
ಉಳ್ಳಾಲ: 24 ಪುಟಗಳ ಡೆತ್ ನೋಟ್ ಬರೆದಿಟ್ಟು ನೂತನ ಮನೆಯಲ್ಲೇ ಆತ್ಮಹತ್ಯೆಗೆ ಶರಣಾದ ಯುವತಿ
Team Udayavani, Jun 8, 2023, 12:28 PM IST

ಉಳ್ಳಾಲ: 24 ಪುಟಗಳ ಡೆತ್ ನೋಟ್ ಬರೆದಿಟ್ಟು ನೂತನ ಮನೆ ಖರೀದಿಸಿದ ಯುವತಿಯೋರ್ವಳು ಅದ್ಧೂರಿ ಗೃಹ ಪ್ರವೇಶಗೈದ ಐದೇ ದಿವಸದಲ್ಲಿ ಅದೇ ಮನೆ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ.
ಮೂಲತ: ಫರಂಗಿಪೇಟೆಯ ಸದ್ಯ ಕುಂಪಲ ಚಿತ್ರಾಂಜಲಿ ನಗರದ ನಿವಾಸಿಯಾಗಿದ್ದ ಅಶ್ವಿನಿ ಬಂಗೇರ (25) ಆತ್ಮಹತ್ಯೆಗೈದ ಯುವತಿ. ನಿನ್ನೆ ರಾತ್ರಿ ಅಶ್ವಿನಿ ತನ್ನ ಸ್ನೇಹಿತೆ ಜೊತೆ ಚಾಟ್ ಮಾಡಿದ್ದಲೆನ್ನಲಾಗಿದ್ದು ಸ್ನೇಹಿತೆ ಬೆಳಿಗ್ಗೆ ಬಂದು ಕೋಣೆಯ ಬಾಗಿಲು ಒಡೆದು ನೋಡಿದಾಗ ಅಶ್ವಿನಿ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದು ಆತ್ಮ ಹತ್ಯೆಗೈದಿದ್ದು ಬೆಳಕಿಗೆ ಬಂದಿದೆ.
ಅಶ್ವಿನಿ ಬರೆದ 24 ಪುಟಗಳ ಡೆತ್ ನೋಟ್ ಪೊಲೀಸರಿಗೆ ದೊರೆತಿದೆ. ಡೆತ್ ನೋಟಲ್ಲಿ ತಾನು ಮನೆ ಖರೀದಿಸಿ ಮೋಸ ಹೋಗಿದ್ದು ಬ್ಯಾಂಕ್ ಅಧಿಕಾರಿಗಳು ಬಂದು ಪೀಡಿಸುತ್ತಿರುವ ಬಗ್ಗೆ ಉಲ್ಲೇಖಿಸಲಾಗಿದೆ ಎಂದು ವರದಿಯಾಗಿದೆ. ಅಶ್ವಿನಿ ಸಾಮಾನ್ಯ ಕುಟುಂಬದವಲಾಗಿದ್ದು ವಿದೇಶದಲ್ಲಿ ಉದ್ಯೋಗದಲ್ಲಿದ್ದು ಒಂದೂವರೆ ತಿಂಗಳ ಹಿಂದೆ ಊರಿಗೆ ಬಂದಿದ್ದಳು. ಕುಂಪಲದ ಚಿತ್ರಾಂಜಲಿ ನಗರದಲ್ಲಿ ಸಂಗೀತ ಎಂಬವರಿಂದ ಅಶ್ವಿನಿ ಮನೆಯೊಂದನ್ನ ಖರೀದಿಸಿದ್ದು ಕಳೆದ ಜೂ.3 ರಂದು ಗೃಹ ಪ್ರವೇಶ ಮಾಡಿ ತಾಯಿ ದೇವಕಿ, ದೊಡ್ಡಮ್ಮನ ಇಬ್ಬರು ಗಂಡು ಮಕ್ಕಳೊಂದಿಗೆ ನೆಲೆಸಿದ್ದರೆನ್ನಲಾಗಿದೆ.
ಡೆತ್ ನೋಟಲ್ಲಿ ಅಶ್ವಿನಿ ತನ್ನ ಪ್ರಿಯಕರನ ಹೆಸರು ಉಲ್ಲೇಖಿಸಿ ಐ ಲವ್ ಯೂ ಅಂತ ಬರೆದಿದ್ದು ತಾನು ಬಳಸುತ್ತಿದ್ದ ಐ ಫೋನನ್ನ ಆತನಿಗೆ ನೀಡಬೇಕೆಂದು ಹೇಳಿದ್ದಾಳೆ. ಅಶ್ವಿನಿಯ ತಾಯಿ ಮಗಳನ್ನ ನೆನೆದು ಮನೆಯೊಳಗಡೆ ಬಿದ್ದು ಹೊರಳಾಡುತ್ತಿರುವ ದೃಶ್ಯ ಮನಕಲಕುವಂತಿತ್ತು.
ಹಲವು ಸಂಕಷ್ಟಗೊಳಗಾದ ಅಶ್ವಿನಿ ಖಿನ್ನತೆಗೊಳಗಾಗಿ ಆತ್ಮ ಹತ್ಯೆಗೈದಿರುವುದಾಗಿ ಪೊಲೀಸರು ಶಂಕಿಸಿದ್ದಾರೆ. ಮೃತ ದೇಹವನ್ನು ಉಳ್ಳಾಲ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾಣಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LABತಪ್ಪಲಿದೆ ಜಿಲ್ಲಾಸ್ಪತ್ರೆ ಅಲೆದಾಟ: ರೋಗ ಪರೀಕ್ಷೆಗೆ ತಾಲೂಕು ಆಸ್ಪತ್ರೆಗಳಲ್ಲೂ ಪ್ರಯೋಗಾಲಯ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Fraud Case ಮೆಸ್ ಮ್ಯಾನೇಜರ್, ಸಿಬಂದಿಯಿಂದ ಮಾಲಕರಿಗೆ 30 ಲಕ್ಷ ರೂ. ವಂಚನೆ

CCB Police ಕೊಲೆಗೆ ಸಂಚು ರೂಪಿಸುತ್ತಿದ್ದ ಇಬ್ಬರ ಬಂಧನ

Karnataka Bandh; ಕರಾವಳಿಯಲ್ಲಿ ಸಂಘಟನೆಗಳಿಂದ ನೈತಿಕ ಬೆಂಬಲ; ಬಸ್ ಸಂಚಾರ ಎಂದಿನಂತೆ
MUST WATCH
ಹೊಸ ಸೇರ್ಪಡೆ

Sirsi: ಇಂಡಿಯಾದ ಮೈತ್ರಿಗಾಗಿ ರಾಜ್ಯದ ಹಿತ ಬಲಿ ಕೊಡಲಾಗುತ್ತಿದೆ…: ಮಾಜಿ ಸ್ಪೀಕರ್

Karnataka Bandh: ಕಾವೇರಿಗಾಗಿ ಕಾಫಿನಾಡಲ್ಲಿ ತೀವ್ರಗೊಂಡ ಹೋರಾಟ.. ಅರೆಬೆತ್ತಲೆ ಉರುಳು ಸೇವೆ

Mysore: ಮಾವುತರು ಮತ್ತು ಕಾವಾಡಿಗರ ಕುಟುಂಬದವರಿಗೆ ಉಪಹಾರ ಕೂಟ

Totapuri 2 review; ತೋತಾಪುರಿಯ ‘ಘಮ’ ಮತ್ತು ಕಾಡುವ ‘ಸುಮ’!

Pakistani Tv Show: ಟಿವಿ ಚಾನೆಲ್ ನ ಲೈವ್ ಶೋನಲ್ಲೇ ಪಾಕ್ ಮುಖಂಡರ ಮಾರಾಮಾರಿ!