ವಾಮದಪದವು ಬಸ್ತಿಕೋಡಿ 8ನೇ ಶಾಖೆ ಆರಂಭ

ಬಂಟ್ವಾಳ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ ನಿಗಮ

Team Udayavani, May 2, 2019, 6:15 AM IST

0105BTRBPH9

ಬಂಟ್ವಾಳ : ಆರ್ಥಿಕ ವ್ಯವ ಹಾರದಲ್ಲಿ ಪಾರದರ್ಶಕತೆ, ನಂಬಿಕೆ ವಿಶ್ವಾಸ ಉಳಿಸಿಕೊಂಡು ಬರಬೇಕು. ಸಹಕಾರಿ ಕ್ಷೇತ್ರ ಪರಸ್ಪರ ಕೊಡುಕೊಳ್ಳುವ ವ್ಯವಹಾರವಾಗಿ ಪ್ರತಿಯೊಬ್ಬರಿಗೆ ಬಾದ್ಯ ಸ್ತರಂತೆ ನಡೆದುಕೊಳ್ಳುವುದಾಗಿದೆ ಎಂದು ಮೂಡುಬಿದಿರೆ ಜೈನ ಮಠದ ಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾ ಚಾರ್ಯವರ್ಯ ಮಹಾಸ್ವಾಮೀಜಿ ಅವರು ಹೇಳಿದರು.

ಮೇ 1ರಂದು ಬಂಟ್ವಾಳ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ ನಿ. ಇದರ 8ನೇ ನೂತನ ಶಾಖೆಯನ್ನು ಅವರು ವಾಮದಪದವು ಬಸ್ತಿಕೋಡಿ ಅರುಹಶ್ರೀ ಕಟ್ಟಡದಲ್ಲಿ ಉದ್ಘಾಟಿಸಿ, ವ್ಯವಹಾರದಲ್ಲಿ ನಾವು ವ್ಯವಸ್ಥೆಗಳನ್ನು ನಡೆಸಿಕೊಡುವುದಕ್ಕಾಗಿ ಒಂದಂಶವನ್ನು ಉಳಿಸಿ-ಬಳಸಿಕೊಳ್ಳುವ ಮೂಲಕ ಸಹಕಾ ರದ ಮನೋಭಾವದಿಂದ ನಡೆದು ಕೊಳ್ಳು ವುದು ಮುಖ್ಯವಾಗಿದೆ ಎಂದರು.

ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕ್‌ ಅಧ್ಯಕ ಸುದರ್ಶನ ಜೈನ್‌ ಭದ್ರತಾ ಕೊಠಡಿ ಉದ್ಘಾಟಿಸಿದರು.ಜಿ.ಪಂ. ಸದಸ್ಯರಾದ ಎಂ. ತುಂಗಪ್ಪ ಬಂಗೇರ ಕಂಪ್ಯೂಟರ್‌ ಜಾಲವನ್ನು ಉದ್ಘಾಟಿಸಿದರು. ಬಿ. ಪದ್ಮಶೇಖರ ಜೈನ್‌ ನಿತ್ಯನಿಧಿ ಠೇವಣಿ ಯೋಜನೆಗೆ ಚಾಲನೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಸುಭಾಶ್ಚಂದ್ರ ಜೈನ್‌ ಮಾತನಾಡಿ, ತಾಲೂಕಿನಾದ್ಯಂತ ಸಂಘವು 8 ಶಾಖೆಗಳನ್ನು ಹೊಂದಿದೆ. ಸಹಕಾರಿ ಸಂಘವು 2018-19ನೇ ಸಾಲಿನ ಆರ್ಥಿಕ ವರ್ಷದಲ್ಲಿ 121 ಕೋಟಿ ರೂ. ವ್ಯವಹಾರ ನಡೆಸಿ 40 ಲಕ್ಷ ರೂ. ನಿವ್ವಳ ಲಾಭ ಪಡೆದಿದೆ. 4,753 ಮಂದಿ ಸದಸ್ಯರಿಂದ 96.28 ಲಕ್ಷ ರೂ. ಪಾಲು ಬಂಡವಾಳ, 24.42 ಕೋಟಿ ರೂ. ಠೇವಣಿ ಹೊಂದಿದೆ. ಪ್ರಸ್ತುತ 28.46 ಕೋಟಿ ರೂ. ದುಡಿಯುವ ಬಂಡವಾಳವನ್ನು ಹೊಂದಿರುತ್ತದೆ. 15 ಸಾವಿರಕ್ಕೂ ಅಧಿಕ ಹೆಚ್ಚು ಗ್ರಾಹಕರು ಸಂಸ್ಥೆಯಲ್ಲಿ ವ್ಯವಹಾರ ನಡೆಸುತ್ತಿದ್ದಾರೆ ಎಂದರು.

ಮುಖ್ಯ ಅತಿಥಿಗಳಾಗಿ ಚೆನ್ನೈತ್ತೋಡಿ ತಾ.ಪಂ. ಸದಸ್ಯೆ ರತ್ನಾವತಿ ಜೆ. ಶೆಟ್ಟಿ, ಚೆನ್ನೈತ್ತೋಡಿ ಗ್ರಾ.ಪಂ. ಅಧ್ಯಕ್ಷ ಯತೀಶ್‌ ಎನ್‌. ಶೆಟ್ಟಿ, ವಾಮದಪದವು ವ್ಯ.ಸೇ.ಸ. ಸಂಘ ಅಧ್ಯಕ್ಷ ಯಶೋಧರ ಶೆಟ್ಟಿ, ವಾಮದಪದವು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಗೋಪಾಲಕೃಷ್ಣ ಚೌಟ, ಮಹಿಳಾ ವಿ.ಸ. ಸಂಘ ವಾಮದಪದವು ಅಧ್ಯಕ್ಷೆ ರಾಧಿಕಾ ಎಂ. ನಾಯಕ್‌ ಉಪಸ್ಥಿತರಿದ್ದರು. ಕಟ್ಟಡ ಮಾಲಕ ಅರುಣ್‌ ಕುಮಾರ್‌ ಇಂದ್ರ ಅವರನ್ನು ಸಮ್ಮಾನಿಸಲಾಯಿತು.

ಉದಯ ಕುಮಾರ್‌ ಕಟ್ಟೆಮನೆ, ಚಂದ್ರಶೇಖರ ಶೆಟ್ಟಿ, ಪುರುಷೋತ್ತಮ ಶೆಟ್ಟಿ, ಅಮ್ಮು ರೈ, ನವೀನ್‌ಚಂದ್ರ ಶೆಟ್ಟಿ, ಜಿ.ಕೆ. ಭಟ್‌, ಹಂಝ ಬಸ್ತಿಕೋಡಿ, ಪ್ರವೀಣ್‌ ಗಟ್ಟಿ, ಸಂಘದ ಉಪಾಧ್ಯಕ್ಷ ಮಂಜುನಾಥ ರೈ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಜಿತ್‌ ಕುಮಾರ್‌, ನಿರ್ದೇಶಕರಾದ ಸ್ವಪ್ನರಾಜ್‌, ರಾಜೇಶ್‌ ಬಿ., ಗಜೇಂದ್ರ ಪ್ರಭು, ದಿವಾಕರ್‌ದಾಸ್‌, ವಿಜಯಕುಮಾರಿ ಇಂದ್ರ, ಸುಧಾಕರ ಸಾಲ್ಯಾನ್‌, ಮೈಕಲ್‌ ಡಿ’ಕೋಸ್ತಾ, ಹೇಮಂತ್‌ ಕುಮಾರ್‌ ಜೈನ್‌, ರವೀಂದ್ರ ಮತ್ತು ನಾರಾಯಣ ಸಿ. ಪೆರ್ನೆ ಉಪಸ್ಥಿತರಿದ್ದರು.

ನಿರ್ದೇಶಕರಾದ ದಿವಾಕರ ದಾಸ್‌ ಸ್ವಾಗತಿಸಿ, ಸುಧಾಕರ ಸಾಲ್ಯಾನ್‌ ವಂದಿಸಿದರು. ನ್ಯಾಯವಾದಿ ಶಿವಪ್ರಕಾಶ್‌ ನಿರೂಪಿಸಿದರು.

ಟಾಪ್ ನ್ಯೂಸ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.