ದಾವಣಗೆರೆ: ಕೋವಿಡ್ 19 ಸೋಂಕಿಗೆ ಒಂದೇ ದಿನ 10 ಬಲಿ
Team Udayavani, Sep 4, 2020, 7:53 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ದಾವಣಗೆರೆ: ಕೋವಿಡ್ 19 ಸೊಂಕಿಗೆ ಜಿಲ್ಲೆಯಲ್ಲಿ ಶುಕ್ರವಾರ ಒಂದೇ ದಿನ ಹತ್ತು ಜನರು ಬಲಿಯಾಗಿದ್ದಾರೆ.
ಮಹಾಮಾರಿ ಕೋವಿಡ್ 19ನಿಂದ ಇದೇ ಮೊದಲ ಬಾರಿಗೆ ಹತ್ತು ಜನರು ಮೃತಪಟ್ಟಿರುವುದು ಜಿಲ್ಲೆಯಲ್ಲಿ ಈವರೆಗಿನ ದಾಖಲೆಯಾಗಿದ್ದು ಕಳವಳ ಮೂಡಿಸಿದೆ.
ಒಂದೇ ದಿನ ಹತ್ತು ಜನರ ಸಾವಿನಿಂದ ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್ 19 ಸೋಂಕಿಗೆ ಬಲಿಯಾದವರ ಸಂಖ್ಯೆ ಇನ್ನೂರರ ಗಡಿ ದಾಟಿದ್ದು ಒಟ್ಟು 206 ಜನರು ಮೃತಪಟ್ಟಿದ್ದಾರೆ.
ಕೋವಿಡ್ 19 ಸೋಂಕಿನ ಜೊತೆಗೆ ಉಸಿರಾಟದ ತೊಂದರೆ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ 72 ವರ್ಷದ ವೃದ್ಧೆ (ರೋಗಿ ನಂಬರ್ 303811), 66 ವರ್ಷದ ವೃದ್ಧ (ರೋಗಿ ನಂಬರ್ 310667), 45 ವರ್ಷದ ವ್ಯಕ್ತಿ (ರೋಗಿ ನಂಬರ್ 311197), 62 ವರ್ಷದ ವೃದ್ಧೆ (ರೋಗಿ ನಂಬರ್ 320533), 43 ವರ್ಷದ ವ್ಯಕ್ತಿ (ರೋಗಿ ನಂಬರ್ 329486), 62 ವರ್ಷದ ವೃದ್ಧ (ರೋಗಿ ನಂಬರ್ 343337), 43 ವರ್ಷದ ಮಹಿಳೆ (ರೋಗಿ ನಂಬರ್ 368020), 70 ವರ್ಷದ ವೃದ್ಧೆ (ರೋಗಿ ನಂಬರ್ 371137),75 ವರ್ಷದ ವೃದ್ಧ (ರೋಗಿ ನಂಬರ್ 371723), 46 ವರ್ಷದ ಮಹಿಳೆ (ರೋಗಿ ನಂಬರ್ 371724) ಮೃತಪಟ್ಟವರು. ಶುಕ್ರವಾರ 263 ಜನರಲ್ಲಿ ಸೋಂಕು ಪತ್ತೆಯಾಗಿದೆ.
ಕೋವಿಡ್ 19 ಸೋಂಕಿನಿಂದ ಗುಣಮುಖರಾದ 125 ಜನರು ಬಿಡುಗಡೆ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 10582 ಪ್ರಕರಣಗಳಲ್ಲಿ 7748 ಜನರು ಬಿಡುಗಡೆಯಾಗಿದ್ದಾರೆ. 2628 ಸಕ್ರಿಯ ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದಲ್ಲಿ 24 ಗಂಟೆಯಲ್ಲಿ 2,259 ಕೋವಿಡ್ ಪ್ರಕರಣ ದೃಢ, ಸಕ್ರಿಯ ಪ್ರಕರಣ 15,044ಕ್ಕೆ ಇಳಿಕೆ
ಭಾರತದಲ್ಲಿ 24ಗಂಟೆಯಲ್ಲಿ 2,364 ಕೋವಿಡ್ ಸೋಂಕು ಪ್ರಕರಣ ದೃಢ, ಹತ್ತು ಮಂದಿ ಸಾವು
ರಾಜ್ಯದಲ್ಲಿ 98 ಮಂದಿಗೆ ಕೋವಿಡ್ ಸೋಂಕು ದೃಢ
ಉತ್ತರ ಕೊರಿಯಾದಲ್ಲಿ ಮಿತಿಮೀರಿದ ಕೋವಿಡ್; ಮೂರು ದಿನದಲ್ಲಿ 820,620 ಪ್ರಕರಣಗಳು ಪತ್ತೆ!
ಭಾರತದಲ್ಲಿ 24 ಗಂಟೆಯಲ್ಲಿ 2,841 ಕೋವಿಡ್ ಪ್ರಕರಣ ಪತ್ತೆ, ಸಾವಿನ ಪ್ರಮಾಣ ಭಾರೀ ಇಳಿಕೆ
MUST WATCH
ಹೊಸ ಸೇರ್ಪಡೆ
ಮಳೆಗೆ ಮತ್ತೆ ನಾಲ್ವರು ಸಾವು; ಸಿಎಂ ತವರು ಹಾವೇರಿಯಲ್ಲಿ ಒಂದೇ ದಿನ 87 ಮನೆ ಕುಸಿತ
28 ಸಾವಿರ ಕೋಟಿ ರೂ. ಅನುದಾನಕ್ಕೆ ಅನುಮೋದನೆ
ರಾಜ್ಯಸಭೆ, ಪರಿಷತ್ ಅಭ್ಯರ್ಥಿ ಆಯ್ಕೆಗೆ ಇಂದು ದಿಲ್ಲಿಗೆ: ಸಿದ್ದರಾಮಯ್ಯ
ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಸೂಚನೆ; ಸ್ಥಳೀಯ ಸಂಸ್ಥೆಗಳ ಆಡಳಿತವನ್ನು ಸರಕಾರ ನಡೆಸುವಂತಿಲ್ಲ
ಇಂದು, ನಾಳೆ ಎಸ್ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ತೀವ್ರ ನಿಗಾ