಗರಸಭೆಯಾಗಿ ಮೇಲ್ದರ್ಜೆ ಗೇರಿದ ಬಳಿಕ ನಡೆದ ಮೊದಲ ಚುನಾವಣೆ ಯಲ್ಲಿ ಅತಂತ್ರ ಸ್ಥಿತಿಯಿದೆ. ಅತೀ ದೊಡ್ಡ ಪಕ್ಷವಾಗಿರುವ ಕಾಂಗ್ರೆಸ್‌ ನೇತೃತ್ವದ ಮೈತ್ರಿ ಸರಕಾರ ರಚನೆಯಾಗುವುದು ನಿಚ್ಚಳ ವಾದರೂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೀಸಲಾತಿ ವಿಚಾರದಲ್ಲಿ ರಾಜ್ಯದಲ್ಲಿ ತಡೆಯಾಜ್ಞೆಯಿಂದ ಹೊಸ ಆಡಳಿತ ಮರೀಚಿಕೆಯಾಗಿದೆ. ಈಗ ರಾಜ್ಯದಲ್ಲಿ ಸ್ಥಳಿಯಾಡಳಿತ ಚುನಾವಣೆ ಮುಗಿದಿದೆ ಹೊಸ ಆಡಳಿತದ ನಿರೀಕ್ಷೆ ಯಲ್ಲಿ ಉಳ್ಳಾಲ ನಗರಸಭೆಯಲ್ಲೂ ರಾಜ ಕೀಯ ಚಟುವಟಿಕೆಗಳು ಗರಿಗೆದರಿದೆ.

ಇಲ್ಲಿನ ಒಟ್ಟು 31 ಸ್ಥಾನಗಳ ಪೈಕಿ ಬಹುಮತಕ್ಕೆ 16 ಸ್ಥಾನಗಳ ಆವಶ್ಯಕತೆಯಿದೆ. ಕಾಂಗ್ರೆಸ್‌ 13 ಸ್ಥಾನಗಳನ್ನು ಪಡೆದು ಅತೀ ದೊಡ್ಡ ಪಕ್ಷವಾಗಿ ಮೂಡಿ ಬಂದರೂ ಮೂರು ಸ್ಥಾನಗಳ ಕೊರತೆಯಿಂದ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ನಗರಸಭೆಯ ಎಲ್ಲ 31 ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್‌ 13 ಸ್ಥಾನಗಳನ್ನು ಮಾತ್ರ ಪಡೆದಿದ್ದು, ಬಿಜೆಪಿ 6 ಸ್ಥಾನಗಳಲ್ಲಿ , ಜೆಡಿಎಸ್‌ 4 ಸ್ಥಾನಗಳಲ್ಲಿ ಜಯಿಸಿದೆ. ಎಸ್‌ಡಿಪಿಐ ಈ ಬಾರಿ 6 ಸ್ಥಾನಗಳು° ಪಡೆದು ಗಮನಾರ್ಹ ಸಾಧನೆ ಮಾಡಿದರೆ, ಒಂದು ಬಂಡಾಯ ಕಾಂಗ್ರೆಸ್‌ ಮತ್ತು ಪಕ್ಷೇತರ ಅಭ್ಯರ್ಥಿಗಳು ಎರಡು ಸ್ಥಾನ ಪಡೆದುಕೊಂಡಿದ್ದರು.

ಕಾಂಗ್ರೆಸ್‌ ಅಧಿಕಾರಕ್ಕೆ ?
ಈ ಬಾರಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ನಿಚ್ಚಳವಾಗಿದೆ. ಈಗಾ ಗಲೇ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಕಾಂಗ್ರೆಸ್‌ ಬೆಂಬಲಿಗರೇ ಆಗಿರುವು ದರಿಂದ ಅವರು ಕಾಂಗ್ರೆಗೆ ಸೇರ್ಪಡೆಗೊಂಡರೆ 15 ಸ್ಥಾನ ಗಳಾಗಲಿದ್ದು. ಸಚಿವ ಯು.ಟಿ. ಖಾದರ್‌ ಅವರಿಗೆ ಮತದಾನ ಮಾಡುವ ಹಕ್ಕು ಇರುವುದರಿಂದ 16 ಸ್ಥಾನಗಳನ್ನು ಪಡೆದು ಅಧಿಕಾರ ನಡೆಸಲು ಅವಕಾಶವಿದೆ.

ಇನ್ನೊಂದು ದಾರಿಯಲ್ಲಿ ರಾಜ್ಯದಲ್ಲಿರುವಂತೆ ಜೆಡಿಎಸ್‌ನೊಂದಿಗೆ ಮೈತ್ರಿ ಮುಂದುವರಿಸಿದರೆ ಜೆಡಿಎಸ್‌ನ ಬೆಂಬ ಲ ಪಡೆ ಯುವ ಸಾಧ್ಯತೆಯಿದ್ದು, ಕಾಂಗ್ರೆಸ್‌ ಎಸ್‌ಡಿಪಿಐನೊಂದಿಗೆ ಅಥವಾ ಬಿಜೆಪಿಯನ್ನು ಸಮಾನ ಅಂತರದಲ್ಲಿ ದೂರ ಇಡುವ ಸಾಧ್ಯತೆ ಹೆಚ್ಚಿದೆ. ಜೆಡಿಎಸ್‌ ಕಾಂಗ್ರೆಸ್‌ ಆಡಳಿತಕ್ಕೆ ಬೆಂಬಲ ನೀಡುವ ನಿಟ್ಟಿನಲ್ಲಿ ಕಾದು ನೋಡುವ ತಂತ್ರವನ್ನು ಅನುಸರಿಸಿದೆ.

ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ ಅಬ್ದುಲ್‌ ಅಝೀಝ್ ಉಳ್ಳಾಲ್‌ ಮತ್ತು ಪಕ್ಷೇತರರಾಗಿ ಸ್ಪ ರ್ಧಿಸಿದ್ದ ಮುಸ್ತಾಕ್‌ ಪಟ್ಲ ಅವರು ಕಾಂಗ್ರೆಸ್‌ ಬೆಂಬಲ ನೀಡುವ ನಿಟ್ಟಿನಲ್ಲಿ ವಾರ್ಡ್‌ ನ ಕಾರ್ಯಕರ್ತರ ಜತೆ ಚರ್ಚಿಸಿ ನಿರ್ಧರಿಸಲಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್‌ಗೆ ಮುಳವಾದ ವಾರ್ಡ್‌ ಮರುವಿಂಗಡಣೆ
ಕಾಂಗ್ರೆಸ್‌ ಪ್ರಾಬಲ್ಯ ಹೊಂದಿದ್ದ ನಾಲ್ಕು ವಾರ್ಡ್‌ಗಳನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿದಾಗ ಎಂಟು ವಾರ್ಡ್‌ಗಳಾಗಿ ಮರು ವಿಂಗಡಣೆ ಮಾಡಿದ್ದು, ಇವುಗಳಲ್ಲಿ ನಾಲ್ಕು ವಾರ್ಡ್‌ಗಳಲ್ಲಿ ಮಾತ್ರ ಕಾಂಗ್ರೆಸ್‌ ಗೆಲುವು ಸಾಧಿಸಲು ಸಾಧ್ಯವಾಗಿದ್ದು, ಉಳಿದ ನಾಲ್ಕು ವಾರ್ಡ್‌ ಗಳಲ್ಲಿ ಎರಡು ಜೆಡಿಎಸ್‌, ಒಂದು ಎಸ್‌ಡಿಪಿಐ ಮತ್ತು ಒಂದು ಬಂಡಾಯ ಕಾಂಗ್ರೆಸ್‌ ಅಭ್ಯರ್ಥಿ ಪಾಲಾಗಿದೆ. ಈ ಬಾರಿ ಜೆಡಿಎಸ್‌ ಮತ್ತು ಎಸ್‌ಡಿಪಿಐ ಪ್ರಬಲ ಹೋರಾಟ ಕಾಂಗ್ರೆಸ್‌ ಬಹುಮತ ಸಂಖ್ಯೆ ತಲುಪಲು ಮುಳುವಾಗಿತ್ತು.

2018ರ ಅಕ್ಟೋಬರ್‌ನಲ್ಲಿ ಸ್ಥಳಿಯಾಡಳಿತ ಚುನಾವಣೆ ನಡೆದು ಸೆ. 3ರಂದು ಫಲಿತಾಂಶ ಪ್ರಕಟವಾಗಿತ್ತು. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಉಳ್ಳಾಲ ನಗರಸಭೆಗೆ ಹಿಂದುಳಿದ ವರ್ಗ 2ಬಿ ಮತ್ತು 2ಎ ಮೀಸಲಾತಿ ಬಂದಿತ್ತು. ಆದರೆ ರಾಜ್ಯದಲ್ಲಿ 10 ನಗರಸಭೆಯಲ್ಲಿ ಮೀಸಲಾತಿ ವಿರುದ್ಧ ಕೋರ್ಟ್‌ನಲ್ಲಿ ತಡೆಯಾಜ್ಞೆ ತಂದಿದ್ದರು. ಇದೇ ಸಂದರ್ಭ ಪಾಲಿಕೆ ಯಿಂದಲೂ ಅಧ್ಯಕ್ಷ, ಉಪಾಧ್ಯಕ್ಷ ವಿಚಾರದಲ್ಲಿ ಕೋರ್ಟ್‌ನಲ್ಲಿ ತಡೆಯಾಜ್ಞೆ ತಂದಿದ್ದರೂ ಈ ತಡೆಯಾಜ್ಞೆ ಜೂ. 2ಕ್ಕೆ ತೆರವಾಗಿದೆ. ಈಗ ನಗರಸಭೆಯ ತಡೆಯಾಜ್ಞೆ ತೆರವಾಗುವ ಆಶಾವಾದವನ್ನು ಕೌನ್ಸೆಲರ್‌ಗಳು ವ್ಯಕ್ತಪಡಿಸಿದ್ದಾರೆ.

20 ವರ್ಷಗಳ ಬಳಿಕ ಅತಂತ್ರ
1997ರಲ್ಲಿ ಉಳ್ಳಾಲ ನ.ಪಂ.ಆಗಿ ಮೇಲ್ದರ್ಜೆಗೇರಿದ ಬಳಿಕ ನಡೆದ ಪ್ರಥಮ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬಹುಮತದ ಕೊರತೆಯಿಂದ ಅತಂತ್ರ ಸ್ಥಿತಿ ನಿರ್ಮಾಣವಾಗಿತ್ತು. ಈಗ ನಾಲ್ಕು ಸ್ಥಾನಗಳನ್ನು ಪಡೆ ದಿದ್ದ ಜೆಡಿಎಸ್‌ ಕಾಂಗ್ರೆಸ್‌ಗೆ ಬೆಂಬಲ ನೀಡಿ ಉಪಾಧ್ಯಕ್ಷ ಸ್ಥಾ® ‌ವನ್ನು ಅಲಂಕರಿಸಿತ್ತು. ಇದೀಗ ಅದೇ ವಾತಾವರಣ ನಿರ್ಮಾಣ ವಾಗಿದ್ದು, 1997ರ ಘಟನೆ ಮರುಕಳಿಸುವ ಸಾಧ್ಯತೆ ಇದೆ.

ಮೀಸಲಾತಿ ಅನ್ವಯ ಆಡಳಿತ ರಚನೆ
ಕೋರ್ಟ್‌ನಲ್ಲಿ ಮೀಸಲಾತಿ ವಿಚಾರದಲ್ಲಿ ತಡೆಯಾಜ್ಞೆ ಇರುವುದರಿಂದ ಉಳ್ಳಾಲ ನಗರಸಭೆಯಲ್ಲಿ ಹೊಸ ಆಡಳಿತ ರಚನೆಗೆ ತಡೆ ಯಾಗಿದೆ. ಮೀಸಲಾತಿ ವಿಚಾರದಲ್ಲಿ ಅಲ್ಲಿ ಯಾವುದೇ ಸಮಸ್ಯೆ ಇಲ್ಲ ಕಾಂಗ್ರೆಸ್‌ನಲ್ಲಿ ಎಲ್ಲ ವರ್ಗದ ಸದಸ್ಯರಿರುವುದರಿಂದ ಸರಕಾರ ನೀಡಿ ಮೀಸಲಾ ತಿಯಂತೆ ಆಡಳಿತ ರಚನೆಯಾಗಲಿದೆ.
– ಯು.ಟಿ. ಖಾದರ್‌, ಜಿಲ್ಲಾ ಉಸ್ತುವಾರಿ ಸಚಿವರು

 ಡಿಸಿ ಮಾರ್ಗದರ್ಶನದಲ್ಲಿ ಆಡಳಿತ
ರಾಜ್ಯದಲ್ಲಿ ಕಳೆದ 2018ರ ಸಪ್ಟೆಂಬರ್‌ನಿಂದ ಸ್ಥಳಿಯಾಡಳಿತ ಸಂಸ್ಥೆಗಳ ಅಧ್ಯಕ್ಷ , ಉಪಾಧ್ಯಕ್ಷರ ಆಯ್ಕೆಯ ಕುರಿತು ಕೋರ್ಟ್‌ ತಡೆಯಾಜ್ಞೆ ಯಿರುವುದರಿಂದ ಉಳ್ಳಾಲದಲ್ಲೂ ನೂತನ ಆಡಳಿತ ಅಧಿಕಾರಕ್ಕೆ ಬಂದಿಲ್ಲ. ಕಳೆದ 9 ತಿಂಗಳಿನಿಂದ ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಉಳ್ಳಾಲ ನಗರಸಭೆಯ ಎಲ್ಲ ಕಾರ್ಯಗಳು ನಡೆಯುತ್ತಿದ್ದು, ಹೊಸ ಆಡಳಿತ ಬರುವವರೆಗೆ ಯಥಾಸ್ಥಿತಿ ಮುಂದುವರೆಯಲಿದೆ.
– ಶ್ರೀನಿವಾಸ ಮೂರ್ತಿ, ಮುಖ್ಯಾಧಿಕಾರಿ, ಉಳ್ಳಾಲ ನಗರಸಭೆ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.