ತ್ರಿವಳಿ ವಿದ್ಯಾರ್ಥಿಗಳ ವಿಶಿಷ್ಟ ಸಾಧನೆ

Team Udayavani, May 21, 2018, 3:57 PM IST

21-may-19.jpg

ಮಂಗಳೂರು: ಭಾಗಶಃ ಅಂಧತ್ವ ಇದ್ದರೂ ಅದನ್ನು ಮೆಟ್ಟಿ ನಿಂತು ಎಸೆಸೆಲ್ಸಿಯಲ್ಲಿ ವಿಶಿಷ್ಟ ಶ್ರೇಣಿಯೊಂದಿಗೆ ಉತ್ತೀರ್ಣರಾದ, ಒಂದೇ ಮನೆಯ ಮೂವರು ವಿದ್ಯಾರ್ಥಿಗಳ ಯಶೋಗಾಥೆಯಿದು.

ಕಾಟಿಪಳ್ಳ ಸರಕಾರಿ ಸಂಯುಕ್ತ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಜೀವನ್‌, ಜಯೇಶ್‌ ಮತ್ತು ಜಿತೇಶ್‌ ಈ ಸಾಧಕ ವಿದ್ಯಾರ್ಥಿಗಳು. ಮೂವರೂ ಕಾಟಿಪಳ್ಳ ಐದನೇ ಬ್ಲಾಕ್‌ ನಿವಾಸಿಗಳು. ಜೀವನ್‌ ಮತ್ತು ಜಯೇಶ್‌ ತಲಾ 541 ಅಂಕ ಪಡೆದಿದ್ದರೆ ಜಿತೇಶ್‌ 518 ಅಂಕ ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಮೂವರಿಗೂ ಭಾಗಶಃ ಅಂಧತ್ವ ಇದೆ, ಆದರೆ ಸಾಧನೆಗೆ ದೃಷ್ಟಿ ಸಮಸ್ಯೆ ಅಡ್ಡಿಯಲ್ಲ ಎಂಬುದನ್ನು ಶ್ರುತಪಡಿಸಿದ್ದಾರೆ. ಈ ಮಕ್ಕಳ ತಾಯಿ ಊರ್ಮಿಳಾ (ದೂರವಾಣಿ: 8904810474) ಮನೆಯಲ್ಲಿ ಬೀಡಿ ಕಟ್ಟುತ್ತಾರೆ, ತಂದೆ ವಿಶ್ವನಾಥ ಶೆಟ್ಟಿಗಾರ್‌ ಕೂಲಿ ಕೆಲಸ ಮಾಡುತ್ತಾರೆ.

ಮೂವರಿಗೂ ಪರೀಕ್ಷೆ ಬರೆಯಲು ಸಹಾಯಕರನ್ನು ನೇಮಿಸಿಕೊಳ್ಳುವ ಅವಕಾಶವಿತ್ತು. ಆದರೆ ಈ ಅವಕಾಶ ನಿರಾಕರಿಸಿ ತಾವೇ ಸ್ವತಃ ಪರೀಕ್ಷೆ ಬರೆದು ಉನ್ನತ ಶ್ರೇಣಿಯಲ್ಲೇ ಪಾಸಾಗಿದ್ದಾರೆ. 

ತೀವ್ರ ಆರ್ಥಿಕ ಸಮಸ್ಯೆ
ಇವರೊಂದಿಗೆ ಇದೇ ಶಾಲೆಯ ಇನ್ನೋರ್ವ ವಿದ್ಯಾರ್ಥಿನಿ, ಬಡ ಕುಟುಂಬದ ಹಿನ್ನೆಲೆಯ ಸುಶ್ಮಿತಾ 591 ಅಂಕ ಗಳಿಸಿದ್ದಾಳೆ. ನಾಲ್ವರು ವಿದ್ಯಾರ್ಥಿಗಳೂ ಪ್ರತಿಭಾವಂತರು. ಮನೆಯಲ್ಲಿ ತೀವ್ರ ಆರ್ಥಿಕ ಸಮಸ್ಯೆಯಿಂದಾಗಿ ವಿದ್ಯಾಭ್ಯಾಸ ಮುಂದುವರಿಸಲಾಗದೆ ಶಿಕ್ಷಣ ಮೊಟಕುಗೊಳಿಸುವ ನಿರ್ಧಾರಕ್ಕೆ ಬಂದಿದ್ದರು. ಆದರೆ ವಿದ್ಯಾರ್ಥಿಗಳ ಪ್ರತಿಭೆ ಗಮನಿಸಿದ ಸ್ಥಳೀಯ ಸಾರ್ವಜನಿಕ ಗಣೇಶೋತ್ಸವ ಸಮಿತಿಯು ಕಳೆದ ಸುಮಾರು ನಾಲ್ಕು ವರ್ಷದಿಂದ ಈ ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಬೇಕಾಗುವ ಎಲ್ಲ ವ್ಯವಸ್ಥೆಗಳನ್ನು ಉಚಿತವಾಗಿ ನೀಡಿತ್ತು. ವಿದ್ಯಾರ್ಥಿಗಳ ಸಾಧನೆಯಿಂದ ಖುಷಿಯಾಗಿದೆ, ಮುಂದೆಯೂ ಅವರಿಗೆ ಉಚಿತ ವಿದ್ಯಾಭ್ಯಾಸಕ್ಕೆ ವ್ಯವಸ್ಥೆಗೊಳಿಸುವುದಾಗಿ ಸಮಿತಿ ಅಧ್ಯಕ್ಷ ದುರ್ಗಾಪ್ರಸಾದ್‌ ಹೊಳ್ಳ ತಿಳಿಸಿದ್ದಾರೆ.

ಈಗಿನ ಅಂಕಗಳಿಂದ ಸಮಾಧಾನ ಆಗಿಲ್ಲ 
ಇನ್ನೂ ಹೆಚ್ಚು ಅಂಕ ಬರುವ ನಿರೀಕ್ಷೆ ಇತ್ತು, ಈಗ ಲಭಿಸಿರುವ ಅಂಕಗಳಿಂದ ಸಮಾಧಾನ ಆಗಿಲ್ಲ. ಸಹಾಯ ಪಡೆದು ಪರೀಕ್ಷೆ ಬರೆಯುವ ಅವಕಾಶ ಇದ್ದರೂ ಸ್ವತಃ ಉತ್ತರಿಸಬೇಕು ಎಂದು ಬಯಸಿ ಹಾಗೆಯೇ ಮಾಡಿದೆವು. ಮುಂದೆ ಮೂವರೂ ವಾಣಿಜ್ಯ ವಿಷಯದಲ್ಲಿ ವಿದ್ಯಾಭ್ಯಾಸ ಮುಂದುವರಿಸುತ್ತೇವೆ.
– ಜೀವನ್‌

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.