ಕೆರೆಗಳಿಗೆ ತ್ಯಾಜ್ಯ ನೀರು ಸೇರ್ಪಡೆ ತಡೆಗೆ ಎಸ್‌ಟಿಪಿ


Team Udayavani, Sep 1, 2019, 5:29 AM IST

stp

ಕೆರೆಗಳ ಊರಾಗಿದ್ದ ಮಂಗಳೂರಿನಲ್ಲಿ ಇಂದು ಬೆರಳೆಣಿಕೆಯ ಕೆರೆಗಳು ಮಾತ್ರ ಉಳಿದುಕೊಂಡಿವೆೆ. ಆದರೆ ಅವು ಕೂಡ ಕೊಳಚೆ, ತ್ಯಾಜ್ಯ ನೀರು ಸೇರಿ ಮಲಿನಗೊಂಡು ಉಪಯೋಗಕ್ಕೆ ಬಾರದ ಸ್ಥಿತಿಯಲ್ಲಿವೆ. ಇವುಗಳಿಗೆ ಕೊಳಚೆ ನೀರು, ತ್ಯಾಜ್ಯ ನೀರು ತಡೆಯುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆ, ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳು ಯಶಸ್ವಿಯಾಗಿಲ್ಲ. ಕೆರೆಗಳಿಗೆ ತ್ಯಾಜ್ಯ ನೀರು ಬಿಡದಂತೆ ನೀಡಿದ ಎಚ್ಚರಿಕೆಗಳು ಫಲ ನೀಡಿಲ್ಲ. ಇದಕ್ಕೆ ಸ್ಪಷ್ಟ ಉದಾಹರಣೆ ಗುಜ್ಜರ ಕೆರೆ.

ಇದೇ ರೀತಿಯ ಸಮಸ್ಯೆ ಬೆಂಗಳೂರು ನಗರದಲ್ಲೂ ಕಾಡುತ್ತಿದೆ. ಬೆಂಗಳೂರು ಬೃಹತ್‌ ಮಹಾನಗರ ಪಾಲಿಕೆ (ಬಿಬಿಎಂಪಿ) ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ರೂಪಿಸಿರುವ ವಿಧಾನ ಎಂದರೆ ಕೆರೆಗಳಲ್ಲಿ ತ್ಯಾಜ್ಯನೀರು ಸಂಸ್ಕರಣಾ ಘಟಕಗಳನ್ನು (ಎಸ್‌ಟಿಪಿ) ಸ್ಥಾಪಿಸುವುದು. ಈಗಾಗಲೇ ಕೆಲವು ಕೆರೆಗಳಲ್ಲಿ ಎಸ್‌ಟಿಪಿಗಳನ್ನು ಸ್ಥಾಪಿಸಲಾಗಿದೆ. ಇದೇ ಮಾದರಿಯನ್ನು ಮಂಗಳೂರಿನಲ್ಲೂ ಮಹಾನಗರ ಪಾಲಿಕೆ ಅನುಸರಿಸಿದರೆ ಪ್ರಸ್ತುತ ಉಳಿದುಕೊಂಡಿರುವ ಆದರೆ ತ್ಯಾಜ್ಯ, ಕೊಳಚೆ ನೀರಿನಿಂದ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿರುÊಆ‌ ಕೆರೆಗಳನ್ನು ಉಳಿಸಬಹುದು.

ಬೆಂಗಳೂರಿನಲ್ಲಿ ಕೆರೆಗಳಿಗೆ ತ್ಯಾಜ್ಯ ಹಾಗೂ ಕೊಳಚೆ ನೀರು ಸೇರ್ಪಡೆಯಾಗುತ್ತಿದ್ದ ಕಾರಣದಿಂದ ಕೆರೆಗಳು ಮಲಿನವಾಗುತ್ತಿದ್ದವು. ಕೆರೆಗಳಲ್ಲಿ ಬೆಂಕಿನೊರೆಯಂತಹ ಸಮಸ್ಯೆಗಳು ಕಾಡುತ್ತಿವೆೆ. ಕೆಲವು ಕಡೆ ತ್ಯಾಜ್ಯ ನೀರು ಕೆರೆಗಳನ್ನು ಸೇರುತ್ತಿರುವುದರಿಂದ ಅಂತರ್ಜಲವೂ ಮಲೀನವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೆರೆಗಳಿಗೆ ಕೊಳಚೆ ನೀರು ಪ್ರವೇಶಿಸುವುದನ್ನು ತಪ್ಪಿಸಲು ಕೆರೆಗಳಲ್ಲಿ ಎಸ್‌ಟಿಪಿ ಅಳವಡಿಸಲು ಯೋಜನೆ ರೂಪಿಸಿತ್ತು. ಈಗಾಗಲೇ ಬೆಂಗಳೂರಿನ ದೊರೆ ಕೆರೆ, ದಾಸರಹಳ್ಳಿ ಕೆರೆ, ಹೇರೋಹಳ್ಳಿ ಕೆರೆ ಹಾಗೂ ದೀಪಾಂಜಲಿ ಕೇರೆ ಸೇರಿ 5 ಕೆರೆಗಳಲ್ಲಿ ಎಸ್‌ಟಿಪಿ ಕಾರ್ಯಾಚರಿಸುತ್ತಿದೆ. ಇನ್ನು 15 ಕೆರೆಗಳಲ್ಲಿ ಎಸ್‌ಟಿಪಿ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ.

ಈಗಾಗಲೇ ಎಸ್‌ಟಿಪಿ ಅಳವಡಿಕೆ ಮಾಡಿರುವ ಕೆರೆಗಳಲ್ಲಿ ನಿತ್ಯ 4.5 ಎಂಎಲ್ಡಿ ತ್ಯಾಜ್ಯ ನೀರು ಸಂಸ್ಕರಿಸಲಾಗುತ್ತಿದೆ. ಇನ್ನೂ 15 ಕೆರೆಗಳಲ್ಲಿ ಎಸ್‌ಟಿಪಿ ಅಳವಡಿಕೆ ಕಾರ್ಯ ಪೂರ್ಣಗೊಂಡ ಬಳಿಕ 11 ಎಂಎಲ್ಡಿ ತ್ಯಾಜ್ಯ ನೀರು ಸಂಸ್ಕರಣೆಯಾಗಲಿದೆ. ಆ ಮೂಲಕ ಕೆರೆಗಳಿಗೆ ಸೇರುವ ತ್ಯಾಜ್ಯ ನೀರನ್ನು ನಿಯಂತ್ರಿಸಬಹುದು.

ನಗರದಲ್ಲಿರುವ ಕೆರೆಗಳ ಆಧಾರದ ಮೇಲೆ ಎಸ್‌ಟಿಪಿಗಳನ್ನು ಅಳವಡಿಸಲಾಗುತ್ತಿದೆ. ಇದರಂತೆ 10 ಎಕರೆ ಕಮ್ಮಿ ಇರುವ ಕೆರೆಗಳಲ್ಲಿ 500 ಕೆಎಲ್ಡಿ ಸಾಮರ್ಥ್ಯದ ಎಸ್‌ಟಿಪಿಗಳನ್ನು ಅಳವಡಿಸಲಾಗುತ್ತಿದೆ. 10ರಿಂದ 20 ಎಕರೆ ವಿಸ್ತೀರ್ಣದ ಕೆರೆಗಳಲ್ಲಿ 1 ಎಂಎಲ್ಡಿ ಸಾಮರ್ಥ್ಯದ ಎಸ್‌ಟಿಪಿ ಅಳವಡಿಸಲಾಗುತ್ತಿದೆ. 500 ಕೆಎಲ್ಡಿ ಘಟಕ ನಿರ್ಮಾಣಕ್ಕೆ ಸುಮಾರು 1.5 ಕೋ.ರೂ ವೆಚ್ಚವಾಗುತ್ತದೆ. 1 ಎಂಎಲ್ಡಿ ಸಾಮರ್ಥ್ಯದ ಎಸ್‌ಟಿಪಿ ಘಟಕ ನಿರ್ಮಾಣಕ್ಕೆ ಸುಮಾರು 2.5 ಕೋಟಿ ರೂ.ನಿಂದ 3 ಕೋ.ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಕೆರೆಗಳ ನಿರ್ಲಕ್ಷ್ಯ ವಿರುದ್ದ ರಾಜ್ಯ ಹೈಕೋರ್ಟ್‌ ಚಾಟಿ ಬೀಸಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಎಚ್ಚೆತ್ತುಕೊಂಡು ಕೆರೆಗಳ ಅಭಿವೃದ್ದಿ ಕಾರ್ಯಗಳನ್ನು ಕೈಗೆತ್ತಿಕೊಂಡಿತ್ತು.

ಖಾಸಗಿ ಸಹಭಾಗಿತ್ವ
ಬೆಂಗಳೂರಿನ ಕೆರೆಗಳಲ್ಲಿ ಎಸ್‌ಟಿಪಿ ಘಟಕ ಸ್ಥಾಪಿಸಲು ಖಾಸಗಿ ಸಂಸ್ಥೆಗಳು ಸಹಭಾಗಿತ್ವ ನೀಡುತ್ತಿವೆ. ಮಹಾದೇವ ಪುರ ಕೆರೆಯಲ್ಲಿ ದಿನಕ್ಕೆ ಒಂದು ದಶಲಕ್ಷ ಲೀಟರ್‌ಗಳಷ್ಟು ಕೊಳಚೆ ನೀರು ಸಂಸ್ಕರಿಸುವ ಪರಿಸರಸ್ನೇಹಿ ಘಟಕವನ್ನು ಈಗಾಗಲೇ ಲೋಕಾರ್ಪಣೆ ಮಾಡಲಾಗಿದೆ. ಯುನೈಟೆಡ್‌ ವೇ ಬೆಂಗಳೂರು, ಬಿಬಿಎಂಪಿ ಮತ್ತು ಸಿಟಿಜನ್‌ ಗ್ರೂಪ್‌ ಪಾಲುದಾರಿಕೆಯಲ್ಲಿ ಈ ಎಸ್‌ಟಿಪಿ ಘಟಕವನ್ನು ಸ್ಥಾಪಿಸಲಾಗಿದೆ. ಕೆಲವು ಕಾರ್ಪೊರೇಟ್ ಕಂಪೆನಿಗಳು ಇದಕ್ಕೆ ಸಹಕಾರ ನೀಡಿವೆ. ಈ ಘಟಕ ಶುದ್ಧೀಕರಣ ರಾಸಾಯಿನಿಕ ಮುಕ್ತವಾದ ಪ್ರಕ್ರಿಯೆಯನ್ನು ಒಳಗೊಂಡಿದ್ದು ಅತಿ ಕಡಿಮೆ ವಿದ್ಯುತ್‌ನಲ್ಲಿ ತ್ಯಾಜ್ಯ ನೀರು ಸಂಸ್ಕರಿಸಲಾಗುತ್ತಿದೆ. ಬೆಂಗಳೂರು ಮೂಲದ ಕನ್ಸೋರ್ಟಿಯಮ್‌ ಫಾರ್‌ ಡಿವ್ಯಾಟ್ಸ್‌ ಡಿಸ್ಸೆಮೀನೇಷನ್‌ ಸೊಸೈಟಿ ಈ ಶುದ್ಧೀಕರಣ ಘಟಕದ ವಿನ್ಯಾಸ ಮತ್ತು ಅನುಷ್ಠಾನಕ್ಕೆ ತಾಂತ್ರಿಕ ಪರಿಣತಿಯನ್ನು ನೀಡಿದೆ.

ಮಂಗಳೂರು ನಗರದಲ್ಲಿ ಪ್ರಮುಖ ಕೆರೆಗಳಾದ ಗುಜ್ಜರಕೆರೆ, ಕಾವೂರು ಕೆರೆ, ಮೈರಾಡಿ ಕೆರೆ, ಬಗ್ಗುಂಡಿ ಕೆರೆ ಮಲೀನ, ತ್ಯಾಜ್ಯ ನೀರು ಸಮಸ್ಯೆ ಎದುರಿಸುತ್ತಿದೆ. ಕಾಯಕಲ್ಪ ನೀಡಿ ಸಂರಕ್ಷಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆದರೂ ಯಶಸ್ಸು ಲಭಿಸಿಲ್ಲ. ಒಂದಷ್ಟು ಕೆಲಸ ನಡೆದರೂ ಮರು ವರ್ಷ ಕೆರೆ ತನ್ನ ಹಿಂದಿನ ಸ್ವರೂಪಕ್ಕೆ ಮರಳುತ್ತದೆ. ಇದಕ್ಕೆ ಮೂಲ ಕಾರಣ ಕೊಳಚೆ ಹಾಗೂ ತ್ಯಾಜ್ಯ ನೀರು ಕೆರೆಗಳನ್ನು ಸೇರುತ್ತಿರುವುದು. ಅದುದರಿಂದ ಬೆಂಗಳೂರು ಮಾದರಿಯಲ್ಲಿ ಮಂಗಳೂರಿನಲ್ಲೂ ಕೆರೆಗಳಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕಗಳನ್ನು ಅಳವಡಿಸಿ ಮಲೀನ ನೀರು ಸೇರದಂತೆ ತಡೆಯವ ಕಾರ್ಯ ಅವಶ್ಯವಿದೆ. ಮಂಗಳೂರಿನಲ್ಲಿ ಪರಿಸರಾಸಕ್ತ ನಾಗರಿಕರು ಒಟ್ಟು ಸೇರಿ ರಚಿಸಿಕೊಂಡಿರುವ ಕೆಲವು ಕೆರೆ ಸಂರಕ್ಷಣಾ ಸಮಿತಿಗಳು ಕೆರೆಗಳ ಅಭಿವೃದ್ಧಿ ಹಾಗೂ ಸಂರಕ್ಷಣೆಗೆ ಶ್ರಮಿಸುತ್ತಿವೆ. ಅವುಗಳ ಸಹಕಾರವನ್ನು ಪಡೆದುಕೊಳ್ಳಬಹುದಾಗಿದೆ. ಇದಕ್ಕೆ ಆರ್ಥಿಕ ಸಂಪನ್ಮೂಲವನ್ನು ಹೊಂದಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಪೊರೇಟ್ ಸಂಸ್ಥೆಗಳ ಸಹಭಾಗಿತ್ವವನ್ನು ಪಡೆದು ಎಸ್‌ಟಿಪಿಗಳನ್ನು ಅಳವಡಿಸಬಹುದಾಗಿದೆ.

– ಕೇಶವ ಕುಂದರ್‌

ಟಾಪ್ ನ್ಯೂಸ್

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.