ಉಪ್ಪಿನಂಗಡಿ: ಭಾರೀ ಮಳೆ, ಅಲ್ಲಲ್ಲಿ  ಹಾನಿ

Team Udayavani, Jun 15, 2018, 2:20 AM IST

uppi-hani-14-6.jpg

ಉಪ್ಪಿನಂಗಡಿ: ಬುಧವಾರ ಸಂಜೆಯಿಂದ ಗುರುವಾರ ಬೆಳಗ್ಗಿನವರೆಗೆ ಉಪ್ಪಿನಂಗಡಿಯಲ್ಲಿ ಭಾರೀ ಮಳೆಯಾಗಿದ್ದು, ಹಲವು ಕಡೆ ಹಾನಿ ಸಂಭವಿಸಿದೆ. ಉಪ್ಪಿನಂಗಡಿ ಗ್ರಾಮದ ಲಕ್ಷ್ಮೀನಗರದ ಧರೆ ಕುಸಿದು ಪ್ರಫ‌ುಲ್ಲಾ ಎಂಬವರ ಮನೆಗೆ ಕೆಸರು ನೀರು ನುಗ್ಗಿದ್ದು, ಮನೆಗೆ ಹಾನಿಯಾಗಿದೆ. ರಾಮನಗರದಲ್ಲಿರುವ ಉಪ್ಪಿನಂಗಡಿ ಗ್ರಾ.ಪಂ. ನೀರಿನ ಟ್ಯಾಂಕ್‌ನ ತಡೆಗೋಡೆ ಸಹಿತ ಧರೆ ಕುಸಿದಿದ್ದು, ಹಿರೇಬಂಡಾಡಿ ಗ್ರಾಮದ ರೂಪಾ ಎಂಬವರ ಮನೆ ಭಾಗಶಃ ಹಾನಿಗೊಂಡಿದೆ. ನೀರಿನ ಟ್ಯಾಂಕ್‌ ಅಪಾಯದಲ್ಲಿದೆ. ಲಕ್ಷ್ಮೀನಗರದ ಗಿರಿಜಾ, ಮರಿಕೆಯ ಲಲಿತಾ ಹಾಗೂ ಚೆನ್ನಪ್ಪ ಅವರ ಮನೆಗೆ ಧರೆ ಕುಸಿದಿದೆ. ನಿನ್ನಿಕಲ್ಲು ಎಂಬಲ್ಲಿ ಅಮೀರ್‌ ಖಾನ್‌ ಎಂಬವರ ಜಾಗದಲ್ಲಿದ್ದ ತಡೆಗೋಡೆ ಧರೆಯ ಸಹಿತ ಕುಸಿದಿದ್ದು, ವಿದ್ಯುತ್‌ ಕಂಬಕ್ಕೆ ಹಾನಿಯಾಗುವ ಸಂಭವವಿದೆ. ಬದಿಯಲ್ಲಿರುವ ಮನೆಗಳಿಗೂ ಅಪಾಯದ ಸಾಧ್ಯತೆ ಎದುರಾಗಿದೆ.

34ನೇ ನೆಕ್ಕಿಲಾಡಿ ಗ್ರಾಮದ ಆದರ್ಶ ನಗರದ ಪದ್ಮಯ್ಯ ಗೌಡ, ಅಶ್ರಫ್, ಸಚಿನ್‌, ಶಾಂತಾರಾಮ ಎಂಬವರ ಮನೆ ಬಳಿಯ ಧರೆ ಕುಸಿದಿದೆ. ಸುಭಾಶ್‌ ನಗರದ ನಿರಾಲ ಎಂಬಲ್ಲಿ ಗುಡ್ಡದ ಮಣ್ಣು ಕುಸಿದು ರಸ್ತೆ ಸಂಪೂರ್ಣ ಬಂದ್‌ ಆಗಿದ್ದು, ಬಳಿಕ ಮಣ್ಣು ತೆರವುಗೊಳಿಸಿ ಸಂಚಾರಕ್ಕೆ ಅನುವುಮಾಡಿಕೊಡಲಾಗಿದೆ. ನೆಕ್ಕಿಲಾಡಿಯಲ್ಲಿ ಅಶ್ರಫ್ ಎಂಬವರ ಮನೆ ಬಳಿಯ ಧರೆಯೂ ಕುಸಿದಿದೆ. ಇಳಂತಿಲ ಗ್ರಾಮದ ಅಂಬೊಟ್ಟು ಎಂಬಲ್ಲಿ ರಸ್ತೆಗೆ ಧರೆ ಕುಸಿದು ಬಿದ್ದಿದೆ. ಕಡವಿನ ಬಾಗಿಲಿನ ಫ‌ಕ್ರುದ್ದೀನ್‌, ಅಶ್ರಫ್ ಎಂಬವರ ಮನೆಗೆ ಧರೆ ಕುಸಿದು, ಹಾನಿಯುಂಟಾಗಿದೆ.

ತಣ್ಣೀರುಪಂಥ ಗ್ರಾಮದ ಬೋವು ಎಂಬಲ್ಲಿ ಸಾರ್ವಜನಿಕರು ಹಾಗೂ ಗ್ರಾ.ಪಂ. ಅನುದಾನದಲ್ಲಿ ನಿರ್ಮಿಸಿದ ಕಾಲು ಸಂಕ ಹೊಳೆಯಲ್ಲಿ ಸಂಪೂರ್ಣ ಕೊಚ್ಚಿ ಹೋಗಿದ್ದು, ಸಂಪರ್ಕ ಕಡಿತಗೊಂಡಿದ್ದರಿಂದ ಅರ್ಬಿ ನಿವಾಸಿಗಳಿಗೆ ಕುಪ್ಪೆಟ್ಟಿಗೆ ಬರಲು ಸುತ್ತು ಬಳಸಿ ಬರಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಉಪ್ಪಿನಂಗಡಿ ಗ್ರಾಮದ ಕೂಟೇಲು ಬಳಿಯ ನದಿ ಸಮೀಪವಿರುವ ಐತ ಮತ್ತು ಸಾಜು ಎಂಬವರ ಮನೆಗೆ ನೀರು ನುಗ್ಗುವ ಸಾಧ್ಯತೆಯನ್ನು ಮನಗಂಡ ಕಂದಾಯ ಅಧಿಕಾರಿಗಳು ಅವರನ್ನು ಬದಲಿ ಕಡೆ ವಾಸ್ತವ್ಯಕ್ಕೆ ಸೂಚಿಸಿದರಲ್ಲದೆ, ಅದು ಸಾಧ್ಯವಾಗದಿದ್ದರೆ, ಗಂಜಿ ಕೇಂದ್ರದಲ್ಲಿ ಆಶ್ರಯ ಕಲ್ಪಿಸುವುದಾಗಿ ತಿಳಿಸಿದರು. ಸ್ಥಳಕ್ಕೆ ಪ್ರಭಾರ ಕಂದಾಯ ನಿರೀಕ್ಷಕ ರಮಾನಂದ ಚಕ್ಕಡಿ, ಗ್ರಾಮ ಕರಣಿಕ ಚಂದ್ರ ನಾಯ್ಕ, ಗ್ರಾಮ ಸಹಾಯಕರಾದ ಯತೀಶ್‌, ದಿವಾಕರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೈದುಂಬಿ ಹರಿವ ನದಿಗಳು
ಗುರುವಾರ ಬೆಳಗ್ಗಿನವರೆಗೆ ಉಪ್ಪಿನಂಗಡಿಯಲ್ಲಿ 157.4 ಮಿ.ಮೀ. ಮಳೆ ದಾಖಲಾಗಿದೆ. ಬೆಳಗ್ಗಿನ ಜಾವ ದಿಂದಲೇ ಉಪ್ಪಿನಂಗಡಿಯಲ್ಲಿ ಕುಮಾರ ಧಾರ, ನೇತ್ರಾವತಿ ನದಿಗಳು ಮೈದುಂಬಿ ಹರಿಯುತ್ತಿದ್ದು, ಬೆಳಗ್ಗೆ ನೇತ್ರಾವತಿ ನದಿ ನೀರಿನ ಮಟ್ಟ 23 ಮೀಟರ್‌ ಆಗಿತ್ತು. ಮಧ್ಯಾಹ್ನದ ಬಳಿಕ ನೀರಿನ ಹರಿವು ಕಡಿಮೆಯಾಗಿದ್ದು, ನೇತ್ರಾವತಿ ನದಿ ನೀರಿನ ಮಟ್ಟ 20 ಮೀಟರ್‌ಗೆ ತಲುಪಿದೆ.

ಮೋರಿ ಕುಸಿತ
ಬೊಲಂತಿಲ- ದರ್ಬೆ ರಸ್ತೆ ‘ನಮ್ಮ ಗ್ರಾಮ- ನಮ್ಮ ರಸ್ತೆ’ ಯೋಜನೆಯಡಿ ಅಭಿವೃದ್ಧಿಗೊಳ್ಳುತ್ತಿದ್ದು, ಕುದ್ಕೋಳಿ ಬಳಿ ಮೋರಿ ಕಾಮಗಾರಿಯು ನಿರ್ಮಾಣ ಹಂತದಲ್ಲಿರುವುದರಿಂದ ಬದಿಯಲ್ಲಿಯೇ ತಾತ್ಕಾಲಿಕವಾಗಿ ಹಾಕಲಾಗಿದ್ದ ಮೋರಿಯು ಸಂಪೂರ್ಣ ಕುಸಿದು ಬಿದ್ದಿದ್ದು, ಇದರಿಂದ ದರ್ಬೆ ಹಾಗೂ ತಾಳೆಹಿತ್ಲುವಿಗೆ ಹೋಗುವ ರಸ್ತೆ ಸಂಪರ್ಕವೇ ಕಡಿತಗೊಂಡಿದೆ. ಗುರುವಾರ ಸಂಜೆಯವರೆಗೂ ದ್ವಿಚಕ್ರ ವಾಹನವಲ್ಲದೆ, ಇತರ ವಾಹನಗಳು ತಾಳೆಹಿತ್ಲು ಹಾಗೂ ದರ್ಬೆಯ ಕಡೆ ಸಂಚರಿಸದಂತಹ ಸ್ಥಿತಿಯಿತ್ತು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.