ಯಶಸ್ವಿನಿಯಡಿ ಸಂಪೂರ್ಣ ಉಚಿತ ಚಿಕಿತ್ಸೆ: ಪ್ರಮೋದ್
Team Udayavani, Apr 18, 2017, 12:35 PM IST
ಬ್ರಹ್ಮಾವರ: ಯಶಸ್ವಿನಿ ಯೋಜನೆಯಲ್ಲಿ ವೈದ್ಯಕೀಯ ಚಿಕಿತ್ಸೆಗೆ ನೀಡುತ್ತಿರುವ 2 ಲಕ್ಷ ರೂ.ಗಳ ವರೆಗಿನ ಮಿತಿಯನ್ನು ಸರಕಾರ ರದ್ದುಗೊಳಿಸಲಿದ್ದು, ಇನ್ನು ಮುಂದೆ ಯಶಸ್ವಿನಿ ಯೋಜನೆಯಡಿ ಪಡೆಯುವ ಚಿಕಿತ್ಸೆ ಎಷ್ಟೇ ವೆಚ್ಚವಾದರೂ ಸಂಪೂರ್ಣ ಉಚಿತವಾಗಲಿದೆ ಎಂದು ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.
ಅವರು ಸೋಮವಾರ ಉಡುಪಿ ಜಿ.ಪಂ., ಕರ್ನಾಟಕ ಆರೋಗ್ಯ ವ್ಯವಸ್ಥೆ ಮತ್ತು ಸುಧಾರಣೆ ಯೋಜನೆ ಆಶ್ರಯದಲ್ಲಿ 9.36 ಕೋಟಿ ರೂ. ಅನುದಾನದ ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.
ಆರೋಗ್ಯ ಇಲಾಖೆಯಲ್ಲಿ ಕಳೆದ 8 ವರ್ಷಗಳಿಂದ ಸ್ಥಗಿತಗೊಂಡಿದ್ದ ನೇಮಕಾತಿ ಪ್ರಕ್ರಿಯೆ ಸಿದ್ದರಾಮಯ್ಯ ಅವರ ಸರಕಾರ ಅಧಿಕಾರಕ್ಕೆ ಬಂದ ಅನಂತರ ಚಾಲನೆ ದೊರೆತು ವಿವಿಧ ಸ್ತರದ ನೇಮಕಾತಿ ನಡೆದಿದೆ. ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸಲಾಗಿದೆ. ಉಡುಪಿ ಜಿಲ್ಲಾಸ್ಪತ್ರೆ ವಠಾರದಲ್ಲಿ ಜೆನರಿಕ್ ಔಷಧ ಕೇಂದ್ರ ತೆರೆಯಲಾಗಿದ್ದು, ಇಲ್ಲಿ ಮಾರುಕಟ್ಟೆ ಬೆಲೆಗಿಂತ ಶೇ. 90 ರಿಯಾಯಿತಿ ದರದಲ್ಲಿ ಔಷಧ ಲಭ್ಯವಾಗುತ್ತಿದೆ. ಅಲ್ಲದೆ ಎಲ್ಲ ಆಸ್ಪತ್ರೆಗಳಲ್ಲಿ ಉಚಿತ ಡಯಾಲಿಸಿಸ್ ಸೇವೆ ಒದಗಿಸುವ ಚಿಂತನೆ ಇದೆ ಎಂದು ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.
ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಸದಸ್ಯರಾದ ಮೈರ್ಮಾಡಿ ಸುಧಾಕರ ಶೆಟ್ಟಿ, ಜನಾರ್ದನ ತೋನ್ಸೆ, ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ಮೈರ್ಮಾಡಿ ಅಶೋಕ್ ಕುಮಾರ್ ಶೆಟ್ಟಿ, ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಸದಸ್ಯರಾದ ಸುಧೀರ್ ಕುಮಾರ್ ಶೆಟ್ಟಿ, ಕುಸುಮಾ ಪೂಜಾರಿ, ವಸಂತಿ ಪೂಜಾರಿ, ದಿನಕರ ಪೂಜಾರಿ, ಡಾ| ಸುನೀತಾ ಡಿ. ಶೆಟ್ಟಿ, ಪ್ರಮುಖರಾದ ವೆರೋನಿಕಾ ಕರ್ನೇಲಿಯೊ, ಉಮೇಶ್ ನಾಯ್ಕ, ಮಲ್ಲಿಕಾ ಬಿ. ಪೂಜಾರಿ, ಸತೀಶ್ ಅಮೀನ್, ನಿತ್ಯಾನಂದ ಬಿ.ಆರ್., ಸರಸ್ವತಿ, ಜಯಲಕ್ಷ್ಮೀ ಎ. ಶೆಟ್ಟಿ, ಪ್ರತಿಮಾ ಶೆಟ್ಟಿ, ಜನಪ್ರತಿನಿಧಿಗಳು, ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ| ರೋಹಿಣಿ ಸ್ವಾಗತಿಸಿ, ತಾ.ಪಂ. ಮಾಜಿ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಹಾರಾಡಿ ಪ್ರಸ್ತಾವನೆಗೈದರು. ಸತೀಶ್ಚಂದ್ರ ಶೆಟ್ಟಿ ಚಿತ್ರಪಾಡಿ ಕಾರ್ಯಕ್ರಮ ನಿರೂಪಿಸಿದರು.
ಸುಸಜ್ಜಿತ ಆಸ್ಪತ್ರೆ
ಬಹ್ಮಾವರದಲ್ಲಿ 30 ಹಾಸಿಗೆಗಳ ಸಾಮ ರ್ಥ್ಯದ 9.36 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ವಾಗುತ್ತಿರುವ ಈ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತುರ್ತು ಚಿಕಿತ್ಸಾ ಘಟಕ, ಸುಸಜ್ಜಿತ ಶಸ್ತ್ರಚಿಕಿತ್ಸಾ ಕೊಠಡಿ, ಎಕ್ಸ್‌ರೇ ಕೊಠಡಿ, ಲ್ಯಾಬೋ
ರೇಟರಿ ಮಾತ್ರವಲ್ಲದೆ ಸೋಲಾರ್ ಬಿಸಿ ನೀರಿನ ವ್ಯವಸ್ಥೆ, ಕೋಲ್ಡ್ ಸ್ಟೋರೇಜ್ ಹೊಂದಿರುವ ಶವಾಗಾರ, ಬೋರ್‌ವೆಲ್, ಮಳೆ ನೀರು ಇಂಗಿ ಸುವ ವ್ಯವಸ್ಥೆ ಇರಲಿದೆ. ವೈದ್ಯರು, ದಾದಿಯರು ಹಾಗೂ ಡಿ ಗ್ರೂಪ್ ಸಿಬಂದಿಗಾಗಿ 16 ವಸತಿಗೃಹ ನಿರ್ಮಾಣ ಆಗಲಿದ್ದು, 12 ತಿಂಗಳ ಅವಧಿಧಿಯಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಸಚಿವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜನರ ಸಮಸ್ಯೆಗೆ ತತ್ಕ್ಷಣ ಸ್ಪಂದನೆ: ಸ್ಥಳೀಯ ಅಧಿಕಾರಿಗಳಿಗೆ ಕೂರ್ಮಾರಾವ್ ಸೂಚನೆ
ಉದಯವಾಣಿ-ಎಂಐಟಿ ಮಳೆ ನೀರು ಕೊಯ್ಲು ಕಾರ್ಯಾಗಾರ: ಸಮಸ್ಯೆಗೆ ಮೊದಲೇ ಪರಿಹಾರ: ಡಾ| ರಾಣ ಕರೆ
ಮದುವೆ ಹಾಲ್ನಲ್ಲಿ ಕಣ್ಮರೆಯಾದ ಚಿನ್ನದ ಸರ ದೈವ ಸನ್ನಿಧಿಯಲ್ಲಿ ಪತ್ತೆ!
ಅಗರಬತ್ತಿ ಉದ್ಯಮಕ್ಕೆ ಅಗತ್ಯದ ವಿನಾಯಿತಿ: ಶೋಭಾ ಕರಂದ್ಲಾಜೆ
ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ: ಉಜ್ವಲ ಭವಿಷ್ಯಕ್ಕಾಗಿ T.A.T