ವಿಟ್ಲಪಡ್ನೂರು ಗ್ರಾ.ಪಂ ಉಪಾಧ್ಯಕ್ಷರ ಮನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು
Team Udayavani, Jun 11, 2022, 3:06 PM IST
ವಿಟ್ಲ: ಮನೆಯಲ್ಲಿಟ್ಟಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವುವಾಗಿದೆ ಎಂದು ಆರೋಪಿಸಿ ವ್ಯಕ್ತಿಯೋರ್ವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ವಿಟ್ಲಪಡ್ನೂರು ಕೊಡಂಗಾಯಿ ನಿವಾಸಿ, ವಿಟ್ಲಪಡ್ನೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಾಗೇಶ್ ಶೆಟ್ಟಿಯವರು ಮದುವೆಗೆ ಹೋಗಿ ಬಂದ ನಂತರ ಮನೆಯಲ್ಲಿ ಇಟ್ಟಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವಾಗಿದೆ ಎಂದು ಠಾಣೆಗೆ ದೂರು ನೀಡಿದ್ದಾರೆ.
ಜೂ.8 ರಂದು ಮದುವೆ ಹೋಗುವ ವೇಳೆ ಚಿನ್ನಾಭರಣಗಳನ್ನು ಧರಿಸಿಕೊಂಡು ಹೋಗಿದ್ದು, ನಂತರ ಮದುವೆಯಿಂದ ಬಂದು ಮಲಗುವ ಕೋಣೆಯ ಗೋಡೆಯಲ್ಲಿ ರಚಿಸಲಾದ ಶೊಕೇಸ್ ನಲ್ಲಿ ಚಿನ್ನಾಭರಣಗಳನ್ನು ಇಟ್ಟಿದ್ದು, ಮರುದಿನ ಜೂ.9 ರಂದು ಮತ್ತೊಂದು ಮದುವೆಗೆ ಹೋಗಲು ಶೊಕೇಸ್ ನಲ್ಲಿ ಇರಿಸಿದ್ದ ಚಿನ್ನಾಭರಣಗಳನ್ನು ನೋಡಿದಾಗ ಕಳವಾಗಿರುವುದು ಬೆಳಕಿಗೆ ಬಂದಿದೆ.
ಇದನ್ನೂ ಓದಿ : ಜುಲೈ 15ಕ್ಕೆ ಬಿಡುಗಡೆಯಾಗಲಿದೆ ಅನೀಶ್ ತೇಜೇಶ್ವರ್ ನಟನೆಯ ‘ಬೆಂಕಿ’
ಸುಮಾರು 32 ಗ್ರಾಂ ತೂಕದ ಚಿನ್ನದ ಸರ-01 ಅಂದಾಜು ಮೌಲ್ಯ-64000/- ಸುಮಾರು 20 ಗ್ರಾಂತೂಕದ ಚಿನ್ನದ ಬ್ರಾಸ್ ಲೈಟ್-01 ಅಂದಾಜು ಮೌಲ್ಯ-40,000/- ಒಟ್ಟು 12 ಗ್ರಾಂ ತೂಕದ ಚಿನ್ನದ ಉಂಗುರ-03 ಅಂದಾಜು 24,000/- ಸದ್ರಿ ಚಿನ್ನಾಭರಣಗಳ ಒಟ್ಟು ಮೌಲ್ಯ 1,28,000/- ಆಗಬಹುದು, ಗೊಲ್ಡ್ ಬಣ್ಣದ ಲೇಡಿಸ್ ರಿಸ್ಟ್ ವಾಚ್-01 ಅಂದಾಜು 500/- ರೂ, ಅರ್ಟಿಫಿಶಲ್ ಕೈ ಬಳೆ-01 ಅಂದಾಜು 100/- ರೂ. ಒಟ್ಟು ಅಂದಾಜು 1,28,600 ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್
Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ
Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ
MUST WATCH
ಹೊಸ ಸೇರ್ಪಡೆ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!