ಬೇಸಗೆ ಆರಂಭದಲ್ಲೇ ಕಾಡಿದೆ ನೀರಿನ ಸಮಸ್ಯೆ 

Team Udayavani, Mar 22, 2018, 10:49 AM IST

22-March-4.jpg

ಕಿನ್ನಿಗೋಳಿ: ಇಲ್ಲಿನ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಎಳತ್ತೂರು, ನೆಲಗುಡ್ಡೆ, ತಾಳಿಪಾಡಿ ಗುತ್ತು ಹತ್ತಿರ ಹಿಲ್‌ ಟಾಪ್‌, ಪುನರೂರಿನ ಕೆಲವು ಭಾಗದಲ್ಲಿ ಈಗಾಗಲೇ ನೀರಿನ ಸಮಸ್ಯೆ ಆರಂಭವಾಗಿದೆ. ವಾರದಲ್ಲಿ ಎರಡರಿಂದ ಮೂರು ಬಾರಿ ಮಾತ್ರ ನೀರು ಸರಬರಾಜು ಆಗುತ್ತಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಕಿನ್ನಿಗೋಳಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ 8,200 ಜನಸಂಖ್ಯೆ ಇದ್ದು, 1,002 ಕುಡಿಯುವ ನೀರಿನ ಸಂಪರ್ಕ ಇದೆ. 2 ತೆರೆದ ಬಾವಿ, 14 ಕೊಳವೆ ಬಾವಿ ಇದೆ.

ಪೈಪ್‌ಲೈನ್‌ ಸಮಸ್ಯೆ
ಕೊಳವೆ ಬಾವಿ ಮೂಲಕ ನೀರು ಸರಬರಾಜು ಆಗುತ್ತಿದ್ದು, ತೆರೆದ ಬಾವಿಗಳು ಸಂಖ್ಯೆ ಕಡಿಮೆ ಇದೆ. ಬಳ್ಕುಂಜೆಯ ಬಹುಗ್ರಾಮ ನೀರಿನ ಯೋಜನೆ ಮೂಲಕ 4 ಓವರ್‌ಹೆಡ್‌ ಟ್ಯಾಂಕ್‌ಗಳಿಗೆ ನೀರು ತುಂಬಿಸಿ ಸರಬ ರಾಜು ನಡೆಯುತ್ತಿದೆ. ಆದರೇ ಪೈಪ್‌ಲೈನ್‌ ಪದೇ ಪದೇ ಒಡೆದು ಹಾಳಾಗುವುದರಿಂದ ಸಮಸ್ಯೆ ಆಗುತ್ತಿದೆ.

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮೂಲಕ ಸದ್ಯಕ್ಕೆ ವಾರಕ್ಕೆ ಮೂರು ಬಾರಿ ನೀರು ಬರುತ್ತಿದ್ದು, ಕಿನ್ನಿಗೋಳಿ ಗ್ರಾ. ಪಂ. ಹತ್ತಿರದ ಟ್ಯಾಂಕ್‌ ಸಹಿತ 3ಓವರ್‌ ಹೆಡ್‌ ಟ್ಯಾಂಕ್‌ಗಳಿಗೆ ಬರುತ್ತಿದೆ. ಉಳಿದ ಟ್ಯಾಂಕ್‌ಗಳಿಗೆ ಪಂಚಾಯತ್‌ ಕೊಳವೆ ಬಾವಿ ಹಾಗೂ 2 ತರೆದ ಬಾವಿ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.

ಟ್ಯಾಂಕರ್‌ ಮೂಲಕ ನೀರು ಸರಬರಾಜು
ಎಳತ್ತೂರು ನೆಲಗುಡ್ಡೆ ಎತ್ತರದ ಪ್ರದೇಶವಾಗಿದ್ದು, ಡಿಸೆಂಬರ್‌ ಅಂತ್ಯದವರೆಗೆ ಕೊಳವೆ ಬಾವಿ ಮೂಲಕ ನೀರು ಸರಬರಾಜು ಆಗುತ್ತಿದೆ. ಜನವರಿ ಬಳಿಕ ಕೊಳವೆ ಬಾವಿಯಲ್ಲೂ ನೀರು ಇರುವುದಿಲ್ಲ. ಆದುದರಿಂದ ಟ್ಯಾಂಕರ್‌ ಮೂಲಕ ಸರಬರಾಜು ಮಾಡಬೇಕಾಗುತ್ತೆ ಎಂದು ಗ್ರಾಮ ಪಂಚಾಯತ್‌ ಮೂಲಗಳು ತಿಳಿಸಿದೆ. 

ಮಳೆಕೊಯ್ಲು ಯೋಜನೆ
ಗ್ರಾ. ಪಂ. ನಲ್ಲಿ 10 ಕೊಳವೆಬಾವಿ ಮಳೆಕೊಯ್ಲು ಯೋಜ ನೆ ಸಿದ್ಧವಾಗಿದೆ. ಕಿನ್ನಿಗೋಳಿ ಗ್ರಾ.ಪಂ. ನಲ್ಲಿ ಕೊಳವೆಬಾವಿ ಮರುಪೂರಣದ ನೀರು ಇಂಗಿಸುವ ಅನುಷ್ಠಾನದ ಕೆಲಸವೂ ನಡೆದಿದೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ನೀರು ಒಂದು ವಾರದಿಂದ ಆರಂಭವಾಗಿದೆ. ಇದರಿಂದ ನೀರಿನ ಸಮಸ್ಯೆ ಸ್ವಲ್ಪ ಮಟ್ಟಿಗೆ ಕಡಿಮೆ ಆಗಬಹುದು.
– ಅರುಣ್‌ ಪ್ರದೀಪ್‌ ಡಿ’ಸೋಜಾ, ಪಿಡಿಒ

ಸಮರ್ಪಕ ಸರಬರಾಜು
ರಾಜ್ಯ ಹೆದ್ದಾರಿ ಕಾಮಗಾರಿ ಆರಂಭದಲ್ಲಿ ನಮ್ಮ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿನ ಪೈಪ್‌ ಲೈನ್‌ ಹಾಳಾಗಿತ್ತು. ಸದ್ಯದ ಸ್ಥಿತಿಯಲ್ಲಿ ದುರಸ್ತಿ ಹಾಗೂ ಹೊಸ ಪೈಪ್‌ ಲೈನ್‌ ಮೂಲಕವಾಗಿ ಇದ್ದ ನೀರಿನಲ್ಲಿ ಸಮರ್ಪಕವಾಗಿ ನೀರು ಸರಬರಾಜು ಮಾಡಲಾಗುತ್ತಿದೆ. 
-ಫಿಲೋಮಿನಾ ಸಿಕ್ವೇರ,ಅಧ್ಯಕ್ಷರು.
ಕಿನ್ನಿಗೋಳಿ ಗ್ರಾ.ಪಂ.

 ರಘುನಾಥ ಕಾಮತ್‌ ಕೆಂಚನಕೆರೆ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.