ನೇತ್ರಾವತಿ ನೀರುಪಾಲಾದ ಯುವಕನ ಶವ ಕೋಟೆಪುರದಲ್ಲಿ ಪತ್ತೆ
Team Udayavani, Jul 6, 2022, 11:40 AM IST
ಉಳ್ಳಾಲ: ಸಜಿಪಪಡು ಗ್ರಾಮದ ತಲೆಮೊಗರು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಭಾನುವಾರ ಸಂಜೆ ಸ್ನೇಹಿತರೊಂದಿಗೆ ಈಜಲು ಹೋದ ಯುವಕ ಅಶ್ವಿತ್(19) ನೀರುಪಾಲಾಗಿದ್ದು, ಆತನ ಮೃತದೇಹ ಬುಧವಾರ ಉಳ್ಳಾಲದ ಕೋಟೆಪುರ ಕೋಡಿಯ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.
ಸಜಿಪಪಡುವಿನ ತಲೆಮೊಗರು ನಾಗೇಶ್ ಗಾಣಿಗ ಎಂಬವರ ಮನೆಯಲ್ಲಿ ಮಗುವನ್ನ ತೊಟ್ಟಿಲು ತೂಗುವ ಸಮಾರಂಭ ಏರ್ಪಡಿಸಲಾಗಿತ್ತು. ಸಮಾರಂಭದಲ್ಲಿ ಪಾಲ್ಗೊಂಡಿದ್ದ ಅಶ್ವಿಥ್ ಸಂಬಂಧಿಕ ಕಾಲೇಜು ಗೆಳೆಯರೊಂದಿಗೆ ಸಮೀಪದ ನೇತ್ರಾವತಿ ನದಿಗೆ ನೀರಾಟವಾಡಲು ತೆರಳಿದ್ದಾರೆ. ಈ ವೇಳೆ ಅಶ್ವಿತ್ ಮತ್ತು ಹರ್ಷ ನೀರುಪಾಲಾಗಿದ್ದಾರೆ. ಜತೆಯಲ್ಲಿದ್ದ ಯುವಕರು ಹರ್ಷನನ್ನು ರಕ್ಷಿಸಿ ಮೇಲಕ್ಕೆತ್ತಿದ್ದರು. ಅಶ್ವಿತ್ ನಾಪತ್ತೆಯಾಗಿದ್ದರು.
ಇದನ್ನೂಓದಿ: ಕರಾವಳಿಯಲ್ಲಿ ಭಾರೀ ಮಳೆ: ಕಾಸರಗೋಡಿನ ಮಧೂರು ದೇಗುಲ ಜಲಾವೃತ
ಸತತ ಮೂರು ದಿನಗಳಿಂದ ಪೊಲೀಸ್, ಅಗ್ನಿಶಾಮಕ ದಳ ಸಿಬ್ಬಂದಿ, ಸ್ಥಳೀಯರ ಸಹಾಯದಿಂದ ಹುಡುಕಾಟವನ್ನು ನಡೆಸಲಾಗಿದ್ದು, ಬುಧವಾರ ಯುವಕನ ಶವ ಪತ್ತೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್