ವೇಣೂರು: ಯುವತಿ ನಾಪತ್ತೆ
Team Udayavani, Jul 14, 2019, 9:36 AM IST
ವೇಣೂರು: ಮಂಗಳೂರಿಗೆ ಉದ್ಯೋಗಕ್ಕೆಂದು ತೆರಳಿದ್ದ ಯುವತಿಯೋರ್ವಳು ನಾಪತ್ತೆಯಾಗಿರುವ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕಿನ ನಿಟ್ಟಡೆ ಗ್ರಾಮದ ಪಂಡಿಂಜೆ ನಿವಾಸಿ ನಾಗೇಶ್ ಎಂ.ಕೆ. ಅವರ ಪುತ್ರಿ ಕೀರ್ತನಾ (19) ನಾಪತ್ತೆಯಾದವಳು. ಮೇ 13ರಂದು ಮಂಗಳೂರಿನ ಕಂಪೆನಿಯೊಂದರಲ್ಲಿ ಉದ್ಯೋಗ ಲಭಿಸಿದೆ ಎಂದು ಹೋದವಳು ಬಳಿಕ ಒಂದು ತಿಂಗಳ ಕಾಲ ಮನೆಯನ್ರೊಂದಿಗೆ ಸಂಪರ್ಕದಲ್ಲಿದ್ದಳು. ಆ ಬಳಿಕ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಮನೆಯವರ ಸಂಪರ್ಕಕ್ಕೆ ಸಿಗಲಿಲ್ಲ ಎನ್ನಲಾಗಿದೆ.
ಅಪರಿಚಿತ ಮಹಿಳೆಯೊಬ್ಬರು ನಾಗೇಶ್ಗೆ ದೂರವಾಣಿ ಕರೆ ಮಾಡಿ ನಿಮ್ಮ ಪುತ್ರಿ ಮದುವೆಯಾಗಿ ಚಿಕ್ಕಮಗಳೂರಿನಲ್ಲಿ ಇರುವುದಾಗಿ ತಿಳಿಸಿದ್ದಾರೆಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ವಿವರಿಸಲಾಗಿದೆ.
ಪಿಯುಸಿ ವಿದ್ಯಾಭ್ಯಾಸ ಮಾಡಿರುವ ಕೀರ್ತನಾ ಗೋಧಿ ಮೈ ಬಣ್ಣ ಹೊಂದಿದ್ದಾಳೆ. ಕನ್ನಡ, ತುಳು ಬಲ್ಲವಳಾಗಿದ್ದಾಳೆ. ಇವಳ ಮಾಹಿತಿ ದೊರೆತಲ್ಲಿ ವೇಣೂರು ಪೊಲೀಸ್ ಠಾಣೆ (9480805372)ಗೆ ಮಾಹಿತಿ ನೀಡಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ