
ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗದಲ್ಲಿ ಎಲ್ಲೋ ಅಲರ್ಟ್
Team Udayavani, Sep 3, 2022, 9:04 AM IST

ಮಂಗಳೂರು/ಉಡುಪಿ : ಕಳೆದ ಕೆಲವು ದಿನಗಳಿಂದ ಬಿರುಸು ಪಡೆದ ಮಳೆ ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ತುಸು ಬಿಡುವು ನೀಡಿತ್ತು. ಮಂಗಳೂರು ನಗರದ ಸಹಿತ ಜಿಲ್ಲೆಯಲ್ಲಿ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಿತ್ತು.
ಉಡುಪಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆಯ ವಾತಾವರಣ ಮುಂದುವರಿದಿದ್ದು, ಗುರುವಾರ ತಡರಾತ್ರಿ, ಶುಕ್ರವಾರ ಸಂಜೆವೇಳೆ ಸಾಧಾರಣ ಮಳೆಯಾಗಿದ್ದು, ಕೆಲವೆಡೇ ಧಾರಾಕಾರ ಮಳೆ ಸುರಿದಿದೆ. ಕಾರ್ಕಳ, ಉಡುಪಿ, ಕುಂದಾಪುರ ಸುತ್ತಮುತ್ತ ಬಿಸಿಲು-ಮೋಡ ಕವಿದ ವಾತಾವರಣದ ನಡುವೆ ಸಣ್ಣದಾಗಿ ಮಳೆಯಾಗಿದೆ.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಶನಿವಾರ ಕರಾವಳಿ ಭಾಗದಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.
ಇದನ್ನೂ ಓದಿ : ದಕ್ಷಿಣ ಕನ್ನಡ, ಉಡುಪಿಯ ಮೂವರಿಗೆ ಉತ್ತಮ ರಾಜ್ಯ ಶಿಕ್ಷಕ ಪ್ರಶಸ್ತಿ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
