Ullala; ತಲಪಾಡಿ ಗಡಿಭಾಗದಲ್ಲಿ ಆರೋಗ್ಯ ಇಲಾಖೆಯಿಂದ ಕೋವಿಡ್ ಜಾಗೃತಿ ಕಾರ್ಯಕ್ರಮ
Team Udayavani, Dec 21, 2023, 11:56 AM IST
ಉಳ್ಳಾಲ: ಕೇರಳದಲ್ಲಿ ಕೋವಿಡ್ ರೂಪಾಂತರಿ ಜೆಎನ್ 1 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಗಡಿಭಾಗವಾದ ತಲಪಾಡಿಯಲ್ಲಿ ಆರೋಗ್ಯ ಇಲಾಖೆ ಮತ್ತು ತಲಪಾಡಿ ಗ್ರಾಮ ಪಂಚಾಯತ್ ನಿಂದ ಜಾಗೃತಿ ಕಾರ್ಯಕ್ರಮ ಗುರುವಾರದಿಂದ ಆರಂಭವಾಗಿದೆ.
ಕೋಟೆಕಾರು ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ, ಸಮುದಾಯ ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಗಡಿಯಲ್ಲಿ ಬ್ಯಾನರ್ ಹಾಕಿ ಜಾಗೃತಿಯೊಂದಿಗೆ ಕೇರಳದಿಂದ ಆಗಮಿಸುವ ಪ್ರಯಾಣಿಕರಿಗೆ ಮಾಹಿತಿ ನೀಡುತ್ತಿದ್ದಾರೆ.
ಧ್ವನಿವರ್ಧಕ ಮೂಲಕ ಜಾಗೃತಿ: ತಲಪಾಡಿ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಗಡಿಭಾಗದಲ್ಲಿ ಧ್ವನಿವರ್ಧಕದ ಮೂಲಕ ಜಾಗೃತಿ ಮೂಡಿಸುತ್ತಿದ್ದು, ಹಿರಿಯರು, ಗರ್ಭಿಣಿಯರು, ಆರೋಗ್ಯ ಸಮಸ್ಯೆ ಇರುವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಶೀತ ಕಫ ಸೇರಿದಂತೆ ಆರೋಗ್ಯ ಸಮಸ್ಯೆ ಇರುವವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕು, ಗಡಿ ಪ್ರದೇಶದಲ್ಲಿ ಕೇರಳದಿಂದ ಬಂದಿರುವ ಪ್ರಯಾಣಿಕರು ಗುಂಪು ಸೇರದೆ ಅಂತರ ಕಾಯ್ದುಕೊಳ್ಳಬೇಕು ಎಂದು ಜಾಗೃತಿ ಮೂಡಿಸಲಾಗುತ್ತಿದೆ.
ಈ ಕುರಿತು ಕೋಟೆಕಾರು ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಡಾ. ಗೋಪಿ ಪ್ರಕಾಶ್ ಮಾಹಿತಿ ನೀಡಿ, ಆರೋಗ್ಯ ಇಲಾಖೆಯ ಗೈಡ್ ಲೈನ್ಸ್ ನಂತೆ ಗಡಿ ಭಾಗದಲ್ಲಿ ಜಾಗೃತಿ ಕಾರ್ಯ ನಡೆಸುತ್ತಿದ್ದು ಕೇರಳ ಭಾಗದಿಂದ ಬರುವ ಪ್ರಯಾಣಿಕರಿಗೆ ಸೂಚನೆಗಳನ್ನು ನೀಡಲಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ