ತ್ಯಾಜ್ಯ ಸಂಗ್ರಹ: ನಿಗಾ ವಹಿಸಲು ಕ್ಯೂಆರ್‌ ಕೋಡ್‌

ಘನತ್ಯಾಜ್ಯ ಸಂಗ್ರಹ ವ್ಯವಸ್ಥೆ ಇನ್ನು "ಸ್ಮಾರ್ಟ್‌'!

Team Udayavani, Feb 12, 2020, 6:06 AM IST

sds-22

ಮಹಾನಗರ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಘನತ್ಯಾಜ್ಯ ಸಂಗ್ರಹ ವ್ಯವಸ್ಥೆಯನ್ನು “ಸ್ಮಾರ್ಟ್‌’ ಆಗಿ ನಿರ್ವಹಿಸಲು “ಕ್ಯೂ ಆರ್‌ ಕೋಡ್‌’ ಬಳಕೆ ಆರಂಭಿಸಲಾಗಿದೆ. ಮನೆ ಮನೆಗಳಿಂದ ಕಸ ಸಂಗ್ರಹ ಗುತ್ತಿಗೆ ಪಡೆದಿರುವ ಸಂಸ್ಥೆಯ ಸಿಬಂದಿ ನಿಯಮಿತವಾಗಿ ಕಸ ಸಂಗ್ರಹಿಸುತ್ತಿದ್ದಾರೆಯೇ ಎಂಬುದನ್ನು ಪಾಲಿಕೆ ನೇರವಾಗಿ ಗಮನಿಸಲು ಈ ಕ್ಯೂಆರ್‌ ಕೋಡ್‌ ನೆರವಿಗೆ ಬರುತ್ತದೆ. ಸ್ಮಾರ್ಟ್‌ ಸಿಟಿ ಯೋಜನೆಯಡಿ ಈ ವ್ಯವಸ್ಥೆಯನ್ನು ಪ್ರಾಯೋಗಿ ಕವಾಗಿ ಮಣ್ಣಗುಡ್ಡೆ ವಾರ್ಡ್‌ ನಲ್ಲಿ ಆರಂಭಿಸಲಾಗಿದ್ದು, ಇಲ್ಲಿರುವ ಎಲ್ಲ 2,000 ಮನೆ/ ವಸತಿ ಸಂಕೀರ್ಣಗಳಲ್ಲಿ ಇದು ಅನುಷ್ಠಾನಕ್ಕೆ ಬರಲಿದೆ.

ಕಾರ್ಯನಿರ್ವಹಣೆ ಹೇಗೆ
ಮಣ್ಣಗುಡ್ಡೆ ವಾರ್ಡ್‌ನ 500ಕ್ಕೂ ಅಧಿಕ ಮನೆಗಳ ಗೇಟು, ಗೋಡೆಗಳಲ್ಲಿ ಕ್ಯೂಆರ್‌ ಕೋಡ್‌ ಸ್ಟಿಕ್ಕರ್‌ಗಳನ್ನು ಈಗಾಗಲೇ ಲಗತ್ತಿಸಲಾಗಿದೆ. ಕಸ ಸಂಗ್ರಹಿಸುವ ಸಿಬಂದಿ ಕಸ ಸಂಗ್ರಹಕ್ಕಾಗಿ ಮನೆಗಳಿಗೆ ತೆರಳಿ ಅಲ್ಲಿ ಕಸ ಸಂಗ್ರಹವಾದ ಕೂಡಲೇ ತಮ್ಮ ಬಳಿ ಇರುವ ಮೊಬೈಲ್‌ನಲ್ಲಿ ಆ ಕ್ಯೂಆರ್‌ ಕೋಡ್‌ನ್ನು ಸ್ಕ್ಯಾನ್‌ ಮಾಡುತ್ತಾರೆ. ಇದು ಸ್ಮಾರ್ಟ್‌ ಸಿಟಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ “ಇಂಟ ಗ್ರೇಟೆಡ್‌ ಕಮಾಂಡ್‌ ಕಂಟ್ರೋಲ್‌ ಸೆಂಟರ್‌’ಗೆ ಸಂದೇಶ ರವಾನಿಸುತ್ತದೆ. ಸೆಂಟರ್‌ ನಲ್ಲಿರುವ ಅಧಿಕಾರಿ/ಸಿಬಂದಿ ಇದನ್ನು ಗಮನಿಸುತ್ತಾರೆ. ಒಂದು ವೇಳೆ ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡದೇ ಇದ್ದರೆ ಆ ಮನೆಯಿಂದ ಕಸ ಸಂಗ್ರಹಿಸಿಲ್ಲ ಎಂದು ತಿಳಿಯಲಾಗುತ್ತದೆ.

ಕಸ ಪ್ರತ್ಯೇಕಿಸಿ ನೀಡದಿದ್ದರೂ ದಂಡ !
ಈಗ ಪ್ರತಿದಿನ ಹಸಿ ಕಸ, ವಾರ ಕ್ಕೊಮ್ಮೆ ಒಣ ಕಸ(ಡ್ರೈ ವೇಸ್ಟ್‌) ಸಂಗ್ರಹಿಸ ಲಾಗುತ್ತಿದೆ. ಮನೆಗಳಲ್ಲಿ (ಇಂಡಿ ವಿಜುವಲ್‌ ಹೌಸ್‌) ಕಸವನ್ನು ಒಣ ಕಸ ಮತ್ತು ಹಸಿ ಕಸ ಎಂದು ವರ್ಗೀಕರಿಸಿ (ಪ್ರತ್ಯೇಕಿಸಿ) ಕಸ ಸಂಗ್ರಹಿ ಸು ವವರಿಗೆ ನೀಡುವುದನ್ನು ಈ ಹಿಂದೆಯೇ ಕಡ್ಡಾಯ ಮಾಡಲಾಗಿತ್ತು. ಇನ್ನು ಮುಂದೆ ಕಸ ವಿಂಗಡಣೆ ಮಾಡಿ ನೀಡದ ಮನೆಯವರಿಗೂ ದಂಡ ವಿಧಿಸಲಾಗುವುದು. ಹೆಚ್ಚು ತ್ಯಾಜ್ಯ ಉತ್ಪಾದಿಸುವ (ಬಲ್ಕ್ ವೇಸ್ಟ್‌ ಜನರೇಟರ್) ವಸತಿ ಸಂಕೀರ್ಣ, ವಾಣಿಜ್ಯ ಸಂಕೀರ್ಣ, ಹೊಟೇಲ್‌ ಮೊದಲಾದವು ಗಳು ತಮ್ಮಲ್ಲಿಯೇ ತ್ಯಾಜ್ಯ ಸಂಸ್ಕ ರಣ ವ್ಯವಸ್ಥೆ ಮಾಡಿಕೊಳ್ಳುವುದನ್ನು ಈಗಾಗಲೇ ಕಡ್ಡಾಯ ಮಾಡಲಾಗಿದೆ. ಅಳವಡಿಸದಿದ್ದರೆ ದಂಡ ವಿಧಿಸಲಾಗುತ್ತದೆ. ಒಂದು ವೇಳೆ ಮನೆಗಳು(ಇಂಡಿವಿಜುವಲ್‌ ಹೌಸ್‌) ಕೂಡ ತ್ಯಾಜ್ಯ ಸಂಸ್ಕರಣ ವ್ಯವಸ್ಥೆ (ಘಟಕ) ಅಳವಡಿಸಿಕೊಂಡರೆ ಆಸ್ತಿ ತೆರಿಗೆ ಪಾವತಿಸುವಾಗ ಘನ ತ್ಯಾಜ್ಯ ವಿಲೇ ವಾರಿ ಕರದಲ್ಲಿ ಶೇ.50 ಸಬ್ಸಿಡಿ ನೀಡ ಲಾ ಗುವುದು. ಇದೇ ರೀತಿ ತ್ಯಾಜ್ಯ ಸಂಸ್ಕ ರಣ ವ್ಯವಸ್ಥೆ ಅಳವಡಿಸಿಕೊಳ್ಳುವ “ಹೆಚ್ಚು ಕಸ ಉತ್ಪಾದಿಸುವ ಸಂಸ್ಥೆಗಳಿಗೂ (ಬಲ್ಕ್ ವೇಸ್ಟ್‌ ಜನರೇಟರ್) ತೆರಿಗೆ ಸಬ್ಸಿಡಿ ದೊರೆಯುತ್ತದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ವರ್ಷಕ್ಕೆ 35 ಕೋ.ರೂ. ಭಾರ !
ಕಸ ಸಂಗ್ರಹ, ನಿರ್ವಹಣೆ ಮಹಾ ನಗರ ಪಾಲಿಕೆಗೆ ದೊಡ್ಡ ಸವಾಲಾಗಿ ಪರಿಣಮಿಸುತ್ತಿದೆ. ದಿನವೊಂದಕ್ಕೆ 350ರಿಂದ 370 ಟನ್‌ ಕಸ ಉತ್ಪಾದನೆಯಾಗುತ್ತಿದೆ. ವರ್ಷಕ್ಕೆ 35 ಕೋ.ರೂ.ಗಳನ್ನು ಕಸ ಸಂಗ್ರಹಕ್ಕಾಗಿ ವಿನಿಯೋಗಿಸಲಾಗುತ್ತಿದೆ. 120 ವಾಹನಗಳು ಕಸ ಸಂಗ್ರಹದಲ್ಲಿ ನಿರ ತ ವಾಗಿವೆ. 591 ಮಂದಿ ಹೊರಗುತ್ತಿಗೆ ಕಾರ್ಮಿಕರು, 220 ಮಂದಿ ಪೌರ ಕಾರ್ಮಿಕರು, 120 ಮಂದಿ ವಾಹನ ಚಾಲಕರು, 20 ಮಂದಿ ಸೂಪರ್‌ವೈಸರ್‌ಗಳು ಕಸ ಸಂಗ್ರಹ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ತ್ಯಾಜ್ಯ ವಿಂಗಡಣೆ ಸವಾಲು
ಒಟ್ಟು 60 ವಾರ್ಡ್‌ಗಳ ಪೈಕಿ ಸುಮಾರು 15 ವಾರ್ಡ್‌ಗಳ ಮನೆಯವರು(ಇಂಡಿವಿಜುವಲ್‌ ಹೌಸ್‌) ಮಾತ್ರ ಕಸ ವಿಂಗಡಿಸಿ ನೀಡುತ್ತಿದ್ದಾರೆ. ಉಳಿದಲ್ಲಿ ನೀಡದಿರುವುದು ಇದು ಕೂಡ ಕಸ ವಿಲೇವಾರಿ ಸಮರ್ಪಕವಾಗಿ ನಡೆಯಲು ತೊಡ ಕಾಗಿದೆ. ಹಾಗಾಗಿ ಇಂತಹ ಮನೆ ಗಳಲ್ಲಿ ಕಸ ವಿಂಗಡಣೆಯನ್ನು ಕಡ್ಡಾಯಗೊಳಿಸಲಾಗಿದ್ದು ಶೀಘ್ರದಲ್ಲೇ ದಂಡ ಕೂಡ ವಿಧಿಸುವ ಪ್ರಕ್ರಿಯೆ ಆರಂಭಗೊಳ್ಳಲಿದೆ.
– ಮಧು ಮನೋಹರ್‌, ಪರಿಸರ ಎಂಜಿನಿಯರ್‌, ಮನಪಾ

ಎಲ್ಲ ವಾರ್ಡ್‌ಗೆ ವಿಸ್ತರಣೆ
ಮೊದಲ ಹಂತದಲ್ಲಿ ಮಣ್ಣಗುಡ್ಡೆ ವಾರ್ಡ್‌ ನಲ್ಲಿ ಕ್ಯೂಆರ್‌ ಕೋಡ್‌ ನಿಗಾ ವ್ಯವಸ್ಥೆ ಅಳವಡಿಸಲಾಗಿದೆ. ಮುಂದೆ ಈ ವ್ಯವಸ್ಥೆಯನ್ನು ಎಲ್ಲ ವಾರ್ಡ್‌ಗಳಿಗೂ ವಿಸ್ತರಿಸುವ ಯೋಜನೆ ಇದೆ. ಇದರಿಂದ ಕಸ ಸಂಗ್ರಹ ಮಾಹಿತಿ ಸಮರ್ಪಕವಾಗಿ ದೊರೆತು ಅಗತ್ಯ ಕ್ರಮ ಕೈಗೊಳ್ಳಲು ಅನುಕೂಲವಾಗಲಿದೆ.
– ಮಹಮ್ಮದ್‌ ನಜೀರ್‌, ವ್ಯವಸ್ಥಾಪಕ ನಿರ್ದೇಶಕರು, ಸ್ಮಾರ್ಟ್‌ ಸಿಟಿ ಯೋಜನೆ

- ಸಂತೋಷ್‌ ಬೊಳ್ಳೆಟ್ಟು

ಟಾಪ್ ನ್ಯೂಸ್

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.