ಉಳ್ಳಾಲ: 47 ಮನೆ ಅಪಾಯದಲ್ಲಿ, ಒಂದು ಸಂಪೂರ್ಣ ಹಾನಿ

Team Udayavani, Oct 13, 2018, 10:57 AM IST

ullal.jpg

ಉಳ್ಳಾಲ: ಚಂಡಮಾರುತ ಪ್ರಭಾವದಿಂದ ಮೂರು ದಿನಗಳಿಂದ ಸಮುದ್ರದಲ್ಲಿ ಕಾಣಿಸಿಕೊಂಡಿರುವ ಬಿರುಸು ಶುಕ್ರವಾರವೂ ಮುಂದುವರಿದಿತ್ತು. ಬೃಹತ್‌ ಅಲೆಗಳ ಅಬ್ಬರಕ್ಕೆ ಝೊಹರಾ ರಹೀಮ್‌ ಅವರ ಮನೆ ಸಂಪೂರ್ಣ ಹಾನಿಯಾಗಿದೆ. ಇನ್ನೂ 47 ಮನೆಗಳು ಅಪಾಯದಲ್ಲಿವೆ.

ಉಳ್ಳಾಲ ಕೈಕೋ, ಕಿಲೆರಿಯಾ ನಗರ, ಸುಭಾಷ್‌ನಗರದಲ್ಲಿ ಅಲೆಗಳು ಮನೆಗಳಿಗೆ ಅಪ್ಪಳಿಸುತ್ತಿವೆ. ಕೈಕೋದಲ್ಲಿ ಝೋಹರಾ ರಹೀಮ್‌ ಮನೆ ಸಮುದ್ರ ಪಾಲಾಗಿದೆ. ಸೋಮೇಶ್ವರ ಉಚ್ಚಿಲದ ಪೆರಿಬೈಲು ಪ್ರದೇಶದಲ್ಲೂ ಅಲೆಗಳು ರಸ್ತೆ ಬದಿಗೆ ಅಪ್ಪಳಿಸುತ್ತಿದ್ದು, ಮೂರು ಮನೆಗಳಿಗೆ ಹಾನಿಯಾಗಿದೆ.

ಸಮುದ್ರ ಉಬ್ಬರ: ಜನರಿಗೆ ಆತಂಕ 
ಉಳ್ಳಾಲ ಮತ್ತು ಸೋಮೇಶ್ವರದಲ್ಲಿ ಸಮುದ್ರ ಬಿರುಸುಗೊಂಡಿದ್ದು, ಅಲೆಗಳು ಮನೆಗಳಿಗೆ ಅಪ್ಪಳಿಸುತ್ತಿವೆ. ಶುಕ್ರವಾರ ಮುಂಜಾವ ಕೈಕೋ ಇಂದಿರಾನಗರದಲ್ಲಿ 16 ಮನೆಗಳಿಗೆ ಅಲೆಗಳು ಅಪ್ಪಳಿಸಿ ಜನರು ಆತಂಕ
ಗೊಂಡು ಹೊರಗೋಡಿ ಬಂದಿದ್ದರು.

ಅಪಾಯದ ಸೂಚನೆ ನೀಡಲಾಗಿತ್ತು
ಉಳ್ಳಾಲ ಕೈಕೋ, ಕಿಲೆರಿಯಾನಗರ, ಸುಭಾಷ್‌ನಗರದಲ್ಲಿ ಸಮುದ್ರ ತಟದ 167 ಮನೆಗಳಲ್ಲಿ 47 ಮನೆಗಳನ್ನು ಅತ್ಯಂತ ಅಪಾಯಕಾರಿ ಎಂದು ಗುರುತಿಸಿ, ಮನೆ ಖಾಲಿ ಮಾಡಿ ಬೇರೆಡೆಗೆ ಸ್ಥಳಾಂತರಗೊಳ್ಳುವಂತೆ ಸೂಚಿಸಲಾಗಿತ್ತು ಎಂದು ನಗರಸಭಾ ಪೌರಾಯುಕ್ತೆ ವಾಣಿ ಆಳ್ವ ಮಾಹಿತಿ ನೀಡಿದ್ದಾರೆ. ಈಗಾಗಲೇ ಹೆಚ್ಚಿನ ಮನೆಗಳ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಕೌನ್ಸಿಲರ್‌ ಮಹಮ್ಮದ್‌ ಮುಕ್ಕಚ್ಚೇರಿ, ಬಶೀರ್‌ ಕೈಕೋ, ಪೌರಾಯುಕ್ತೆ ವಾಣಿ ಆಳ್ವ, ಗ್ರಾಮಕರಣಿಕ ಪ್ರಮೋದ್‌ ಮತ್ತಿತರರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಮುಖ್ಯಮಂತ್ರಿ ಬಳಿ ನಿಯೋಗ
ಕೈಕೋ, ಮುಕ್ಕಚ್ಚೇರಿ, ಕಿಲೆರಿಯಾ ನಗರದಲ್ಲಿ ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ನೀಡುವಂತೆ ಜಾತ್ಯತೀತ ಜನತಾದಳದ ಉಳ್ಳಾಲ ವಿಧಾನಸಭಾ ಕ್ಷೇತ್ರದಿಂದ ನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ನಿಯೋಗದಲ್ಲಿ ಯು.ಎಚ್‌. ಫಾರೂಕ್‌, ನಝೀರ್‌ ಉಳ್ಳಾಲ, ಅಶ್ರಫ್‌ ಬಾವ ಕೋಡಿ, ಮಹಮ್ಮದ್‌ ಬಶೀರ್‌ ಕೈಕೋ, ಎವೆರಸ್ಟ್‌ ಮುಸ್ತಾಫ ಮತ್ತಿತರ ಜೆಡಿಎಸ್‌ ಮುಖಂಡರು ಇದ್ದರು.

ಸುರತ್ಕಲ್‌, ಮಲ್ಪೆ: ಕಡಲು ಶಾಂತ
ಸುರತ್ಕಲ್‌/ಮಲ್ಪೆ: ಮೂರ್‍ನಾಲ್ಕು ದಿನಗಳಿಂದ ಉಗ್ರ ಸ್ವರೂಪ ತಾಳಿದ್ದ ಇಲ್ಲಿನ ಸಮುದ್ರ ಶುಕ್ರವಾರ ಶಾಂತಗೊಂಡಿದೆ. ಬೆಳಗಿನಿಂದ ಸಹಜ ಸ್ಥಿತಿಗೆ ಮರಳಿದೆ. ನಾಲ್ಕು ದಿನಗಳಿಂದ ಸುರತ್ಕಲ್‌ ಮತ್ತು ಮಲ್ಪೆ ಸಮುದ್ರ ತೀರ ಮರಳು ಕೊರೆತದಿಂದ ಆಳವಾಗಿದ್ದು, ಬಂಡೆ ಕಲ್ಲುಗಳನ್ನು ಸಮುದ್ರ ಆವರಿಸಿದೆ. 

ಶನಿವಾರದಿಂದ ಯಥಾಸ್ಥಿತಿಗೆ
ಚಂಡಮಾರುತ ಮತ್ತು ಸುಳಿಗಾಳಿಯಿಂದಾಗಿ ಅರಬಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿತ್ತು. ಶನಿವಾರದಿಂದ ಕಡಲಿನಬ್ಬರ ಇಳಿಮುಖವಾಗಲಿದೆ. ರವಿವಾರದಿಂದ ಸಮುದ್ರ ಸಾಮಾನ್ಯ ಸ್ಥಿತಿಗೆ ಬರಲಿದೆ ಎಂದು ಬೆಂಗಳೂರಿನ ಹವಾಮಾನ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.