ಕಾರ್ಗಿಲ್‌ ವಿಜಯದ ಹೀರೋ ಇಂದು ಮಂಗಳೂರಿಗೆ

Team Udayavani, Apr 19, 2017, 12:56 AM IST

Malik-18-4.jpg

ಮಹಾನಗರ: ಕಾರ್ಗಿಲ್‌ ಆಪರೇಷನ್‌ ವಿಜಯದ ಹೀರೋ ಜನರಲ್‌ ವೇದ್‌ ಪ್ರಕಾಶ್‌ ಮಲಿಕ್‌ ಅವರು ಎ. 19ರಂದು ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಜನರಲ್‌ ಕಾರ್ಯಪ್ಪ ಅವರ ಬಳಿಕ ಸೇನಾ ಮುಖ್ಯಸ್ಥರಾಗಿದ್ದವರೋರ್ವರು ಮಂಗಳೂರಿಗೆ ಬರುತ್ತಿರುವುದು ಇದೇ ಮೊದಲು ಎನ್ನುವುದು ವಿಶೇಷ. ಸೇನೆಯಲ್ಲಿ ನಾನಾ ಹುದ್ದೆಗಳನ್ನು ಅಲಂಕರಿಸಿದ ಅವರು ಭಾರತೀಯ ಸೇನೆಯ 19ನೇ ಸೇನಾ ನಾಯಕ. 1999ರಲ್ಲಿ ನಡೆದ ಕಾರ್ಗಿಲ್‌ ಯುದ್ಧದಲ್ಲಿ ಭಾರತೀಯ ಸೇನೆಯು ಪಾಕಿಸ್ಥಾನವನ್ನು ಹಿಮ್ಮೆಟ್ಟಿಸಿ ವಿಜಯ ಪತಾಕೆ ಹಾರಿಸಿದ್ದು ಮಲಿಕ್‌ ಅವರ ನೇತೃತ್ವದಲ್ಲಿ. ಅದಕ್ಕಾಗಿಯೇ ಆಪರೇಷನ್‌ ವಿಜಯದ ಹೀರೋ ಎಂದೇ ಅವರನ್ನು ಕರೆಯಲಾಗುತ್ತದೆ.

ಕಿರಿ ವಯಸ್ಸಿನಲ್ಲಿ ಸೇನೆಗೆ
ಮಲಿಕ್‌ ಅವರು ಭಾರತೀಯ ಸೇನೆ ಸೇರಿದ್ದು 1959ರಲ್ಲಿ. ಆಗವರಿಗೆ 19 ವರ್ಷ. 41 ವರ್ಷ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿ 2,000ನೇ ಸಾಲಿನ ಸೆಪ್ಟಂಬರ್‌ 30ರಂದು ನಿವೃತ್ತಿಯಾದರು. ಅತ್ಯಂತ ಕಠಿನ ಭಾಗಗಳಲ್ಲಿ ತೆರಳಿ ಶತ್ರುಗಳೊಂದಿಗೆ ಹೋರಾಡಿದ ಹೆಮ್ಮೆ ಅವರದ್ದು. ಕೇಂದ್ರ ಸರಕಾರವು 1984ರಲ್ಲಿ ಅತಿ ವಿಶಿಷ್ಟ ಸೇವಾ ಮೆಡಲ್‌ ಮತ್ತು 1993ರಲ್ಲಿ ಪರಮ ವಿಶಿಷ್ಟ ಸೇವಾ ಮೆಡಲ್‌ ನೀಡಿ ಗೌರವಿಸಿದೆ. ಆಪರೇಷನ್‌ ವಿಜಯದ ನಂತರ ಎಕ್ಸೆಲೆನ್ಸ್‌ ಇನ್‌ ಲೀಡರ್‌ಶಿಪ್‌, ಡಿಸ್ಟಿಂಗ್ವಿಶ್ಡ್ ಫೆಲೋಶಿಪ್‌, ಇನ್ಸ್‌ಟಿಟ್ಯೂಟ್‌ ಆಫ್‌ ಪ್ರೈಡ್‌ ಆಫ್‌ ನೇಶನ್‌ನಂತಹ ಪ್ರಶಸ್ತಿ ಪುರಸ್ಕಾರಗಳು ಸಂದವು.

ನಾನಾ ಹುದ್ದೆ
ಮೂಲತಃ ನಾರ್ತ್‌ ವೆಸ್ಟ್‌ ಪ್ರಾಂತ್ಯದಲ್ಲಿ ಜನಿಸಿದ ಅವರು, ಅನಂತರ ಭಾರತದಲ್ಲೇ ನೆಲೆಯೂರಿ ಶಿಕ್ಷಣ ಪಡೆದರು. ಹೈಸ್ಕೂಲ್‌ ವಿದ್ಯಾರ್ಥಿಯಾಗಿದ್ದಾಗಲೇ ನ್ಯಾಶನಲ್‌ ಡಿಫೆನ್ಸ್‌ ಅಕಾಡೆಮಿಗೆ ಸೇರಿ, ಡೆಹ್ರಾಡೂನ್‌ನಲ್ಲಿ ಇಂಡಿಯನ್‌ ಮಿಲಿಟರಿ ಅಕಾಡೆಮಿಗೆ ಸೇವೆಗಾಗಿ ತೆರಳಿದರು. ಜಮ್ಮು ಕಾಶ್ಮೀರದಲ್ಲಿ ಬ್ರಿಗೇಡ್‌ ಕಮಾಂಡರ್‌, ಮೇಜರ್‌ ಜನರಲ್‌, 8ನೇ ಮೌಂಟನ್‌ ಡಿವಿಜನ್‌ ಕಮಾಂಡರ್‌ ಇತ್ಯಾದಿ ಹುದ್ದೆಗಳನ್ನು ಅಲಂಕರಿಸಿ, ಪಂಜಾಬ್‌ನಲ್ಲಿ ಲೆಫ್ಟಿನೆಂಟ್‌ ಜನರಲ್‌, 11ನೇ ಕೋರ್‌ನ ಮುಖ್ಯಸ್ಥರಾದರು. ಅನಂತರ ಭಡ್ತಿಗೊಂಡು ದಕ್ಷಿಣ ಕಮಾಂಡ್‌ನ‌ ಮುಖ್ಯಸ್ಥ, ಆರ್ಮಿಯ ವೈಸ್‌ ಚೀಫ್‌ ಆಗಿಯೂ ಕೆಲಸ ಮಾಡಿದರು. ಕಾರ್ಗಿಲ್‌ ಯುದ್ಧದ ವೇಳೆ 19ನೇ ಸೇನಾ ನಾಯಕನಾಗಿ ಸೇನೆಯನ್ನು ಮುನ್ನಡೆಸಿದರು.

ಸಂವಾದ ಕಾರ್ಯಕ್ರಮ
ಎ.19ರಂದು ಸಂಜೆ 6 ಗಂಟೆಗೆ ಪುರಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವೇದ್‌ ಪ್ರಕಾಶ್‌ ಮಲಿಕ್‌ ಅವರು ‘ಕಾರ್ಗಿಲ್‌ ಯುದ್ಧ-1999’ ವಿಷಯದ ಕುರಿತು ವಿವರಿಸುವರು. ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಅವರೊಂದಿಗೆ ಸಂವಾದ ನಡೆಸುವ ಅವಕಾಶವೂ ಇದ್ದು, 5.45ರ ಮೊದಲು ಸಭಾಂಗಣಕ್ಕೆ ಆಗಮಿಸಬೇಕು ಎಂದು ಜಿಲ್ಲಾ ಮಾಜಿ ಸೈನಿಕರ ಸಂಘದ ಬ್ರಿ | ಐ. ಎನ್‌. ರೈ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.