ಬಂಟ್ವಾಳ: 10 ರೂ. ರೀಚಾರ್ಜ್ ಮಾಡುವಂತೆ ತಿಳಿಸಿ, 1.65 ಲಕ್ಷ ರೂ. ಎಗರಿಸಿದ ಭೂಪ
ಜಿಯೋ ನಂಬರ್ ಅಪ್ ಡೇಟ್ ಮಾಡುವುದಾಗಿ ವೈದ್ಯರ ಖಾತೆಗೆ ಕನ್ನ
Team Udayavani, May 3, 2022, 2:45 PM IST
ಬಂಟ್ವಾಳ: ಇಲ್ಲಿನ ವೈದ್ಯರೊಬ್ಬರ ಬ್ಯಾಂಕ್ ಖಾತೆಯಿಂದ ಅಪರಿಚಿತ ವ್ಯಕ್ತಿಯೋರ್ವ ಮೊಬೈಲ್ ನಂಬರ್ ಅಪ್ ಡೇಟ್ ಮಾಡುವ ನೆಪದಿಂದ ಅ್ಯಪ್ ವೊಂದನ್ನು ಡೌನ್ ಲೋಡ್ ಮಾಡಿಸಿ ಒಟ್ಟು 1.65 ಲಕ್ಷ ರೂ. ಕನ್ನಹೊಡೆದ ಘಟನೆ ಬಿ.ಸಿ.ರೋಡಿನಲ್ಲಿ ನಡೆದಿದೆ.
ಅಪರಿಚಿತ ವ್ಯಕ್ತಿಯು ಎ. 29ರಂದು ಸಂಜೆ 5.30ರ ವೇಳೆಗೆ ವೈದ್ಯ ಡಾ.ಬಿ.ಅಶ್ವಿನ್ ಬಾಳಿಗಾ ಅವರಿಗೆ ಕರೆ ಮಾಡಿ ನಿಮ್ಮ ಜಿಯೋ ನಂಬರ್ ಅಪ್ ಡೇಟ್ ಮಾಡುವುದಾಗಿ ತಿಳಿಸಿ ಗೂಗಲ್ ಪ್ಲೇ ಸ್ಟೋರ್ ನಿಂದ ಕ್ವಿಕ್ ಇಝಿ ಆ್ಯಪ್ ಡೌನ್ ಲೋಡ್ ಮಾಡಿಸಿ ಬಳಿಕ ವೈದ್ಯರ ಬಳಿ ಮೈ ಜಿಯೋ ಆ್ಯಪ್ ನಲ್ಲಿ 10 ರೂ. ರೀಚಾರ್ಜ್ ಮಾಡುವಂತೆ ತಿಳಿಸಿದ್ದಾನೆ.
ಇದನ್ನೂ ಓದಿ:ಸೀಬೆಹಣ್ಣು ಕೀಳಲು ಹೋಗಿ ಕೃಷಿ ಹೊಂಡದಲ್ಲಿ ಬಿದ್ದು ಅಕ್ಕ-ತಂಗಿ ಸಾವು
ವೈದ್ಯರು ತಮ್ಮ ಡೆಬಿಟ್ ಕಾರ್ಡ್ ವಿವರಗಳನ್ನು ಆ್ಯಪ್ ಗೆ ಹಾಕಿ ರೀಚಾರ್ಜ್ ಮಾಡಿದ್ದಾರೆ. ಬಳಿಕ ಅವರ ಖಾತೆಯಿಂದ ತಲಾ 10 ಸಾವಿರ ರೂ.ಗಳಂತೆ 3 ಬಾರಿ ಹಾಗೂ 45 ಸಾವಿರ ರೂ.ಗಳಂತೆ 3 ಬಾರಿ ಹಣವನ್ನು ಎಗರಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ