ಉಪ್ಪಿನಂಗಡಿ : ಕಾರುಗಳ ಮುಖಾಮುಖಿ ಢಿಕ್ಕಿ, ಇಬ್ಬರಿಗೆ ಗಾಯ
Team Udayavani, Jul 19, 2022, 12:59 AM IST
ಉಪ್ಪಿನಂಗಡಿ: ಕಾರುಗಳೆರಡು ಮುಖಾಮುಖಿ ಢಿಕ್ಕಿಯಾಗಿ ಒಂದು ಕಾರಿನಲ್ಲಿದ್ದವರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಉಪ್ಪಿನಂಗಡಿ ಸಮೀಪದ ಕೂಟೇಲು ಸೇತುವೆ ಬಳಿ ಜು. 18ರಂದು ನಡೆದಿದೆ.
ಅಪಘಾತಗೊಂಡ ಮಾರುತಿ 800 ಕಾರಿನಲ್ಲಿದ್ದ ಕೆಮ್ಮಾರದ ಮುಹಮ್ಮದ್ ನವಾಝ್ ಹಾಗೂ ಅನ್ಸಾರ್ ಗಾಯಗೊಂಡವರು. ಸ್ವಿಫ್ಟ್ ಡಿಸೈರ್ ಕಾರಿನಲ್ಲಿದ್ದ ಸಾಮೆತ್ತಡ್ಕದ ಅಬ್ದುಲ್ ಮಜೀದ್ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಉಪ್ಪಿನಂಗಡಿ ಕಡೆಯಿಂದ ಹಳೆಗೇಟು ಕಡೆ ಹೋಗುತ್ತಿದ್ದ ಮಾರುತಿ 800 ಕಾರು ಕೂಟೇಲು ಸೇತುವೆಯ ಬಳಿ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದು ಹಳೆಗೇಟಿನಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರಿಗೆ ಮುಖಾಮುಖಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಸ್ವಿಫ್ಟ್ ಡಿಸೈರ್ ಕಾರು ಹಳೆಗೇಟು ಕಡೆ ಮುಖ ಮಾಡಿ ರಸ್ತೆಯಂಚಿನ ತಗ್ಗು ಪ್ರದೇಶಕ್ಕೆ ಮಗುಚಿ ಬಿದ್ದರೆ, ಮಾರುತಿ 800 ಕಾರು ರಸ್ತೆಯ ಇನ್ನೊಂದು ಬದಿ ಉಪ್ಪಿನಂಗಡಿ ಕಡೆಗೆ ಮುಖ ಮಾಡಿ ನಿಂತಿದೆ. ಮಾರುತಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ
Aranthodu ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು