ನೀರು ನಿರ್ವಹಣೆಯೇ ಇಲ್ಲಿನ ಬಹು ದೊಡ್ಡ ಸವಾಲು


Team Udayavani, Apr 23, 2019, 8:25 AM IST

37

ನಗರ ಪಂಚಾಯತ್‌ ವ್ಯಾಪ್ತಿಯಲ್ಲಿ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.

ಮೂಲ್ಕಿ: ಇಲ್ಲಿನ ನಗರ ಪಂಚಾಯತ್‌ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ನಿರ್ವಹಣೆಯಲ್ಲಿ ಈವರೆಗೆ ಯಾವುದೇ ಸಮಸ್ಯೆ ಬಾರದಿದ್ದರೂ ಮುಂದಿನ ವಾರದಿಂದ ಈ ಭಾಗದ ನಾಲ್ಕು ಗ್ರಾಮಗಳಿಗೆ ಹೆಚ್ಚಿನ ನೀರು ಪೂರೈಕೆ ಮಾಡಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ.
ಈ ಭಾಗದ ಜನರ ನೀರಿನ ಬೇಡಿಕೆಯನ್ನು ಈಡೇರಿಸುವಲ್ಲಿ ನಗರ ಪಂಚಾಯತ್‌ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದರೂ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದು ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ.

ನಗರ ಪಂಚಾಯತ್‌ ವ್ಯಾಪ್ತಿಯ ಬಹುತೇಕ ಪ್ರದೇಶಗಳು ಉಪ್ಪು ನೀರಿನ ನದಿಯಿಂದ ಸುತ್ತುವರಿದಿರುವುದರಿಂದ ಮಾನಂಪಾಡಿ, ಚಿತ್ರಾಪು, ಬಪ್ಪನಾಡು ಮತ್ತು ಕಾರ್ನಾಡು ಗ್ರಾಮದ ಹೆಚ್ಚಿನ ಭಾಗಗಳಲ್ಲಿ ನದಿಯ ಸಮೀಪವಿರುವ ಬಾವಿ ನೀರು ಮಳೆಗಾಲದಲ್ಲೂ ಕುಡಿಯಲು ಯೋಗ್ಯವಾಗಿಲ್ಲದಿರುವುದು ಇಲ್ಲಿಯ ಬಹು ದೊಡ್ಡ ಸಮಸ್ಯೆಯಾಗಿದೆ.

ವರ್ಷವಿಡೀ ನೀರಿನ ಸಮಸ್ಯೆ ಸಾಮಾನ್ಯ
ವಿಶೇಷವಾಗಿ ಬಪ್ಪನಾಡು ಗ್ರಾಮದ ಚಂದ್ರಶ್ಯಾನುಬಾಗರ ಕುದ್ರು ಪ್ರದೇಶ ನಗರ ಪಂಚಾಯತ್‌ನ ನಳ್ಳಿ ನೀರನ್ನೇ ವರ್ಷವಿಡೀ ಅವಲಂಬಿಸಿಕೊಂಡಿದೆ. ಬಪ್ಪನಾಡು ಗ್ರಾಮದ ಕೊಳಚಿಕಂಬಳ ಮತ್ತು ಚಿತ್ರಾಪು ಗ್ರಾಮದ ಗಜನಿ ಹಾಗೂ ಚಿತ್ರಾಪು ಸ್ಮಶಾನ ರಸ್ತೆಯ ಉದ್ದಕ್ಕೂ ಕುಡಿಯುವ ಶುದ್ಧ ನೀರು ಬಾವಿಯಲ್ಲಿ ಸಿಗುವುದು ಕಷ್ಟ. ಕಾರ್ನಾಡು ಗ್ರಾಮದ ಒಂದು ಮೂಲೆಯಲ್ಲಿರುವ ಕಾರ್ನಾಡು ಸದಾಶಿವ ನಗರ, ಲಿಂಗಪಯ್ಯ ಕಾಡು ಮತ್ತು ಬಿಜಾಪುರ ಕಾಲನಿಯ ಪ್ರದೇಶಗಳು ಬಹುತೇಕ ಹೆಚ್ಚಿನ ಪ್ರಮಾಣದಲ್ಲಿ ಜನ ವಸತಿ ಇದ್ದು, ಇಲ್ಲಿ ವರ್ಷ ವಿಡೀ ನೀರಿನ ಸಮಸ್ಯೆ ಇದೆ.

ಮಂಗಳೂರು ಮಹಾನಗರ ಪಾಲಿಕೆಯ ಕುಳಾಯಿ ಪಂಪ್‌ ಹೌಸ್‌ ಮೂಲಕ ತುಂಬೆಯ ನೀರು ಮೂಲ್ಕಿಗೆ ಸರಬರಾಜು ಆಗುತ್ತಿದೆ. ಇದರ ಹೆಚ್ಚಿನ ಭಾಗವು ಕಾರ್ನಾಡು ಸದಾಶಿವ ನಗರದ ಜನರ ಉಪಯೋಗಕ್ಕಾಗಿ ಬಳಕೆಯಾಗುತ್ತಿದೆ. ಈ ಮಾರ್ಗವಾಗಿ ಇರುವ ಹಳೆಯಂಗಡಿ ಪಂಚಾಯತ್‌ ನೀರನ್ನು ತನ್ನ ಗ್ರಾಮಸ್ಥರಿಗಾಗಿ ಟ್ಯಾಪಿಂಗ್‌ ಮಾಡುತ್ತಿದೆ. ಇದು ಕೂಡ ಮೂಲ್ಕಿ ನಗರ ಪಂಚಾಯತ್‌ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಹೆಚ್ಚಾಗಲು ಕಾರಣವಾಗಿದೆ.

ಈಗಾಗಲೇ ಸ್ಥಳೀಯ ಹಾಗೂ ಇತರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಖಾಸಗಿ ಬಾವಿಯಿಂದ ನೀರು ತೆಗೆದು ಜನರಿಗೆ ಒದಗಿಸಲಾಗುತ್ತಿದ್ದು, ಮುಂದಿನ ಹತ್ತು ದಿನಗಳೊ ಳಗೆ ಮಳೆ ಬಾರದೇ ಇದ್ದರೆ ಇತರ ಗ್ರಾಮಗಳ ಬಾವಿಗಳಲ್ಲೂ ನೀರಿನ ಒರತೆ ಕಡಿಮೆಯಾಗಿ ಸಮಸ್ಯೆ ಬಿಗಡಾಯಿಸುವ ಸಾಧ್ಯತೆ ಇದೆ.

ಕಾರ್ನಾಡು ಕೈಗಾರಿಕಾ ಪ್ರದೇಶ ಸಮೀಪದ ಬಿಜಾಪುರ ಕಾಲನಿ ಮೂಲ್ಕಿಯ ನಗರ ಪಂಚಾಯತ್‌ನ ಅತೀ ಹೆಚ್ಚು ಜನ ಸಂಖ್ಯೆ ಇರುವ ಪ್ರದೇಶವಾಗಿದೆ. ಇಲ್ಲಿ ವಲಸೆ ಬಂದು ಕೂಲಿ ಕಾರ್ಮಿಕರು ಹೆಚ್ಚಾಗಿದ್ದು, ಇಲ್ಲಿನ ಜನರಿಗೆ ಪೂರ್ಣ ಪ್ರಮಾಣದಲ್ಲಿ ನೀರು ಒದಗಿಸುವುದು ನಗರ ಪಂಚಾಯತ್‌ಗೆ ಸವಾಲಾಗಿ ಪರಿಣಮಿಸಿದೆ. ಹೀಗಾಗಿ ಮೂಲ್ಕಿ ಭಾಗದ ನೀರಿನ ಸಮಸ್ಯೆ ಪರಿಹರಿಸಲು ಜಿಲ್ಲಾಡಳಿತ ಹೆಚ್ಚುವರಿ
ಟ್ಯಾಂಕರ್‌ಗಳ ವ್ಯವಸ್ಥೆ ಮಾಡಬೇಕಾದ ಅನಿವಾರ್ಯವಿದೆ.

ಮುಂದಿನ ದಿನಗಳಲ್ಲಿ ಮತ್ತಷ್ಟು ಸಮಸ್ಯೆ
ಹೆಚ್ಚಿನ ಬಿಸಿಲು, ಈವರೆಗೆ ಮಳೆ ಬಾರದೇ ಇರುವುದರಿಂದ ಈ ಭಾಗದ ಖಾಸಗಿ ಬಾವಿಗಳಲ್ಲೂ ನೀರಿನ ಒರತೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಜನರ ಬೇಡಿಕೆಯಷ್ಟು ಸಾಧ್ಯವಾಗದಿದ್ದರೂ ನಗರ ಪಂಚಾಯತ್‌ ವತಿಯಿಂದ ಸಾಧ್ಯವಾದಷ್ಟು ಮಟ್ಟಿಗೆ ಖಾಸಗಿ ಬಾವಿಗಳಿಂದ ನೀರು ಪಡೆದು ಟ್ಯಾಂಕರ್‌ ಮೂಲಕ ಒದಗಿಸಲಾಗುತ್ತಿದೆ. ಮುಂದೆ ನೀರಿನ ಸಮಸ್ಯೆ ಇನ್ನಷ್ಟು ಹೆಚ್ಚಾಗುವ ಕಾರಣ ಹಿತಮಿತವಾಗಿ ನೀರನ್ನು ಬಳಕೆ ಮಾಡಲು ಎಲ್ಲರೂ ಸಹಕರಿಸಬೇಕಿದೆ.
 - ಗೋಪಾಲಕೃಷ್ಣ ಶೆಟ್ಟಿ, ಮುಖ್ಯಾಧಿಕಾರಿ ನಗರ ಪಂಚಾಯತ್‌ ಮೂಲ್ಕಿ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.