ಎಡಮಂಗಲದಲ್ಲಿ ಗಾಳಿ-ಮಳೆ: ನೆಲಕಚ್ಚಿದ ಅಡಿಕೆ ಮರ; ಅಪಾರ ಹಾನಿ

Team Udayavani, Apr 8, 2019, 4:53 PM IST

ಸುಬ್ರಹ್ಮಣ್ಯ/ಬೆಳ್ಳಾರೆ : ಶುಕ್ರವಾರ ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಎಡಮಂಗಲ ಪರಿಸರದಲ್ಲಿ ಅಪಾರ ಹಾನಿಯಾಗಿದೆ. ಮರ ಬಿದ್ದು ಮನೆಗಳಿಗೆ ಹಾನಿಯಾದರೆ, ಭಾರೀ ಗಾಳಿಗೆ ಎಡಮಂಗಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿಯ ಬೃಹತ್‌ ಗಾತ್ರದ ಆಲದ ಮರ ಬುಡ ಸಮೇತ ಉರುಳಿದೆ. ದೇವಸ್ಥಾನದ ಗೋಪುರ ಮತ್ತು ಛಾವಣಿಯ ಹೆಂಚುಗಳು ಹಾರಿ ಹೋಗಿ ಹಾನಿ ಸಂಭವಿಸಿದೆ.
ಎಡಮಂಗಲ ಪರಿಸರದ ನಾರಾಯಣ ನಾಯ್ಕ, ರಾಮಣ್ಣ ಗೌಡ ಖಂಡಿಗ, ಚಂದ್ರಾವತಿ ಯಶವಂತ ಗೌಡ, ಗಿರೀಶ್‌
ನಡುಬೈಲು, ಜಗದೀಶ್‌, ಕುಂಞಿ, ಹುಕ್ರ, ವಾರಿಜಾ ಸುಶೀಲಾ, ಭವ್ಯಾ, ನಡುಬೈಲು ಸುದರ್ಶನ್‌, ದಡ್ಡು ಗೋಪಿನಾಥ್‌
ಮೊದಲಾದವರ ಮನೆಯ ಹೆಂಚುಗಳ ಹಾರಿ ಹೋಗಿವೆ.
ಗಾಳಿ ಸಮೇತ ಭಾರೀ ಮಳೆ ಸುರಿದಿದ್ದು, ವಿದ್ಯುತ್‌ ಕಂಬಗಳು ಬಿದ್ದು ಹಾನಿಯಾಗಿದೆ. ರೈತರ ತೋಟಗಳಲ್ಲಿ ಅಡಿಕೆ ಮರಗಳು ನೆಲಕ್ಕುರುಳಿವೆ. ವಿದ್ಯುತ್‌ ಕಂಬಗಳು ಬಿದ್ದಿರುವುದರಿಂದ ಈ ಪರಿಸರದಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಿದೆ.
ಎಡಮಂಗಲ ಗ್ರಾಮದ ಲೆಕ್ಕಾಧಿಕಾರಿ ಬಸವರಾಜ್‌ ಬಿ. ಹಾಗೂ ಗ್ರಾಮ ಸಹಾಯಕರಾದ ನಾರಾಯಣ ಎಂಜೀರ್‌,
ಎಡಮಂಗಲ ಗ್ರಾಮ ಪಂಚಾಯತ್‌ ಅಧ್ಯಕ್ಷ ಸುಂದರ ಗೌಡ ದೋಳ್ತಿಲ, ಉಪಾಧ್ಯಕ್ಷೆ ಮೋಹಿನಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾಮಕೃಷ್ಣ ರೈ ಮಾಲೆಂಗಿರಿ ಮುಂತಾದವರು ಘಟನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ದೀವಿ ಹಲಸು. ಎಲ್ಲ ಉಷ್ಣ ವಲಯ ಪ್ರದೇಶಗಳಲ್ಲಿ ಬೆಳೆಯುವ ಬೆಳೆಯಿದು. ಮಲಯ ದ್ವೀಪ ಸಮೂಹಗಳ ಮೂಲ ಆಗಿದ್ದು, ಭಾರತದ ನಾನಾ ಭಾಗದಲ್ಲಿ ಇದನ್ನು ಕಾಣಬಹುದು. ವಿವಿಧ ಖಾದ್ಯ...

  • ಹೇರಳ ಆರೋಗ್ಯವರ್ಧಕ ಗುಣಗಳಿರುವ ದಾಳಿಂಬೆಯನ್ನು ಉಪಬೆಳೆಯಾಗಿ ಕೃಷಿ ಮಾಡಬಹುದು. ಮೂಲತಃ ಇರಾನ್‌ ದೇಶಕ್ಕೆ ಸೇರಿರುವ ದಾಳಿಂಬೆಯನ್ನು ಭಾರತದಲ್ಲೂ ಹಲವಾರು ವರ್ಷಗಳಿಂದ...

  • ಕೈಕಾಲುಗಳು ಸಣ್ಣದಾಗಿ, ಹೊಟ್ಟೆ ದೊಡ್ಡದಾಗಿ, ಅದರ ಮೈಮೇಲಿನ ಕೂದಲು ನುಣುಪು ಕಳೆದುಕೊಂಡು ಒರಟಾಗಿ ಕಾಣಿಸತೊಡಗಿದರೆ, ಆ ದನ ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದೆ...

  • "ಅರೇ ಇದೇನಿದು?'ಎಂದು ಯೋಚಿಸಿದ್ದೀರಾ?ತುಂಬಾ ಸರಳ. ಮನೆ ಸುತ್ತ ಮುತ್ತ ಜಾಗದಲ್ಲಿ ಗಿಡಗಳನ್ನು ಬೆಳೆಸಿದರಾಯಿತು. ಮನೆ ಚಿಕ್ಕದು, ಅಂಗಳ ಇಲ್ಲದಿದ್ದರೂ ಚಿಂತೆ ಇಲ್ಲ....

  • ಸಾಮಾನ್ಯವಾಗಿ ಎಲ್ಲರೂ ಮನೆಯ ಅಂದವನ್ನು ಹೆಚ್ಚಿಸಲು, ಸುಂದರವಾಗಿ ಕಾಣಲು ಬಯಸುತ್ತಾರೆ. ಸೋಫಾ, ಲೈಟ್ಸ್‌, ಇನ್ನಿತರ ಅಲಂಕಾರಿಕ ವಸ್ತುಗಳಿಂದ ಮನೆಯನ್ನು ವಿನ್ಯಾಸಗೊಳಿಸುತ್ತೇವೆ....

ಹೊಸ ಸೇರ್ಪಡೆ