ಉನ್ನತ ಪ್ರಯೋಗಾಲಯದಲ್ಲಿ ಪರೀಕ್ಷೆ: ಖಾದರ್‌

Team Udayavani, Nov 13, 2018, 9:35 AM IST

khadar.jpg

ಉಳ್ಳಾಲ: ದೇರಳಕಟ್ಟೆಯ ಕಾನಕೆರೆಯ ಬಾವಿಗಳಲ್ಲಿ ಕಂಡುಬಂದಿರುವ ತೈಲ ಮಿಶ್ರಿತ ನೀರನ್ನು ದೇಶದಲ್ಲಿರುವ ಉನ್ನತ ಪ್ರಯೋಗಾಲಯದಲ್ಲಿ ಪರೀಕ್ಷಿಸಿ ವರದಿ ನೀಡುವಂತೆ ಎಂಆರ್‌ಪಿಎಲ್‌ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು ಮುಂದಿನ 15 ದಿನಗಳೊಳಗೆ ಬರುವ ವರದಿಯನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ ತಿಳಿಸಿದ್ದಾರೆ.

ಬೆಳ್ಮ ಗ್ರಾ.ಪಂ. ವ್ಯಾಪ್ತಿಯ ದೇರಳಕಟ್ಟೆ ಕಾನಕೆರೆ ಪ್ರದೇಶದಲ್ಲಿ ತೈಲದ ಅಂಶ ಕಂಡು ಬಂದಿರುವ ಬಾವಿಗಳ ನೀರನ್ನು ಪರಿಶೀಲಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಸ್ಥಳದಲ್ಲಿ ತ್ಯಾಜ್ಯ ನೀರಿನ ಸಮಸ್ಯೆಯೂ ಅಧಿಕವಾಗಿದ್ದು, ಈ ಕುರಿತ ವರದಿಯನ್ನು ಜಿಲ್ಲಾಧಿಕಾರಿಗೆ ನೀಡುವಂತೆ ಪಂಚಾಯತ್‌ ಆಡಳಿತಕ್ಕೆ ಸೂಚಿಸಲಾಗಿದೆ. ಇದರಿಂದ ಸೊಳ್ಳೆ ಸಮಸ್ಯೆಯೂ ಅಧಿಕವಾಗಿರುವುದರಿಂದ ಆರೋಗ್ಯ ಕಾಪಾಡುವ ಸಲುವಾಗಿ ಸರಕಾರಿ ಆಸ್ಪತ್ರೆಗಳಲ್ಲಿ ಉಚಿತ ನೆಟ್‌ ಒದಗಿಸಲಾಗುವುದು. ಪ್ರದೇಶದಲ್ಲಿ ಸೀವೇಜ್‌ ಟ್ರೀಟ್‌ಮೆಂಟ್‌ ಪ್ಲಾಂಟ್‌ ಅನುಷ್ಠಾನಕ್ಕೆ ಪಂಚಾಯತ್‌, ಮಂಗಳೂರು ಮಹಾ ನಗರ ಪಾಲಿಕೆ ಜತೆಗೆ ಮಾತುಕತೆ ನಡೆಸಿ, ಸರಕಾರದಿಂದ ಸಿಗುವ 20 ಲಕ್ಷ ರೂ. ಅನುದಾನದಡಿ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಂಡು, ಹೆಚ್ಚು ವೆಚ್ಚ ಆದಲ್ಲಿ ಕಟ್ಟಡ ಮಾಲಕರು ಭರಿಸುವಂತೆ ತಿಳಿಸಿದರು.

ಸ್ಥಳದಲ್ಲಿ ಕಾಂಗ್ರೆಸ್‌ ಜಿಲ್ಲಾ ಅಲ್ಪಸಂಖ್ಯಾಕ ಘಟಕದ ಅಧ್ಯಕ್ಷ ಎನ್‌.ಎಸ್‌.ಕರೀಂ, ಉಳ್ಳಾಲ ಬ್ಲಾಕ್‌ ಕಾಂಗ್ರೆಸ್‌ ಉಪಾಧ್ಯಕ್ಷ ಮುಸ್ತಾಫ ಹರೇಕಳ, ಬೆಳ್ಮ ಗ್ರಾ.ಪಂ.ಅಧ್ಯಕ್ಷೆ ವಿಜಯಾ ಕೃಷ್ಣಪ್ಪ, ಉಪಾಧ್ಯಕ್ಷ ಅಬ್ದುಲ್‌ ಸತ್ತಾರ್‌, ಜೆಡಿಎಸ್‌ ಮುಖಂಡ ಅಝೀಝ್ ಮಲಾರ್‌, ಜಿಲ್ಲಾ ಆರೋಗ್ಯ ಅಧಿಕಾರಿ ರಾಮಕೃಷ್ಣ ರಾವ್‌, ಪಂ.ಅಭಿವೃದ್ಧಿ ಅಧಿಕಾರಿ ನವೀನ್‌ ಹೆಗ್ಡೆ ಉಪಸ್ಥಿತರಿದ್ದರು.

ನೀರು ಖಾಲಿ ಮಾಡಲು ಆದೇಶ
ಮೊದಲ ಹಂತದಲ್ಲಿ ತೈಲ ಮಿಶ್ರಿತ ನೀರನ್ನು ಎನ್‌ಐಟಿಕೆಯ ವಿಜ್ಞಾನಿಗಳು ಪರಿಶೀಲನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ವರದಿ ನೀಡಲಿದ್ದಾರೆ. ಬಳಿಕ ಈ ನೀರಿನ ಸ್ಯಾಂಪಲ್‌ಗ‌ಳನ್ನು ಎಂಆರ್‌ಪಿಎಲ್‌ ಮಾರ್ಗದರ್ಶನದಲ್ಲಿ ದೇಶದ ಉನ್ನತವಾದ ಲ್ಯಾಬ್‌ನಲ್ಲಿ ಪರೀಕ್ಷೆಗೆ ಒಳಪಡಿಸಲಿದ್ದಾರೆ. ಇದರೊಂದಿಗೆ ತೈಲದ ಅಂಶ ಪತ್ತೆಯಾಗಿರುವ ಎಲ್ಲ ಬಾವಿಗಳ ನೀರನ್ನು ಖಾಲಿ ಮಾಡಲು ಪಂಚಾಯತ್‌ಗೆ ಆದೇಶಿಸಲಾಗಿದೆ. ಬಳಿಕ ಶೇಖರವಾಗುವ ನೀರನ್ನು ಮರು ಪರೀಕ್ಷೆ ನಡೆಸಲಾಗುವುದು. ಆ ವರೆಗೆ ಈ ಪ್ರದೇಶದ ಜನರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಸಂಬಂಧಿತ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ. ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲಾಗುವುದು. ಜಿ.ಪಂ. ಅಭಿಯಂತರಿಗೂ ಸ್ಥಳದಲ್ಲಿ ಕೊಳವೆಬಾವಿ ನಿರ್ಮಾಣಕ್ಕೆ ಜಾಗ ನೋಡು ವಂತೆ ಸೂಚಿಸಲಾಗಿದೆ ಎಂದರು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.