ಗ್ರಾಮೀಣ ಜನರಿಗೆ ವರವಾಗಿದ್ದ “ಯಶಸ್ವಿನಿ’ಗೆ ಸಿಗಬೇಕಿದೆ ಮರು ಜೀವ


Team Udayavani, Mar 2, 2022, 7:15 AM IST

ಗ್ರಾಮೀಣ ಜನರಿಗೆ ವರವಾಗಿದ್ದ “ಯಶಸ್ವಿನಿ’ಗೆ ಸಿಗಬೇಕಿದೆ ಮರು ಜೀವ

ಪುತ್ತೂರು: ಗ್ರಾಮೀಣ ಪ್ರದೇಶದ ಸೊಸೈಟಿಗಳಲ್ಲಿ ಚಾಲ್ತಿಯಲ್ಲಿದ್ದ “ಯಶಸ್ವಿನಿ’ ಸ್ವಯಂನಿಧಿ ಶಸ್ತ್ರ ಚಿಕಿತ್ಸಾ ಯೋಜನೆ ಸ್ಥಗಿತಗೊಂಡು ನಾಲ್ಕು ವರ್ಷ ಕಳೆದರೂ ಮರುಜೀವ ನೀಡುವ ಪ್ರಸ್ತಾವನೆ ಇನ್ನೂ ಅನುಷ್ಠಾನಕ್ಕೆ ಬಂದಿಲ್ಲ.

ಪ್ರಸ್ತುತ ಅಸ್ತಿತ್ವದಲ್ಲಿರುವ ಆರೋಗ್ಯ ವಿಮಾ ಯೋಜನೆಗಳಿಗಿಂತ “ಯಶಸ್ವಿನಿ’ ಹೆಚ್ಚು ಅನುಕೂಲಕರ ಎಂದು ರೈತರು ಹೇಳುತ್ತಿದ್ದು, ಆಯುಷ್ಮಾನ್‌ ಭಾರತ್‌ ನಿರೀಕ್ಷಿತ ಫಲ ಕೊಡದ ಕಾರಣ ಅದರೊಂದಿಗಿನ ವಿಲೀನ ರದ್ದು ಮಾಡುವಂತೆ ಒತ್ತಡ ಹೇರಲಾಗಿದೆ.

ಆರೋಗ್ಯ ಕರ್ನಾಟಕ
ಯೋಜನೆಗಾಗಿ ವಿಲೀನ
2018 ಜೂನ್‌ನಲ್ಲಿ ರಾಜ್ಯ ಸರಕಾರ ಯಶಸ್ವಿನಿಯೂ ಸೇರಿದಂತೆ ಎಲ್ಲ ರೀತಿಯ ಆರೋಗ್ಯ ಸೇವೆಗಳನ್ನು ಆಯುಷ್ಮಾನ್‌ ಭಾರತ್‌ ಜತೆ ವಿಲೀನಗೊಳಿಸಿದೆ. ಬಳಿಕ ಖಾಸಗಿ ಆಸ್ಪತ್ರೆಗಳಲ್ಲಿ ನಗದು ರಹಿತ ಚಿಕಿತ್ಸಾ ಸೌಲಭ್ಯದಿಂದ ಜನರು ವಂಚಿತರಾ ದರು. ಸರಕಾರಿ ಆಸ್ಪತ್ರೆಗಳ ಜಿಲ್ಲಾ ಶಸ್ತ್ರಚಿಕಿತ್ಸಕರಿಂದ ಅನುಮತಿ ಪತ್ರ ಪಡೆದು ಖಾಸಗಿ ಆಸ್ಪತ್ರೆಗೆ ದಾಖ ಲಾದರೆ ಮಾತ್ರ ಆರೋಗ್ಯ ಕರ್ನಾ ಟಕ ಯೋಜನೆಯಡಿ ಚಿಕಿತ್ಸೆ ನೀಡಲಾ ಗುತ್ತಿದ್ದು, ಇದರಿಂದ ಜನರಿಗೆ ನಿರೀಕ್ಷಿತ ಪ್ರಯೋಜನ ಸಿಗುತ್ತಿಲ್ಲ. ಯಶಸ್ವಿನಿಗೆ ಹೋಲಿಸಿದರೆ ಈಗಿನ ಯೋಜನೆ ಕಠಿನ ನಿಯಮ ಒಳಗೊಂಡಿದ್ದು, ಅಗತ್ಯ ಸಂದರ್ಭದಲ್ಲಿ ನೆರವಾಗುತ್ತಿಲ್ಲ ಎಂಬ ಆರೋಪ ಇದೆ ಹಾಗೂ ಯಶಸ್ವಿನಿ ಪುನರಾರಂಭಕ್ಕೆ ಆಗ್ರಹ ವ್ಯಕ್ತವಾಗಿದೆ.

ಕಡಿಮೆ ಶುಲ್ಕ, ಗರಿಷ್ಠ ಲಾಭ
ಆಯಾ ಸಹಕಾರ ಕ್ಷೇತ್ರದಲ್ಲಿ (ಸೊಸೈಟಿ) ನೋಂದಣಿ ಆಗಿರುವ ಸದಸ್ಯರಿಗೆ ಪ್ರತೀ ವರ್ಷ 300 ರೂ.ಗಳನ್ನು ಯಶಸ್ವಿನಿಗಾಗಿ ಪಾವತಿಸ ಲಾ  ಗು ತ್ತಿತ್ತು. ಎಸ್‌ಸಿ, ಎಸ್‌ಟಿ ಸಮುದಾಯ ಗಳಿಗೆ 250 ರೂ. ಹಾಗೂ ಇತರ ವರ್ಗಗಳಿಗೆ 50 ರೂ. ಸರಕಾರ ಸಬ್ಸಿಡಿ ನೀಡುತ್ತಿತ್ತು. ಕುಟುಂಬಸ್ಥರೆಲ್ಲರೂ ಯೋಜನೆಗೆ ಒಳಪಡುವುದರಿಂದ ಜನರಿಗೆ ಹೆಚ್ಚು ಅನುಕೂಲಕರವಾಗಿತ್ತು. ಖಾಸಗಿ ವಿಮಾ ಕಂಪೆನಿಗಳು ಆರೋಗ್ಯ ವಿಮೆ ನೀಡುತ್ತಿದ್ದರೂ ವಯಸ್ಸು, ಚಿಕಿತ್ಸಾ ವೆಚ್ಚ, ಕಾಯಿಲೆ ಮಿತಿ -ಹೀಗೆ ನಾನಾ ಇತಿಮಿತಿಗಳಲ್ಲಿ ಚಿಕಿತ್ಸಾ ಸೌಲಭ್ಯ ಒದಗಿಸುತ್ತವೆ. ಆದರೆ “ಯಶಸ್ವಿನಿ’ ಯೋಜನೆಯಲ್ಲಿ ಯಾವುದೇ ಇತಿಮಿತಿ ಇಲ್ಲದಿರುವುದರಿಂದ ಗ್ರಾಮೀಣ ಜನರಿಗೆ ಅನುಕೂಲವಾಗಿತ್ತು.

ನಗದು ರಹಿತ ಚಿಕಿತ್ಸೆ
ವೈದ್ಯಕೀಯ ಕ್ಷೇತ್ರದ 14 ವಿಭಾಗಗಳಲ್ಲಿ ಗುರುತಿಸಿದ 295 ಕಾಯಿಲೆಗಳ 823 ಶಸ್ತ್ರಚಿಕಿತ್ಸೆಗೆ ನಗದು ರಹಿತ ಸೌಲಭ್ಯ ಪಡೆಯಬಹುದು. ಗ್ರಾಮೀಣ ಯಶಸ್ವಿನಿ ಯೋಜನೆಯಡಿ ಒಂದು ಬಾರಿ ಚಿಕಿತ್ಸೆಗೆ ಒಳಗಾದರೆ 1.25 ಲಕ್ಷ ರೂ. ಮಿತಿ ಹಾಗೂ ಒಂದಕ್ಕಿಂತ ಹೆಚ್ಚು ಬಾರಿ ಚಿಕಿತ್ಸೆಗೆ ಒಳಗಾದರೆ 2 ಲಕ್ಷ ರೂ. ವರೆಗೆ ನಗದು ರಹಿತ ಶಸ್ತ್ರ ಚಿಕಿತ್ಸಾ ಸೌಲಭ್ಯ ಪಡೆಯಬಹುದು. ಕೇವಲ 200ರಿಂದ 300 ರೂ. ಪಾವತಿಸಿ ಹಲವು ಕಾಯಿಲೆಗಳಿಗೆ ಶಸ್ತ್ರಚಿಕಿತ್ಸೆ ನಡೆಸುವ ಈ ಯೋಜನೆ ವಿಶ್ವದ ಬೃಹತ್‌ ಆರೋಗ್ಯ ರಕ್ಷಣ ಯೋಜನೆ ಎಂದೇ ಗುರುತಿಸಲಾಗಿತ್ತು. ವಿದೇಶಿ ರಾಷ್ಟ್ರಗಳು ಈ ಯೋಜನೆ ಬಗ್ಗೆ ಮಾಹಿತಿ ಪಡೆಯಲು ಭಾರತವನ್ನು ಸಂಪರ್ಕಿಸಿದ್ದವು. ಫಿಲಿಪ್ಪಿನ್ಸ್‌ನ ವಿಶ್ವ ವಿದ್ಯಾನಿಲಯಗಳಲ್ಲಿ “ಯಶಸ್ವಿನಿ’ ಬಗ್ಗೆ ಪ್ರಬಂಧ ಕೂಡ ಮಂಡನೆಯಾಗಿದೆ. ಈ ಯೋಜನೆಯಡಿ 2018ರ ವರೆಗೆ 13.64 ಲಕ್ಷ ರೈತರಿಗೆ 1,700 ಕೋಟಿ ರೂ. ವೆಚ್ಚದಲ್ಲಿ ಶಸ್ತ್ರಚಿಕಿತ್ಸೆ ಹಾಗೂ 24.48 ಲಕ್ಷ ಹೊರರೋಗಿ ಗಳಿಗೆ ಉಚಿತ ಚಿಕಿತ್ಸೆ ನೀಡಲಾಗಿದೆ ಎನ್ನುತ್ತಿದೆ ಅಂಕಿ -ಅಂಶ.

ಮರು ಆರಂಭದ ಪ್ರಸ್ತಾವ
ಯಶಸ್ವಿನಿಯನ್ನು ಮರು ಆರಂಭಿಸುವ ಬಗ್ಗೆ ಕಳೆದ ವರ್ಷದ ಸರಕಾರ ಹಂತದಲ್ಲಿ ಪ್ರಸ್ತಾವ ಕೇಳಿ ಬಂದಿತ್ತು. ಈ ಮೊದಲಿದ್ದ 905 ಯಶಸ್ವಿನಿ ಯೋಜನೆಗೆ ಒಳಪಟ್ಟ ಆಸ್ಪತ್ರೆಗಳನ್ನು 1,800ಕ್ಕೆ ಹೆಚ್ಚಿಸುವ ಚಿಂತನೆಯೂ ನಡೆದಿತ್ತು. ಯೋಜನೆಗೆ ಸಹಕಾರ ಇಲಾಖೆ ಪ್ರತೀ ವರ್ಷ 300 ಕೋಟಿ ರೂ. ವ್ಯಯಿಸುವ ಬಗ್ಗೆ ಪ್ರಸ್ತಾವ ಕೇಳಿ ಬಂದಿತ್ತು. ಆದರೆ ಅದಿನ್ನೂ ಕಾರ್ಯ ರೂಪಕ್ಕೆ ಬಂದಿಲ್ಲ.

“ಯಶಸ್ವಿನಿ’ ಸ್ವಯಂನಿಧಿ ಶಸ್ತ್ರಚಿಕಿತ್ಸಾ ಯೋಜನೆ ಪುನಾರರಂಭದ ಬೇಡಿಕೆ ಬಂದಿದ್ದು, ಈ ಬಗ್ಗೆ ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗಿದೆ.
– ಎಸ್‌.ಟಿ. ಸೋಮಶೇಖರ್‌, ಸಹಕಾರ ಸಚಿವ

– ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.