ಜಿ.ಪಂ., ತಾ.ಪಂ. ಕ್ಷೇತ್ರವಾರು ವಿಂಗಡನೆ ಪೂರ್ಣ: ಕರಡು ಪಟ್ಟಿ ಶೀಘ್ರ ಪ್ರಕಟ

ಕ್ಷೇತ್ರಗಳ ಸಂಖ್ಯೆ ಏರಿಳಿತ :ಜನಸಂಖ್ಯೆ ಅಧಾರದಲ್ಲಿ ಪ್ರಾತಿನಿಧ್ಯ

Team Udayavani, Jun 30, 2022, 6:30 AM IST

ಜಿ.ಪಂ., ತಾ.ಪಂ. ಕ್ಷೇತ್ರವಾರು ವಿಂಗಡನೆ ಪೂರ್ಣ: ಕರಡು ಪಟ್ಟಿ ಶೀಘ್ರ ಪ್ರಕಟ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಕ್ಷೇತ್ರಗಳನ್ನು ಜನಸಂಖ್ಯೆ ಅಧಾರದಲ್ಲಿ ಮರು ವಿಂಗಡಿಸುವ ಕಾರ್ಯ ಪೂರ್ಣಗೊಂಡಿದ್ದು ಹೊಸ ಪಟ್ಟಿ ಕರ್ನಾಟಕ ಪಂಚಾಯತ್‌ರಾಜ್‌ ಸೀಮಾ ನಿರ್ಣಯ ಆಯೋಗಕ್ಕೆ ಸಲ್ಲಿಕೆಯಾಗಿದೆ. ಆಯೋಗ ರಾಜ್ಯವಾರು ಕರಡು ಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸುವ ನಿರೀಕ್ಷೆ ಇದೆ.

ರಾಜ್ಯ ಚುನಾವಣ ಆಯೋಗ ಎಲ್ಲ ಜಿ.ಪಂ., ತಾ.ಪಂ.ಗಳ ಕ್ಷೇತ್ರ ಹಾಗೂ ಸದಸ್ಯರ ಸಂಖ್ಯೆಯನ್ನು ಅಂತಿಮಗೊಳಿಸಿ ಮಾ. 24ರಂದು ರಾಜ್ಯಪತ್ರದಲ್ಲಿ ಪ್ರಕಟಿಸಿತ್ತು. ಆದರೆ ಈ ಹಂತದಲ್ಲಿ ರಾಜ್ಯ ಸರಕಾರ ಜನಸಂಖ್ಯೆ ಆಧಾರದ ಮೇಲೆ ಪ್ರತಿಯೊಂದು ತಾ.ಪಂ. ಮತ್ತು ಜಿ.ಪಂ.ಗೆ ಚುನಾಯಿಸಬೇಕಾದ ಒಟ್ಟು ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಲು ಕರ್ನಾಟಕ ಪಂಚಾಯತ್‌ರಾಜ್‌ ಸೀಮಾ ನಿರ್ಣಯ ಆಯೋಗ ರಚನೆ ಮಾಡಿದ ಹಿನ್ನೆಲೆಯಲ್ಲಿ ಇದು ಸ್ಥಗಿತಗೊಂಡಿತ್ತು. ಆಯೋಗದ ನಿರ್ದೇಶನದಂತೆ ಇದೀಗ ಜಿ.ಪಂ. ಹಾಗೂ ತಾ.ಪಂ. ಕ್ಷೇತ್ರಗಳನ್ನು ಪುನರ್‌ ವಿಂಗಡಿಸಲಾಗಿದೆ.

ಕ್ಷೇತ್ರಗಳ ಸಂಖ್ಯೆಗಳಲ್ಲಿ ಏರಿಳಿತ
ಪುನರ್‌ ವಿಂಗಡನೆಯಂತೆ ಮಾರ್ಚ್‌ನಲ್ಲಿ ಪ್ರಕಟಿಸಿದ ಕ್ಷೇತ್ರಗಳ ಸಂಖ್ಯೆಗೆ ಹೋಲಿಸಿದರೆ ಏರಿಳಿತವಾಗಿದೆ. ಹೊಸ ಮಾರ್ಗಸೂಚಿಯಂತೆ 40,000 ಜನಸಂಖ್ಯೆಗೆ 1 ಜಿ.ಪಂ. ಕ್ಷೇತ್ರದಂತೆ ನಿಗದಿಪಡಿಸಲಾಗಿದೆ. ತಾ.ಪಂ.ನಲ್ಲಿ ಪ್ರತೀ 10,000 ಜನಸಂಖ್ಯೆಗೆ 1 ತಾ.ಪಂ. ಸ್ಥಾನ ನಿಗದಿಪಡಿಸಲಾಗಿದೆ. ಕ್ಷೇತ್ರದ ಒಟ್ಟು ಜನಸಂಖ್ಯೆ 2 ಲಕ್ಷ ಇದ್ದರೆ 19 ಸ್ಥಾನಗಳು, 2.39 ಲಕ್ಷ ಇದ್ದರೆ 20 ಸ್ಥಾನ ದೊರಕುತ್ತವೆ.

ಹೊಸದಾಗಿ ಆಗಿರುವ ಕ್ಷೇತ್ರ ಪುನರ್‌ ವಿಂಗಡನೆಯಲ್ಲಿ ದ.ಕ. ಜಿ.ಪಂ.ನಲ್ಲಿ 35 ಹಾಗೂ 9 ತಾ.ಪಂ.ಗಳಲ್ಲಿ ಒಟ್ಟು 126 ಸ್ಥಾನಗಳು ನಿಗದಿಯಾಗುತ್ತವೆ. 2016ರಲ್ಲಿ ದ.ಕ. ಜಿ.ಪಂ.ನ ಸದಸ್ಯ ಸಂಖ್ಯೆ 36ರ ಆಗಿತ್ತು. ಇದು 2022ರ ಪುನರ್‌ವಿಂಗಡನೆ ವೇಳೆ 42ಕ್ಕೇರಿತ್ತು. ಇದೀಗ ಸೀಮಾ ಆಯೋಗದ ಪುನರ್‌ವಿಂಗಡನೆಯಲ್ಲಿ 35ಕ್ಕಿಳಿದಿದೆ. 5 ತಾ.ಪಂ.ಗಳಿಗೆ 2016ರ ಚುನಾವಣೆ ಸಂದರ್ಭ 136 ಕ್ಷೇತ್ರಗಳಿದ್ದವು. 2022ರ ಪುನರ್‌ ವಿಂಗಡನೆಯಲ್ಲಿ ಹೊಸ 4 ತಾ.ಪಂ.ಗಳು ಸೇರಿ 9 ತಾ.ಪಂ.ಗಳ ಒಟ್ಟು ಒಟ್ಟು 118ಕ್ಕೆ ಇಳಿಕೆಯಾಗಿತ್ತು. ಇದೀಗ ಹೊಸ ವಿಧಾನಸಭಾವಾರು ಪುನರ್‌ವಿಂಗಡನೆಯಲ್ಲಿ 126ಕ್ಕೇರಿದೆ.

ಉಡುಪಿ ಜಿ.ಪಂ.ನ 2016ರ ಚುನಾವಣೆ ಸಂದರ್ಭ ಇದ್ದ 26 ಕ್ಷೇತ್ರಗಳ ಸಂಖ್ಯೆ 2022ರ ಪುನರ್‌ವಿಂಗಡನೆಯಲ್ಲಿ 30ಕ್ಕೇರಿತ್ತು. ಹೊಸ ಪುನರ್‌ವಿಂಗಡನೆಯಲ್ಲಿ ಮತ್ತೆ 26 ಇಳಿಕೆಯಾಗಲಿದೆ. 3 ತಾ.ಪಂ.ಗಳಿಗೆ 2016ರ ಚುನಾವಣೆ ಸಂದರ್ಭ ಒಟ್ಟು 97 ಕ್ಷೇತ್ರಗಳಿದ್ದವು. 2022ರ ಪುನರ್‌ವಿಂಗಡನೆಯಲ್ಲಿ 7 ತಾ.ಪಂ.ಗಳ ಒಟ್ಟು ಸದಸ್ಯ ಸಂಖ್ಯೆ 86ಕ್ಕೆ ಇಳಿದಿತ್ತು. ಇದೀಗ ಹೊಸ ಪುನರ್‌ ವಿಂಗಡನೆಯಲ್ಲಿ 95ಕ್ಕೆ ಏರಿಕೆಯಾಗಲಿದೆ.

ಟಾಪ್ ನ್ಯೂಸ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.