ದಸರಾ ರಜೆ; ಅಕ್ಟೋಬರ್ 1ರಿಂದ 15ರ ತನಕ ದಕ್ಷಿಣ ಕನ್ನಡ ಶಾಲೆಗಳಿಗೆ ರಜೆ ಘೋಷಣೆ
Team Udayavani, Sep 20, 2019, 6:19 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ದಸರಾ ರಜೆಯನ್ನು ಅಕ್ಟೋಬರ್ 1 ರಿಂದ 15 ರ ತನಕ ನೀಡಲು ರಾಜ್ಯ ಸರಕಾರದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವರಾಗಿರುವ ಸುರೇಶ್ ಕುಮಾರ್ ಅವರು ಸೂಚನೆ ನೀಡಿದ್ದಾರೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.
ಈ ಕುರಿತು ಸಚಿವರನ್ನು ಅಭಿನಂದಿಸಿದ ಶಾಸಕ ಕಾಮತ್ ಅವರು ಅಕ್ಟೋಬರ್ 1 ರಿಂದ ದಸರಾ ರಜೆ ಆರಂಭವಾಗುವುದರಿಂದ ದೇವಿ ದೇವಸ್ಥಾನಗಳಲ್ಲಿ ನಡೆಯುವ ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗವಹಿಸಲು ಮಕ್ಕಳಿಗೆ, ಪೋಷಕರಿಗೆ, ಶಿಕ್ಷಕರಿಗೆ, ಶಿಕ್ಷಕೇತರ ಸಿಬ್ಬಂದಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು. ಶಾಸಕ ಕಾಮತ್ ಅವರು ಸಚಿವ ಸುರೇಶ್ ಕುಮಾರ್ ಅವರನ್ನು ವೈಯಕ್ತಿಕವಾಗಿ ಭೇಟಿಯಾಗಿ ಮನವಿ ಸಲ್ಲಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ