ಮುಂದುವರಿದ ಜಿಟಿಜಿಟಿ ಮಳೆ

ಮೂರ್‍ನಾಲ್ಕು ದಿನಗಳಿಂದ ನಿರಂತರ ಮಳೆ•ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು•ಸಾರಥಿ ಸೇತುವೆ ಮೇಲೆ 4 ಅಡಿ ನೀರು

Team Udayavani, Aug 8, 2019, 9:55 AM IST

ದಾವಣಗೆರೆ: ಪ್ರಮುಖ ರಸ್ತೆಯಲ್ಲಿ ಮಳೆ ನೀರು ರಭಸವಾಗಿ ಹರಿಯುತ್ತಿರುವುದು.

ದಾವಣಗೆರೆ: ಕಳೆದ ಎರಡು ದಿನಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಜಟಿ ಜಿಟಿ ಮಳೆ ಬುಧವಾರ ಸಹ ಮುಂದುವರಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಅಬ್ಬರದ ಮಳೆಯಿಂದಾಗಿ ಭರ್ತಿಯಾದ ತುಂಗಾ ಡ್ಯಾಮ್‌ನಿಂದ ಅಧಿಕ ಪ್ರಮಾಣದ ನೀರು ಹೊರ ಹರಿಸಿರುವುದರಿಂದ ತುಂಗಭದ್ರಾ ನದಿ ನೀರು ದಾವಣಗೆರೆ ಜಿಲ್ಲೆಯ ಹರಿಹರ ಹಾಗೂ ಹೊನ್ನಾಳಿ ತಾಲ್ಲೂಕಿನ ಕೆಲವೆಡೆ ಜನರಿಗೆ ಸಂಕಷ್ಟ ತಂದೊಡ್ಡಿದೆ.

ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲೂ ಮೂರ್‍ನಾಲ್ಕು ದಿನಗಳಿಂದ ಅಕ್ಷರಶಃ ಮಲೆನಾಡಿದ ವಾತಾವರಣ ನಿರ್ಮಾಣವಾಗಿದೆ. ನಿರಂತರವಾಗಿ ಜಿಟಿ ಜಿಟಿ ಮಳೆ ಸುರಿಯುತ್ತಿದೆ. ಕೆಲಮೊಮ್ಮೆ ರಭಸವಾಗಿಯೂ ಮಳೆ ಬೀಳುತ್ತಿದೆ.

ಇನ್ನು ತುಂಗಭದ್ರಾ ನದಿ ತುಂಬಿ ಹರಿಯುತ್ತಿರುವುದರಿಂದ ಹೊನ್ನಾಳಿ ಪಟ್ಟಣ, ನದಿ ಪಾತ್ರದ ಹಳ್ಳಿಗಳಲ್ಲಿನ ವಾಸಿಗಳಿಗೆ ಮನೆಗಳ ತೆರವಿಗೆ ಸೂಚಿಸಲಾಗಿದೆ. ಹೊನ್ನಾಳಿಯ ಬಾಲರಾಜ್‌ ಘಾಟ್ ಕೇರಿಯ ಮನೆಗಳಿಗೆ ನದಿ ನೀರು ನುಗ್ಗಿದ್ದು, ಅಲ್ಲಿನ ವಾಸಿಗಳಿಗೆ ಪಕ್ಕದಲ್ಲಿರುವ ಅಂಬೇಡ್ಕರ್‌ ಭವನಕ್ಕೆ ಸ್ಥಳಾಂತರಿಸಲಾಗಿದೆ. ನದಿ ಪಾತ್ರದ ಒಟ್ಟು 30 ಕುಟುಂಬಗಳಿಗೆ ಗಂಜಿಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿದೆ.

ಇನ್ನು ಹರಿಹರ ಪಟ್ಟಣದ ಗಂಗಾನಗರದಲ್ಲೂ ನದಿ ನೀರು ನುಗ್ಗಿದೆ. ಹಾಲಿವಾಣ, ಬೆಳ್ಳೂಡಿಯಲ್ಲಿ ತಲಾ ಎರಡು, ಹಾಗೂ ಕೊಮ್ಮಾರನಹಳ್ಳಿಯಲ್ಲಿ ಮನೆಯೊಂದು ಭಾಗಶಃ ಹಾನಿಗೊಳಗಾಗಿವೆ. ಹರಿಹರ ತಾಲೂಕಿನ ಶ್ರೀಕ್ಷೇತ್ರ ಉಕ್ಕಡಗಾತ್ರಿಯಲ್ಲೂ ನೀರು ನುಗ್ಗಿದೆ. ಸಾರಥಿ-ಚಿಕ್ಕಬಿದರಿ ರಸ್ತೆಯ ಸೇತುವೆ ಮೇಲೆ ನಾಲ್ಕು ಅಡಿ ನೀರು ಹರಿಯುತ್ತಿರುವುದರಿಂದ ಜನಸಂಚಾರಕ್ಕೆ ಬೋಟ್ ಬಳಸಲಾಗುತ್ತಿದೆ. ಹರಿಹರದ ಎಪಿಎಂಸಿಯಲ್ಲಿ ಗಂಜಿಕೇಂದ್ರ ತೆರಯಲಾಗಿದೆ.

ದಾವಣಗೆರೆ ನಗರ ಸೇರಿದಂತೆ ತಾಲೂಕಿನಾದ್ಯಂತ ಕಳೆದ 48 ಗಂಟೆಗಳಿಂದ ಸತತವಾಗಿ ಜಿಟಿ ಜಿಟಿ ಮಳೆ ಸುರಿಯುತ್ತಿದೆ. ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದೆ.

ದಾವಣಗೆರೆ ತಾಲೂಕಲ್ಲಿ 2.3 ಎಂ.ಎಂ. ವಾಡಿಕೆಗೆ 14.1 ಎಂ.ಎಂ.ನಷ್ಟು ವಾಸ್ತವ ಮಳೆ ಆಗಿದೆ. ಹರಿಹರ 2.0 ಮಿ.ಮೀ. ವಾಡಿಕೆಗೆ 20.1 ಮಿಮೀ ವಾಸ್ತವ ಮಳೆ ಸುರಿದಿದೆ. ಹೊನ್ನಾಳಿ 35.6 ಮಿಮೀ, ಚನ್ನಗಿರಿ 35, ಜಗಳೂರು 4.8 ಮಿಮೀ. ಒಟ್ಟು ಸರಾಸರಿ 3.4 ಮಿಮೀ ವಾಡಿಕೆಗೆ 22.5ರಷ್ಟು ವಾಸ್ತವ ಮಳೆ ಸುರಿದಿದೆ.

ದಾವಣಗೆರೆ ತಾಲೂಕು ವ್ಯಾಪ್ತಿಯಲ್ಲಿ 2 ಕಚ್ಚಾ ಮನೆಗಳು ಭಾಗಶ: ಹಾನಿಯಾಗಿದ್ದು, ಅಂದಾಜು 64 ಸಾವಿರ ರೂ. ನಷ್ಟವಾಗಿದೆ. ಹರಿಹರ ತಾಲೂಕಲ್ಲಿ 2 ಕಚ್ಚಾ ಮನೆಗಳು ಭಾಗಶಃ ಹಾನಿಗೊಳಗಾಗಿದ್ದು, ಅಲ್ಲೂ ಸಹ 64 ಸಾವಿರದಷ್ಟು ನಷ್ಟ ಸಂಭವಿಸಿದೆ. ಹೊನ್ನಾಳಿ ತಾಲ್ಲೂಕು ವ್ಯಾಪ್ತಿಯಲ್ಲಿ 8 ಕಚ್ಚಾ ಹಾಗೂ ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 7 ಪಕ್ಕಾ ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಜಗಳೂರು ಮತ್ತು ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ ಯಾವುದೇ ಹಾನಿ ಸಂಭವಿಸಿಲ್ಲ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಮಡಿಕೇರಿ: ದಕ್ಷಿಣ ಕೊಡಗಿನ ವಿವಿಧಡೆ ಹುಲಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗುತ್ತಿರುವ ವಿಷಯ ಹಸಿರಾಗಿರು ವಾಗಲೇ ಬಿಟ್ಟಂಗಾಲ ಸಮೀಪದ ವಿ.ಬಾಡಗದಲ್ಲಿ ಹುಲಿ ಹೆಜ್ಜೆ...

  • ಈ ವಾರ ಬೆಂಗಳೂರಿನಲ್ಲಿ ಪ್ರತೀವರ್ಷದಂತೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗುತ್ತಿದೆ. ಸುಮಾರು 200ಕ್ಕಿಂತಲೂ ಹೆಚ್ಚಿನ ದೇಶವಿದೇಶಗಳ ಚಿತ್ರಗಳನ್ನೂ...

  • ಉಡುಪಿ: ಪಡುಅಲೆವೂರು ಶ್ರೀ ದುರ್ಗಾಪರಮೇಶ್ವರೀ ದೇಗುಲದ ನವೀಕರಣ ಬ್ರಹ್ಮಕಲಶಾಭಿಷೇಕ ಪೂರ್ವಕ ಶತಚಂಡಿಕಾ ಯಾಗ, ಶೈವೋ ತ್ಸವ, ರಂಗಪೂಜೆ ಮಹೋತ್ಸವವು ಫೆ. 24ರಿಂದ 29ರ...

  • ಗರ್ಭಧಾರಣೆ ಎಂಬುದು ಶಿಶು ಜನನವನ್ನು ನಿರೀಕ್ಷಿಸುತ್ತಿರುವ ತಾಯಿ ಮಾತ್ರವಲ್ಲದೆ ಇಡೀ ಕುಟುಂಬವೇ ಹರ್ಷೋಲ್ಲಾಸದಲ್ಲಿ ಇರುವ ಸಮಯ. ಗರ್ಭಧಾರಣೆಯ ಒಂಬತ್ತು ತಿಂಗಳುಗಳ...

  • ಪ್ಲಾಸ್ಟಿಕ್‌ ಇಂದು ಮನುಷ್ಯನ ಜೀವನದ ಅವಿಭಾಜ್ಯ ಅಂಗವಾಗಿದೆ ಎಂದರೆ ತಪ್ಪಾಗಲಾರದು. ಕಡಿಮೆ ವೆಚ್ಚದಲ್ಲಿ ತಯಾರಿಕೆ ಹಾಗೂ ಕೈಗೆಟಕುವ ದರದಲ್ಲಿ ಈ ಪ್ಲಾಸ್ಟಿಕ್‌...