ರೆಫ್ರಿಜರೇಟರ್ ಸಿಲಿಂಡರ್ ಸ್ಫೋಟ: ಮಹಿಳೆ ಗಂಭೀರ
Team Udayavani, Jun 10, 2019, 5:19 PM IST
ಸುರತ್ಕಲ್: ಅಡುಗೆ ಮನೆಯಲ್ಲಿ ರೆಫ್ರಿಜರೇಟರ್ ನ ಗ್ಯಾಸ್ ಸಿಲಿಂಡರ್ ಸ್ಪೋಟವಾಗಿ ಮಹಿಳೆಯೋರ್ವರು ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ಮಧ್ಯಾಹ್ನ ಕಾಟಿಪಳ್ಳದಲ್ಲಿ ನಡೆದಿದೆ.
ಫರ್ಝಾನ ( 33 ) ಗಂಭೀರವಾಗಿ ಗಾಯಗೊಂಡವರು. ಇವರ ಪತಿ ಸಿದ್ದಿಕ್ (38) ಮತ್ತು ಒಂದು ವರ್ಷದ ಮಗು ಫರಾನ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಿದ್ದಿಕ್ ಅವರು ಪತ್ನಿ ಮತ್ತು ಮೂವರು ಮಕ್ಕಳೊಂದಿಗೆ ಕಾಟಿಪಳ್ಳ ನಾಲ್ಕನೇ ಬ್ಲಾಕ್ ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇಂದು ಮಧ್ಯಾಹ್ನದ ಸಮಯ ಪತ್ನಿ ಫರ್ಝಾನ ರೆಫ್ರಿಜರೇಟರ್ ನ ಸಿಲಿಂಡರ್ ನಲ್ಲಿ ಗ್ಯಾಸ್ ಸೋರಿಕೆಯನ್ನು ಗಮನಿಸದೆ ಅಡುಗೆ ಮಾಡಲು ಸ್ಟವ್ ಹೊತ್ತಿಸಿದಾಗ ಸಿಲಿಂಡರ್ ಸ್ಪೋಟವಾಗಿದೆ ಎಂದು ತಿಳಿದು ಬಂದಿದೆ.
ಸ್ಪೋಟದ ತೀವ್ರತೆಗೆ ಮನೆಯ ಮೇಲ್ಚಾವಣಿಯು ಭಾಗಶಃ ಸುಟ್ಟು ಹೋಗಿದೆ. ವಿದ್ಯುತ್ ಉಪಕರಣಗಳು, ಬಟ್ಟೆ ಬರೆ, ಅಡುಗೆ ಪಾತ್ರೆಗಳು, ಸುಟ್ಟು ಹೋಗಿವೆ. ಸುಮಾರು 40 ಲಕ್ಷ ಮೌಲ್ಯದ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
ಅಗ್ನಿಶಾಮಕ ದಳ ಮತ್ತು ಸ್ಥಳೀಯರು ಬೆಂಕಿ ನಂದಿಸಲು ಸಹಕರಿಸಿದರು. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ