ನಗರದಲ್ಲಿ ಶೀಘ್ರ ಇನ್ನೊಮ್ಮೆ ಮತದಾನ!

ಐದು ತಿಂಗಳುಗಳೊಳಗೆ ಪಾಲಿಕೆಗೆ ಚುನಾವಣೆ?

Team Udayavani, Apr 21, 2019, 6:00 AM IST

1904MLR101

ಮಹಾನಗರ: ಲೋಕಸಭಾ ಚುನಾವಣೆಗೆ ಗುರುವಾರವಷ್ಟೇ ಮತದಾನ ಮಾಡಿರುವ ಮಂಗಳೂರಿನ ನಾಗರಿಕರಿಗೆ ಇನ್ನು ಕೆಲವೇ ತಿಂಗಳುಗಳಲ್ಲಿ ಮತ್ತೂಮ್ಮೆ ಮತ ಹಾಕುವ ಪ್ರಮೇಯ ಎದುರಾಗಲಿದೆ. ಯಾಕೆಂದರೆ, ಮಹಾನಗರ ಪಾಲಿಕೆಗೆ ಮುಂದಿನ 5 ತಿಂಗಳುಗಳೊಳಗೆ ಚುನಾವಣೆ ನಡೆಯಲಿದೆ!

ಲೋಕಸಭೆ, ವಿಧಾನಸಭೆಗಳಿಗೆ ನಡೆಯುವ ಚುನಾವಣೆಯಲ್ಲಿ ಕನಿಷ್ಠ ಮತದಾನದ ಮೂಲಕ ಮಂಗಳೂರು ದಕ್ಷಿಣ, ಮಂಗಳೂರು ಉತ್ತರ ವಿ.ಸಭಾ ಕ್ಷೇತ್ರ ಜಿಲ್ಲೆಯಲ್ಲಿಯೇ ಗುರುತಿಸಿ ಕೊಂಡಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿಯೂ ಈ ಎರಡೂ ಕ್ಷೇತ್ರದಲ್ಲಿ ಮತದಾನದ ಪ್ರಮಾಣ ಕಡಿಮೆ. ವಿಶೇಷವೆಂದರೆ, ಈ ಎರಡೂ ಕ್ಷೇತ್ರಗಳಲ್ಲಿ ಪಾಲಿಕೆಯ ವಾರ್ಡ್‌ಗಳು ಇರುವ ಹಿನ್ನೆಲೆಯಲ್ಲಿ ಪಾಲಿಕೆ ಚುನಾವಣೆ ವೇಳೆಗೆ ಮತ್ತೂಮ್ಮೆ ಮತದಾರರನ್ನು ಮತಗಟ್ಟೆಗಳಿಗೆ ಕರೆತರುವುದು ಚುನಾವಣ ಆಯೋಗಕ್ಕೆ ಬಹುದೊಡ್ಡ ಸವಾಲಿನ ಕೆಲಸ.

ಸಿಟಿಯ ಜನರು ಮತದಾನಕ್ಕೆ ಬರಲು ಹಿಂದೇಟು ಹಾಕುವ ಪರಿಸ್ಥಿತಿ ಸದ್ಯ ನಿರ್ಮಾಣವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಬ್ಯುಸಿಯಾಗಿರುವ ನಗರವಾಸಿಗಳು ಮತಗಟ್ಟೆಗಳಿಗೆ ಬಂದು ಮತಚಲಾಯಿಸಲು ಮಾತ್ರ ನಿರಾಕರಿ ಸುತ್ತಾರೆ. ಹೀಗಾಗಿಯೇ ಮತದಾನದ ಪ್ರಮಾಣ ಕಡಿಮೆ ಯಾಗುತ್ತಿದೆ ಎಂಬುದು ಕೆಲವರ ಅಭಿಪ್ರಾಯ.

ಮಾ.7ರಂದು ಪಾಲಿಕೆಯ ಪರಿಷತ್‌ನ ಈ ಬಾರಿಯ ಅವಧಿ ಪೂರ್ಣ ಗೊಂಡಿದ್ದು, ಅಧಿಕಾರವು ಆಡಳಿತಾಧಿಕಾರಿಗೆ ಹಸ್ತಾಂತರಗೊಂಡಿದೆ. ಮಂಗಳೂರು ಸ್ಮಾರ್ಟ್‌ಸಿಟಿ ವ್ಯವಸ್ಥಾಪಕ ನಿರ್ದೇಶಕ ನಾರಾಯಣಪ್ಪ ಅವರು ಪ್ರಸ್ತುತ ಮನಪಾ ಆಡಳಿತಾಧಿಕಾರಿ ಜವಾಬ್ದಾರಿ ನಿರ್ವಹಿಸತ್ತಿದ್ದಾರೆ. ಇದಕ್ಕೂ ಮುನ್ನ ಪಾಲಿಕೆಯ ಒಟ್ಟು 60 ಸ್ಥಾನಗಳಲ್ಲಿ ಕಾಂಗ್ರೆಸ್‌ 35 ಸ್ಥಾನಗಳನ್ನು ಪಡೆದು ಸ್ವಷ್ಟ ಬಹುಮತ ಪಡೆದುಕೊಂಡಿತ್ತು. ಉಳಿದಂತೆ ಬಿಜೆಪಿ 20, ಜೆಡಿಎಸ್‌ 2, ಸಿಪಿಎಂ 1, ಪಕ್ಷೇತರ 1, ಎಸ್‌ಡಿಪಿಐ 1 ಸದಸ್ಯರನ್ನು ಹೊಂದಿತ್ತು.

ಸರಕಾರದ ಎಡವಟ್ಟು- ಚುನಾವಣೆ ಲೇಟ್‌!
2013 ಮಾ. 7ರಂದು ಪಾಲಿಕೆ ಚುನಾವಣೆ ನಡೆದಿದ್ದು, ಮುಂದಿನ ಚುನಾವಣೆ ಈ ವರ್ಷದ ಮಾರ್ಚ್‌ ವೇಳೆಗೆ ನಡೆಯಬೇಕಿತ್ತು. ಆದರೆ, ಸರಕಾರ ಪ್ರಕಟಿಸಿದ ಮೀಸಲಾತಿಯು ಸಮರ್ಪಕವಾಗಿ ನಡೆದಿಲ್ಲ ಎಂದು ಆರೋಪಿಸಿ ಕೆಲವರು ಹೈಕೋರ್ಟ್‌ ಮೊರೆ ಹೋಗಿದ್ದರು.

ಇದನ್ನು ಪರಿಶೀಲಿಸಿದ ನ್ಯಾಯಾಲಯ ಮೀಸಲಾತಿ ಮರು ಪರಿಷ್ಕರಿಸುವಂತೆ ಸೂಚಿಸಿತ್ತು. ಆದರೆ, ಆ ವೇಳೆಗಾಗುವಾಗಲೇ ಲೋಕ ಸಭಾ ಚುನಾವಣೆಗೆ ರಾಜಕೀಯ ಲೆಕ್ಕಾ ಚಾರಗಳು ನಡೆಯುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಮೀಸಲಾತಿ ಮರು ಪರಿಷ್ಕರಣೆಯನ್ನು ಲೋಕಸಭಾ ಚುನಾವಣೆಯ ಬಳಿಕ ನಡೆಸುವ ಬಗ್ಗೆ ಯೋಚಿಸಿತು. ಆ ಸಂದರ್ಭ ಲೋಕಸಭಾ ಚುನಾವಣೆಗೆ ದಿನಾಂಕ ಪ್ರಕಟವಾಗಿ ನೀತಿ ಸಂಹಿತೆ ಜಾರಿಗೆ ಬಂತು.

ಮತ ಎಣಿಕೆ ನಡೆಯಲಿರುವ ಮೇ 23ರ ವರೆಗೆ ನೀತಿಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಆ ಬಳಿಕ ರಾಜ್ಯಸರಕಾರ ಪರಿಷ್ಕೃತ ಮೀಸಲಾತಿ ಪಟ್ಟಿ ಪ್ರಕಟಿಸಿ ಚುನಾವಣೆ ನಡೆಸಲಿದೆ. ಮುಂದೆ ಮಳೆಗಾಲ ಇರುವ ಕಾರಣದಿಂದ ಸೆಪ್ಟಂಬರ್‌ ವೇಳೆಗೆ ಮನಪಾ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಇನ್ನು ಬಿಜೆಪಿ, ಕಾಂಗ್ರೆಸ್‌ಗೆ ಮನಪಾ ಚುನಾವಣೆಯೇ ಪ್ರತಿಷ್ಠೆಯ ಕಣವಾಗಿದೆ. ಕೈತಪ್ಪಿದ ಪಾಲಿಕೆ ಅಧಿಕಾರವನ್ನು ಮರುಪಡೆಯಲು ಬಿಜೆಪಿ ಹವಣಿಸಿದ್ದರೆ, ಕಾಂಗ್ರೆಸ್‌ ಮತ್ತೂಮ್ಮೆ ಅಧಿಕಾರ ಸೂತ್ರ ಪಡೆಯಲು ಪ್ರಯತ್ನಿಸುತ್ತಿದೆ. ಈ ಸಂಬಂಧ ವಾರ್ಡ್‌ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವ ಚಟುವಟಿಕೆಗಳು ಆರಂಭವಾಗಿವೆ. ಮನಪಾ ಆಡಳಿತ ದೊರೆಯಬೇಕೆಂಬ ಹಠದಿಂದ ಎರಡೂ ಪಕ್ಷಗಳು ಇದೀಗ ರಾಜಕೀಯ ತಾಲೀಮು ಶುರುಮಾಡಿದೆ.

ಚುನಾವಣ ಪ್ರಚಾರ-ಮನಪಾ ಸೀಟು!
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌, ಬಿಜೆಪಿಯ ಮಾಜಿ ಕಾರ್ಪೊರೇಟರ್‌ಗಳು ತಮ್ಮ ವಾರ್ಡ್‌ಗಳಲ್ಲಿ ಬಿರುಸಿನ ಪ್ರಚಾರದಲ್ಲಿ ಭಾಗಿಯಾಗಿದ್ದರು. ಒಂದು ವೇಳೆ ಪಕ್ಷದ ಪರವಾಗಿ ಮತಯಾಚಿಸದಿದ್ದರೆ ಮುಂದಿನ ಪಾಲಿಕೆ ಚುನಾವಣೆಯ ಟಿಕೆಟ್‌ ಸಿಗುವ ಬಗ್ಗೆ ಆತಂಕ ಅವರಲ್ಲಿತ್ತು. ಹೀಗಾಗಿ ಕೆಲವು ವಾರ್ಡ್‌ ವ್ಯಾಪ್ತಿಯಲ್ಲಿ ಮಾಜಿ ಕಾರ್ಪೊರೇಟರ್‌ಗಳು ಬೆಂಬಲಿಗರನ್ನು ಸೇರಿಸಿಕೊಂಡು ಬಹಳಷ್ಟು ಬಿರುಸಿನ ಪ್ರಚಾ ರ ಮಾಡಿದ್ದರು. ಇಷ್ಟಿದ್ದರೂ, ಕೆಲವು ಮಾಜಿ ಕಾರ್ಪೊರೇಟರ್‌ಗಳು ಮಾತ್ರ ಪ್ರಚಾರದ ಬಗ್ಗೆ ಜಾಸ್ತಿ ತಲೆಕೆಡಿಸಿಕೊಂಡಿಲ್ಲ. ಇನ್ನೂ ಕೆಲವರು ಪಕ್ಷದ ನಾಯಕರನ್ನು ಮೆಚ್ಚಿಸುವ ಕಾರಣಕ್ಕಾಗಿ ಒಂದೆರಡು ಮನೆಗಳಿಗೆ ಭೇಟಿ ನೀಡಿ ಪ್ರಚಾರದ ಫೋಟೋ ತೆಗೆದು ಸಾಮಾಜಿಕ ಜಾಲತಾಣ-ಪಕ್ಷದ ವಾಟ್ಸಾಪ್‌ಗ್ಳಲ್ಲಿ ಹಾಕಿ ಪ್ರಚಾರದಲ್ಲಿ ಇರುವ ಬಗ್ಗೆ ಗೊತ್ತುಪಡಿಸುತ್ತಿದ್ದರು. ಇದೆಲ್ಲದರ ಮಧ್ಯೆ ಮನಪಾ ಸ್ಥಾಯೀ ಸಮಿತಿಯ ಮಾಜಿ ಅಧ್ಯಕ್ಷ ಕಾಂಗ್ರೆಸ್‌ನ ರಾಧಾಕೃಷ್ಣ ಅವರು ಲೋಕಸಭಾ ಚುನಾವಣೆಯ ಪ್ರಚಾರ ಪರಾಕಾಷ್ಟೆಯಲ್ಲಿರುವ ಹಂತದಲ್ಲಿಯೇ ದಿಢೀರ್‌ ಆಗಿ ಪಕ್ಷಕ್ಕೆ ರಾಜೀನಾಮೆ ನೀಡಿ ಅಚ್ಚರಿ ಮೂಡಿಸಿದರು.

ಮನಪಾ; 2013ರಲ್ಲಿ ಶೇ.63.29 ಮತದಾನ
60 ವಾರ್ಡ್‌ಗಳನ್ನು ಹೊಂದಿರುವ ಮಂಗಳೂರು ಪಾಲಿಕೆಗೆ 2013ರ ಮಾ. 7ರಂದು ಚುನಾವಣೆಯಲ್ಲಿ ಶೇ. 63.28ರಷ್ಟು ಮತದಾನವಾಗಿತ್ತು. ಅಂದು ಒಟ್ಟು 3,22,293 ಮತದಾರರಲ್ಲಿ 2,07,070 ಮತದಾರರು ಮತ ಚಲಾಯಿಸಿದ್ದರು. 52ನೇ ಕಣ್ಣೂರು ವಾರ್ಡ್‌ನಲ್ಲಿ ಗರಿಷ್ಠ ಶೇ.75.75 ಮತದಾನವಾದರೆ 38ನೇ ಬೆಂದೂರು ವಾರ್ಡ್‌ನಲ್ಲಿ ಕನಿಷ್ಠ ಶೇ. 47.35 ಮತದಾನವಾಗಿತ್ತು. 2007 ಸೆ. 28ರಂದು ನಡೆದ ಮನಪಾ ಚುನಾವಣೆಯಲ್ಲಿ ಕೇವಲ ಶೇ. 60.85ರಷ್ಟು ಮತದಾನವಾಗಿತ್ತು. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 38, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ 22 ಪಾಲಿಕೆಯ ವಾರ್ಡ್‌ಗಳಿವೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.