ಉಳ್ಳಾಲದಿಂದ ಅಪಹರಿಸಿ ಚಾರ್ಮಾಡಿಯಲ್ಲಿ ಯುವಕನ ಕೊಲೆಗೆ ಯತ್ನ: ಅದೃಷ್ಟ ಚೆನ್ನಾಗಿತ್ತು ನೋಡಿ..

Team Udayavani, May 26, 2022, 10:10 PM IST

ಉಳ್ಳಾಲದಲ್ಲಿ ಅಪಹರಿಸಿ ಚಾರ್ಮಾಡಿಯಲ್ಲಿ ಯುವಕನ ಕೊಲೆಗೆ ಯತ್ನ :ಅದೃಷ್ಟ ಚೆನ್ನಾಗಿತ್ತು ನೋಡಿ..

ಉಳ್ಳಾಲ : ಉಳ್ಳಾಲದ ಯುವಕನನ್ನು ಕಾರಿನಲ್ಲಿ ಅಪಹರಣ ನಡೆಸಿದ ಐವರ ತಂಡ ಚಾರ್ಮಾಡಿ ಘಾಟಿಯಲ್ಲಿ ಕೊಲೆಗೆ ಯತ್ನಿಸಿರುವ ಘಟನೆ ಬುಧವಾರ ತಡರಾತ್ರಿ ವೇಳೆ ನಡೆದಿದೆ. ತಂಡದಿಂದ ತಪ್ಪಿಸಿಕೊಂಡ ಯುವಕ ರಿಕ್ಷಾ ಮೂಲಕ ಉಳ್ಳಾಲ ತಲುಪಿ ತೊಕ್ಕೊಟ್ಟು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ .

ಉಳ್ಳಾಲ ದರ್ಗಾ ಬಳಿಯ ಕಬೀರ್‌ (26) ಅಪಹರಣಕ್ಕೊಳಗಾದ ಯುವಕ. ಸದಕತ್ತುಲ್ಲಾ ಯಾನೆ ಪೊಪ್ಪ, ಉಗ್ರಾಣಿ ಮುನ್ನ, ಇಮ್ಮಿ ಯಾನೆ ಇರ್ಷಾದಿ ಹಾಗೂ ತಾಹೀಬ್‌, ಅಸ್ಗರ್, ಇಬ್ಬಿ ಸೇರಿಕೊಂಡು ಈ ಕೃತ್ಯ ಎಸಗಿದ್ದಾರೆ ಎಂದು ಕಬೀರ್‌ ಆರೋಪಿಸಿದ್ದಾರೆ.

ಘಟನೆ ವಿವರ
ಘಟನೆಯ ಕುರಿತು ಕಬೀರ್‌ ಆರೋಪಿಸುವಂತೆ ಮೇ 25ರ ರಾತ್ರಿ 9ರ ಸುಮಾರಿಗೆ ಕೋಟೆಪುರ ಸಮೀಪ ಸಹೋದರನನ್ನು ಬಿಟ್ಟು, ಉಳ್ಳಾಲ ದರ್ಗಾ ಬಳಿಯ ತನ್ನ ಮನೆಯತ್ತ ಹಿಂತಿರುಗುತ್ತಿದ್ದಾಗ ನನ್ನ ಬೈಕ್‌ಗೆ ಅಬ್ಬಕ್ಕ ವೃತ್ತದ ಬಳಿ ಕಾರೊಂದು ಢಿಕ್ಕಿ ಹೊಡೆದಿದ್ದು, ನೆಲಕ್ಕುರುಳಿದ ನನ್ನನ್ನು ಕಾರಿನಿಂದ ಇಳಿದ ತಂಡ ಹಿಡಿಯಲು ಯತ್ನಿಸಿದಾಗ, ನನ್ನ ಕಾಲಿಗೆ ರಾಡ್‌ ಎಸೆದು ಓಡದಂತೆ ತಡೆದು, ತಲವಾರಿನ ಹಿಂಭಾಗದಿಂದ ತಲೆಯ ಹಿಂಭಾಗಕ್ಕೆ ಬಡಿದು ಬಳಿಕ ಕಾರೊಳಗಡೆ ಹಾಕಿ ಅಪಹರಿಸಿದ್ದಾರೆ.

ಕಾರಿನಲ್ಲಿದ್ದ ಐವರು ಅಪಹರಣಕಾರರು ಟ್ಯಾಬ್ಲೆಟ್‌ ಸ್ಟ್ರಿಪ್‌ ಹಿಡಿದುಕೊಂಡು ಸಂಪೂರ್ಣ ನಶೆಯಲ್ಲಿದ್ದರು. ದಾರಿಯುದ್ದಕ್ಕೂ ಟ್ಯಾಬ್ಲೆಟ್‌ ಸೇವಿಸುತ್ತಿದ್ದ ಅವರಿಗೆ ನನ್ನನ್ನು ಕೊಲೆ ಮಾಡುವಂತೆ ದೂರವಾಣಿ ಕರೆ ಬಂದಿದ್ದು, ಕಾರಿನ ಒಳಗಡೆ ಇದ್ದ ಐವರ ತಂಡದಲ್ಲಿ ಇಬ್ಬರು ಡ್ರಾಗರ್‌ ಅನ್ನು ಕುತ್ತಿಗೆಗೆ ಹಿಡಿದಿದ್ದರು. ದೂರದ ಚಾರ್ಮಾಡಿ ಘಾಟ್‌ ಸಮೀಪ ಕಾರು ನಿಲ್ಲಿಸಿದ ತಂಡ ಡ್ರಾಗರ್‌ ಮೂಲಕ ಕುತ್ತಿಗೆಗೆ ಇರಿಯಲು ಒಬ್ಟಾತ ಯತ್ನಿಸಿದ್ದು, ಆತನ ಕುತ್ತಿಗೆ ಹಿಡಿದು ದೂಡಿ ಕಾರಿನಿಂದ ಹೊರಗಿಳಿದು ತಪ್ಪಿಸಿಕೊಂಡೆ. ಈ ಸಂದರ್ಭದಲ್ಲಿ ಹೊಂಡವೊಂದಕ್ಕೆ ಉರುಳಿ ಗಾಯವಾಗಿದೆ. ಅಲ್ಲಿಂದ ಕಾಡಿನ ದಾರಿಯಲ್ಲಿ ಓಡಿ ಮನೆಯೊಂದರಲ್ಲಿ ನಡೆದ ಘಟನೆ ತಿಳಿಸಿದ್ದು, ಮನೆಯವರು ಟೀಶರ್ಟ್‌, ಚಪ್ಪಲಿಯನ್ನು ಒದಗಿಸಿದ್ದು, ಬಳಿಕ ರಿಕ್ಷಾವೊಂದರಲ್ಲಿ ಮಂಗಳೂರು ತಲುಪಿದೆ ಎಂದು ದೂರಿನಲ್ಲಿ ತಿಳಿಸಿದ್ದಾನೆ.

ಇದನ್ನೂ ಓದಿ : ಮಂಗಳೂರು : ಚೆಕ್‌ ಬೌನ್ಸ್‌ ಪ್ರಕರಣ ; 88 ಲ.ರೂ. ಪಾವತಿಸಲು ಆದೇಶ, ತಪ್ಪಿದರೆ 6 ತಿಂಗಳ ಸಜೆ 

ಫಿಶ್‌ಮಿಲ್‌ ವಿಚಾರ
ಕೋಟೆಪುರದಲ್ಲಿರುವ ಫಿಶ್‌ ಆಯಿಲ್‌ ಮಿಲ್‌ನಲ್ಲಿ ಪರಿಸರಕ್ಕೆ ಸಬಂಧಿಸಿಸ ಸಮಸ್ಯೆಯ ಹಿನ್ನಲೆಯಲ್ಲಿ ಸ್ಥಳೀಯ ನಿವಾಸಿಗಳು ಕೋಟೆಪುರ ನಿವಾಸಿಗಳು ಜಿಲ್ಲಾಡಳಿತಕ್ಕೆ ದೂರು ನೀಡಿದ್ದು, ಈ ವಿಚಾರದಲ್ಲಿ ತಡೆಯಾಜ್ಞೆ ಬಂದಿತ್ತು. ಹೋರಾಟದಲ್ಲಿ ಭಾಗವಹಿಸಿದ್ದ ಒಂದು ತಂಡ ಫಿಶ್‌ಮಿಲ್‌ನಿಂದ ಹಣ ಪಡೆದು ತಡೆಯಾಜ್ಞೆಯನ್ನು ಹಿಂಪಡೆಯುವಂತೆ ಮಾಡಿದ್ದರು. ಈ ವಿಚಾರದಲ್ಲಿ ಪ್ರಶ್ನಿಸಿದಕ್ಕೆ ಕೊಲೆ ನಡೆಸಲು ಆ ತಂಡ ಅಪಹರಿಸಿತ್ತು ಎಂದು ಹೇಳಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

ಕೊಟ್ಟಿಗೆಹಾರ : ಚಲಿಸುತ್ತಿದ್ದ ಕಾರಿನ ಮೇಲೆ ಬಿತ್ತು ಭಾರಿ ಗಾತ್ರದ ಮರದ ಕೊಂಬೆ…

ಕೊಟ್ಟಿಗೆಹಾರ : ಚಲಿಸುತ್ತಿದ್ದ ಕಾರಿನ ಮೇಲೆ ಬಿತ್ತು ಭಾರಿ ಗಾತ್ರದ ಮರದ ಕೊಂಬೆ…

cm-bommai

ಸಿದ್ದರಾಮಯ್ಯರನ್ನು ನೋಡಿದರೆ ನನಗೆ ತುಂಬಾ ಕನಿಕರ ಬರುತ್ತದೆ: ಸಿಎಂ ಬೊಮ್ಮಾಯಿ

rain

ಮಳೆ ರೆಡ್ ಅಲರ್ಟ್; ದಕ್ಷಿಣ ಕನ್ನಡ, ಉಡುಪಿಯಲ್ಲಿ ಶಾಲಾ-ಕಾಲೇಜುಗಳಿಗೆ ನಾಳೆ ರಜೆ

1-sadsad

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ: ಕ್ರಮಕ್ಕೆ ಉಡುಪಿ ಜಿಲ್ಲಾಡಳಿತದಿಂದ ದೂರು

dr-sdk

ಹೆಣ್ಣುಮಕ್ಕಳಿಗೆ ಉಚಿತವಾಗಿ ಮುಟ್ಟಿನ ಕಪ್‌ ವಿತರಿಸುವ ಚಿಂತನೆ: ಡಾ.ಕೆ.ಸುಧಾಕರ್‌

ಲೈಂಗಿಕ ಕ್ರಿಯೆಗೆ ಸಹಕರಿಸದ ಮಹಿಳೆಗೆ ಬೆಂಕಿ ಹಚ್ಚಿದ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ

ಲೈಂಗಿಕ ಕ್ರಿಯೆಗೆ ಸಹಕರಿಸದ ಮಹಿಳೆಗೆ ಬೆಂಕಿ ಹಚ್ಚಿದ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ

somashekar st

ಚಾಮುಂಡಿ ಬೆಟ್ಟದಲ್ಲಿರುವವರನ್ನು ಒಕ್ಕಲೆಬ್ಬಿಸುವ ಯಾವುದೇ ಪ್ರಸ್ತಾಪ ಇಲ್ಲ; ಸ್ಪಷ್ಟನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rain

ಮಳೆ ರೆಡ್ ಅಲರ್ಟ್; ದಕ್ಷಿಣ ಕನ್ನಡ, ಉಡುಪಿಯಲ್ಲಿ ಶಾಲಾ-ಕಾಲೇಜುಗಳಿಗೆ ನಾಳೆ ರಜೆ

6UT-khadar

ಸಾರ್ವಜನಿಕರಿಂದ ಅಹವಾಲು ಸಲ್ಲಿಕೆ: ಶಾಸಕ ಯು.ಟಿ.ಖಾದರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ

4death

ನೇತ್ರಾವತಿ ನೀರುಪಾಲಾದ ಯುವಕನ ಶವ ಕೋಟೆಪುರದಲ್ಲಿ ಪತ್ತೆ

ಮಂಗಳೂರಿನಿಂದ ರಾಮೇಶ್ವರ, ಭಾವ್‌ನಗರಕ್ಕೆ ಹೊಸ ರೈಲು

ಮಂಗಳೂರಿನಿಂದ ರಾಮೇಶ್ವರ, ಭಾವ್‌ನಗರಕ್ಕೆ ಹೊಸ ರೈಲು

ಬೂತ್‌ ಮಟ್ಟದಿಂದ ಪಕ್ಷ ಸಂಘಟನೆ: ಮಧು ಬಂಗಾರಪ್ಪ

ಬೂತ್‌ ಮಟ್ಟದಿಂದ ಪಕ್ಷ ಸಂಘಟನೆ: ಮಧು ಬಂಗಾರಪ್ಪ

MUST WATCH

udayavani youtube

ದೇವಸ್ಥಾನದ ಆವರಣದೊಳಕ್ಕೆ ಉಕ್ಕಿ ಹರಿದ ನದಿಗಳು!

udayavani youtube

ಚಂದ್ರಶೇಖರ ಗುರೂಜಿ ಹತ್ಯೆ : ಕೇವಲ 4 ಗಂಟೆಯಲ್ಲಿ ಹಂತಕರ ಪತ್ತೆ

udayavani youtube

Lightings ನೋಡಿದಾಗ Shock ಆದೆ! – ಪ್ರೇಮಾ

udayavani youtube

ಚಂದ್ರಶೇಕರ್‌ ಗುರೂಜಿ ಹತ್ಯೆ: ಹಂತಕರ ಬಂಧನ

udayavani youtube

ಮಡಿಕೇರಿ : ಧಾರಾಕಾರ ಮಳೆಗೆ ರಸ್ತೆಗೆ ಉರುಳಿ ಬಿದ್ದ ಬಂಡೆ ಕಲ್ಲು, ತಪ್ಪಿದ ಭಾರಿ ದುರಂತ

ಹೊಸ ಸೇರ್ಪಡೆ

ಕೊಟ್ಟಿಗೆಹಾರ : ಚಲಿಸುತ್ತಿದ್ದ ಕಾರಿನ ಮೇಲೆ ಬಿತ್ತು ಭಾರಿ ಗಾತ್ರದ ಮರದ ಕೊಂಬೆ…

ಕೊಟ್ಟಿಗೆಹಾರ : ಚಲಿಸುತ್ತಿದ್ದ ಕಾರಿನ ಮೇಲೆ ಬಿತ್ತು ಭಾರಿ ಗಾತ್ರದ ಮರದ ಕೊಂಬೆ…

cm-bommai

ಸಿದ್ದರಾಮಯ್ಯರನ್ನು ನೋಡಿದರೆ ನನಗೆ ತುಂಬಾ ಕನಿಕರ ಬರುತ್ತದೆ: ಸಿಎಂ ಬೊಮ್ಮಾಯಿ

rain

ಮಳೆ ರೆಡ್ ಅಲರ್ಟ್; ದಕ್ಷಿಣ ಕನ್ನಡ, ಉಡುಪಿಯಲ್ಲಿ ಶಾಲಾ-ಕಾಲೇಜುಗಳಿಗೆ ನಾಳೆ ರಜೆ

1-sadsad

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ: ಕ್ರಮಕ್ಕೆ ಉಡುಪಿ ಜಿಲ್ಲಾಡಳಿತದಿಂದ ದೂರು

dr-sdk

ಹೆಣ್ಣುಮಕ್ಕಳಿಗೆ ಉಚಿತವಾಗಿ ಮುಟ್ಟಿನ ಕಪ್‌ ವಿತರಿಸುವ ಚಿಂತನೆ: ಡಾ.ಕೆ.ಸುಧಾಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.