ಬಾವಿ,ತೋಡುಗಳಲ್ಲಿ ನೀರಿಂಗಿಸಿ ಕೃಷಿಗೆ ಬಳಸಲು ಚಿಂತನೆ

ಮನೆ ಮನೆಗೆ ಮಳೆಕೊಯ್ಲು' ಉದಯವಾಣಿ ಅಭಿಯಾನದ ಯಶಸ್ಸು

Team Udayavani, Sep 9, 2019, 5:42 AM IST

0709MLR30

ಮೂರು ತಿಂಗಳಲ್ಲೇ ನೀರು ಹೆಚ್ಚಳ
ಕಾಸರಗೋಡಿನ ಬಾಯಾರು ಕೊಡ್ಯಡ್ಕದಲ್ಲಿ ಗೋವಿಂದ-ಪಾರ್ವತಿ ದಂಪತಿ ತಮ್ಮ ಮನೆಯ ಬಾವಿಗೆ ಮಳೆಕೊಯ್ಲು ಅಳವಡಿಸಿದ್ದಾರೆ. ಮಳೆಕೊಯ್ಲು ಅಳವಡಿಸಿ ಮೂರು ತಿಂಗಳುಗಳಲ್ಲೇ ಬಾವಿ ಮತ್ತು ಪಕ್ಕದಲ್ಲಿರುವ ಬೋರ್‌ವೆಲ್‌ನಲ್ಲಿ ನೀರು ಹೆಚ್ಚಳವಾಗಿರುವುದನ್ನು ಗಮನಿಸಿದ್ದಾರೆ.

ಪೈವಳಿಕೆ ಪಂಚಾಯತ್‌ ಅನುದಾನದಲ್ಲಿ ಎಂಜಿನಿಯರ್‌ ಶ್ರೀರಾಮ್‌ ಅವರ ನೇತೃತ್ವದಲ್ಲಿ ಮಳೆಕೊಯ್ಲು ವ್ಯವಸ್ಥೆ ಮಾಡಲಾಗಿದೆ. ಬಾವಿ ಸನಿಹದಲ್ಲಿ ಟ್ಯಾಂಕಿ ಮಾಡಿ, ಅದಕ್ಕೆ ವೈಜ್ಞಾನಿಕ ರೀತಿಯಲ್ಲಿ ಜಲ್ಲಿ, ಮರಳು, ಇದ್ದಿಲು ಹಾಕಿ ಛಾವಣಿ ನೀರನ್ನು ಟ್ಯಾಂಕಿಗೆ ಬಿಡಲಾಗುತ್ತಿದೆ. ಅಲ್ಲಿ ಶುದ್ಧೀಕರಣಗೊಂಡ ನೀರು ಬಾವಿಗೆ ಬೀಳುವಂತೆ ವ್ಯವಸ್ಥೆ ಮಾಡಲಾಗಿದೆ.

ಹಿಂದೆಂದಿಗಿಂತಲೂ ಹೆಚ್ಚು ಅಂದರೆ ಸುಮಾರು 5 ಕೋಲಿನಷ್ಟು ಜಾಸ್ತಿ ನೀರು ಪ್ರಸ್ತುತ ಬಾವಿಯಲ್ಲಿ ಸಂಗ್ರಹವಾಗಿದೆ. ಮನೆ ಸನಿಹದಲ್ಲೇ ಹೊಸದಾಗಿ ಕೊರೆಯಲಾಗಿರುವ ಬೋರ್‌ವೆಲ್‌ನಲ್ಲಿ ಅರ್ಧ ಇಂಚಿನಷ್ಟು ನೀರು ಸಿಕ್ಕಿದ್ದು, ಬಾವಿಗೆ ಮಳೆಕೊಯ್ಲು ವ್ಯವಸ್ಥೆ ಮಾಡಿದ ಅನಂತರ ಬೋರ್‌ವೆಲ್‌ನಲ್ಲಿಯೂ ನೀರು ಹೆಚ್ಚಳವಾಗಿದೆ ಎನ್ನುತ್ತಾರೆ ಮನೆಯ ಸದಸ್ಯ ಆನಂದ್‌ ಕೆ. ಮುಂದಿನ ಬೇಸಗೆಯಲ್ಲಿ ನಮಗೆ ಕುಡಿಯುವ ನೀರಿನ ಸಮಸ್ಯೆಯಾಗದು ಎಂದು ವಿಶ್ವಾಸದಿಂದ ಹೇಳುತ್ತಾರೆ ಅವರು.

ತೋಡಿನ ನೀರನ್ನು ಇಂಗಿಸುವ ಪ್ರಯತ್ನ
ತೋಡಿನಲ್ಲಿ ಹರಿದು ಹೋಗುವ ನೀರನ್ನು ನಿಲ್ಲಿಸಿ ಇಂಗಿಸುವ ಮತ್ತು ಆ ಮೂಲಕ ಭವಿಷ್ಯದಲ್ಲಿ ಕೃಷಿ ಭೂಮಿಗೆ ನೀರು ಪಡೆಯುವ ಪ್ರಯತ್ನವನ್ನು ಬೊಂಡಂತಿಲ ವಾಸುದೇವ ರಾವ್‌ ಮಾಡಿದ್ದಾರೆ.

10 ಅಡಿ ಅಗಲ ಇರುವ ತೋಡಿನಲ್ಲಿ 100 ಅಡಿ ನೀರು ನಿಲ್ಲುವಂತೆ ವ್ಯವಸ್ಥೆ ಮಾಡಲಾಗಿದೆ. ತೋಡಿಗೆ ಕಟ್ಟ ಕಟ್ಟಿ ನೀರನ್ನು ನಿಲ್ಲಿಸಲಾಗಿದೆ. ಇದರಿಂದ ತಿಳಿಯಾದ ನೀರು ತೋಡಿನಲ್ಲಿ ನಿಲುಗಡೆಯಾಗಿದ್ದು, ಅದು ಇಂಗುವ ಬಗ್ಗೆ ವಾಸುದೇವ ರಾವ್‌ ಅವರು ವಿಶ್ವಾಸ ಹೊಂದಿದ್ದಾರೆ. ತೋಟದಲ್ಲಿ ಬಾವಿ ಇರುವುದರಿಂದ ಇಂಗಿದ ನೀರು ಬಾವಿಯಲ್ಲಿ ನೀರು ಹೆಚ್ಚಳವಾಗುವಂತೆ ಮಾಡುವಲ್ಲಿ ಸಹಕಾರಿಯಾಗಬಹುದು ಮತ್ತು ಅದರಿಂದ ತೋಟದ ಅಗತ್ಯಗಳಿಗೆ ನೀರು ಹೆಚ್ಚು ಸಿಗಬಹುದು ಎಂಬ ಯೋಚನೆಯೊಂದಿಗೆ ಅವರು ನೀರಿಂಗಿಸುವ ಪ್ರಯತ್ನ ಮಾಡಿದ್ದಾರೆ.

ನೀವೂ ಅಳವಡಿಸಿ,
ವಾಟ್ಸಪ್‌ ಮಾಡಿ
ಉದಯವಾಣಿಯ ಅಭಿಯಾನದಿಂದ ಪ್ರೇರಣೆಗೊಂಡು ಕಾರ್ಯಾಗಾರದಲ್ಲಿ ಭಾಗವಹಿಸಿದವರು ಈಗ ಕಾರ್ಯೋನ್ಮುಖರಾಗಿ ಮಳೆ ನೀರು ಕೊಯ್ಲು ಪದ್ಧತಿಯನ್ನು ತಮ್ಮ ಮನೆ, ಸಂಘ- ಸಂಸ್ಥೆ, ಧಾರ್ಮಿಕ ಕೇಂದ್ರಗಳಲ್ಲಿ ಅಳವಡಿಸುತ್ತಿದ್ದಾರೆ.
“ಮನೆ ಮನೆಗೆ ಮಳೆಕೊಯ್ಲು’ ಅಭಿಯಾನದಿಂದ ಪ್ರೇರಿತರಾಗಿ ನೀವೂ ನಿಮ್ಮ ಮನೆ, ಮಳೆ ಕೊಯ್ಲು ಪದ್ಧತಿ ಅಳವಡಿಸಿಕೊಂಡಿದ್ದರೆ ಫೋಟೋ ಸಮೇತ ನಮಗೆ ವಿವರವನ್ನು ವಾಟ್ಸಪ್‌ ಮಾಡಿ. ಅವುಗಳನ್ನು ಪತ್ರಿಕೆಯಲ್ಲಿ ಪ್ರಕಟಿಸಿ ಮತ್ತಷ್ಟು ಜನರನ್ನು ಉತ್ತೇಜಿಸೋಣ. 9900567000

ಟಾಪ್ ನ್ಯೂಸ್

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.