ಎ. 20ರಂದು ನಾಮಪತ್ರ ಸಲ್ಲಿಕೆ: ಶಾಸಕ ಬಂಗೇರ

Team Udayavani, Apr 13, 2018, 9:30 AM IST

ಬೆಳ್ತಂಗಡಿ: ಮಾರಿಗುಡಿ ಮೈದಾನ ಅಥವಾ ವಾಣಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ಬೃಹತ್‌ ಸಭೆ ನಡೆಸಿ ಮೆರವಣಿಗೆ ಮೂಲಕ ಮಿನಿ ವಿಧಾನಸೌಧದಲ್ಲಿ ಎ. 20ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದೇನೆ ಎಂದು ಬೆಳ್ತಂಗಡಿ ಕ್ಷೇತ್ರದ ಶಾಸಕ ಕೆ. ವಸಂತ ಬಂಗೇರ ಘೋಷಿಸಿದರು. ಅವರು ಬಸ್‌ ನಿಲ್ದಾಣ ಬಳಿ ಚುನಾವಣೆ ಕಚೇರಿ ಹಾಗೂ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ತಾಲೂಕು ಪ್ರಚಾರ ಸಭೆಗಳಿಗೆ ಚಾಲನೆ ನೀಡಿ ನಾಮಪತ್ರ ಸಲ್ಲಿಕೆ ವಿಚಾರ ಬಹಿರಂಗವಾಗಿ ಘೋಷಿಸಿದರು.

ಶಾಸಕ ಕೆ. ವಸಂತ ಬಂಗೇರ 1968ರಲ್ಲಿ ಕುವೆಟ್ಟು ಗ್ರಾ. ಪಂ.ಗೆ ಸ್ಪರ್ಧಿಸುವ ಮೂಲಕ ಮೊದಲ ನಾಮಪತ್ರ ಸಲ್ಲಿಸಿದ್ದರು. 1983, 1985ರಲ್ಲಿ ಬಿಜೆಪಿಯಿಂದ, 1994ರಲ್ಲಿ ಜೆಡಿಎಸ್‌ನಿಂದ, 2008, 2013ರಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಶಾಸಕನಾಗಿ ಆಯ್ಕೆಯಾಗಿದ್ದಾರೆ. ಈ ಬಾರಿ ಕಾಂಗ್ರೆಸ್‌ನಿಂದ ಸ್ಪರ್ಧಿಸುತ್ತಿದ್ದು, ಹ್ಯಾಟ್ರಿಕ್‌ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಒಟ್ಟು 8 ಬಾರಿ ಶಾಸಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದು, ಎ. 20ರಂದು 9ನೇ ಬಾರಿಗೆ ನಾಮಪತ್ರ ಸಲ್ಲಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯದರ್ಶಿ, ಕಾಂಗ್ರೆಸ್‌ ಪ್ರಚಾರ ಸಮಿತಿ ಜಿಲ್ಲಾ ಉಸ್ತುವಾರಿ ಸವಿತಾ ರಮೇಶ್‌, ತಾಲೂಕು ಪ್ರಚಾರ ಸಮಿತಿ ಅಧ್ಯಕ್ಷ ಸುಂದರ ಗೌಡ, ತಾಲೂಕು ಚುನಾವಣಾ ಉಸ್ತುವಾರಿಗಳಾದ ವಿಜಯ್‌ಕುಮಾರ್‌ರೈ, ಸೈಮನ್‌, ಕೆ.ಪಿ.ಸಿ.ಸಿ. ಸದಸ್ಯರಾದ ಪಿತಾಂಬರ ಹೆರಾಜೆ, ಯುವ ಕಾಂಗ್ರೆಸ್‌ ತಾಲೂಕು ಅಧ್ಯಕ್ಷ ಅಭಿನಂದನ್‌ ಹರೀಶ್‌, ಪ್ರಚಾರ ಸಮಿತಿ ಅಧ್ಯಕ್ಷ ಇ. ಸುಂದರ ಗೌಡ, ಬೆಳ್ತಂಗಡಿ ಗ್ರಾಮೀಣ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎನ್‌. ಶ್ರೀನಿವಾಸ್‌ ವಿ. ಕಿಣಿ, ತಾ.ಪಂ. ಅಧ್ಯಕ್ಷೆ ದಿವ್ಯಜ್ಯೋತಿ, ಕಾಂಗ್ರೆಸ್‌ ವಿವಿಧ ಘಟಕಗಳ ಅಧ್ಯಕ್ಷರು, ಸದಸ್ಯರು, ಜಿ.ಪಂ. ಸದಸ್ಯರು, ತಾ.ಪಂ. ಸದಸ್ಯರು ಉಪಸ್ಥಿತರಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ