ಪೇದೆಯಿಂದ ಹಲ್ಲೆ ಆರೋಪ: ಕಲ್ಲು ತೂರಾಟ


Team Udayavani, Feb 16, 2017, 1:19 PM IST

dvg6.jpg

ಹೊನ್ನಾಳಿ: ಸಂತ ಸೇವಾಲಾಲರ ಭಕ್ತನೊಬ್ಬನ ಮೇಲೆ ಪೊಲೀಸ್‌ ಪೇದೆಯೊಬ್ಬರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಸಾವಿರಾರು ಸೇವಾಲಾಲ್‌ ಭಕ್ತರು ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಬುಧವಾರ ನಡೆದಿದೆ. ಕಲ್ಲು ತೂರಾಟದಿಂದ ಠಾಣೆಯ ಕಿಟಕಿ ಗಾಜುಗಳು ಪುಡಿಯಾಗಿದ್ದಲ್ಲದೆ, ಓರ್ವ ಸಬ್‌ ಇನ್ಸ್‌ಪೆಕ್ಟರ್‌, ಇಬ್ಬರು ಪೊಲೀಸರು ಹಾಗೂ ಸಾರ್ವಜನಿಕರಿಬ್ಬರು ಗಾಯಗೊಂಡಿದ್ದಾರೆ. 

ಠಾಣೆಯೆದುರು ಜಮಾಯಿಸಿ ಕಲ್ಲು ತೂರಾಟ ನಡೆಸಿದ ಸಾವಿರಾರು ಮಂದಿಯನ್ನು ಪೊಲೀಸರು ಅಶ್ರುವಾಯು ಸಿಡಿಸಿ ಚದುರಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಸೇವಾಲಾಲ್‌ ಜನ್ಮ ಸ್ಥಳವಾದ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ನಡೆದ ಸೇವಾಲಾಲ್‌ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಭಕ್ತರು ಹೊನ್ನಾಳಿ ಪಟ್ಟಣದ ಮೂಲಕ ತೆರಳುವ ಸಂದರ್ಭದಲ್ಲಿ ಈ ಘಟನೆ ಜರುಗಿದೆ. 

ಇಲ್ಲಿನ ಖಾಸಗಿ ಬಸ್‌ ನಿಲ್ದಾಣದ ಬಳಿ ಭಕ್ತರು ಟ್ರ್ಯಾಕ್ಟರ್‌ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಟ್ರ್ಯಾಕ್ಟರ್‌ ಚಾಲಕ ಹಾಗೂ ಪೊಲೀಸ್‌ ಪೇದೆಯೊಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಇದು ವಿಕೋಪಕ್ಕೆ ತಿರುಗಿದೆ. ಸೇವಾಲಾಲರ ಭಕ್ತರ ಮೇಲೆ ಪೊಲೀಸ್‌ ಹಲ್ಲೆ ನಡೆದಿದೆ ಎಂದು ಸುದ್ದಿ ಹರಡುತ್ತಿದಂತೆ ಠಾಣೆ ಎದುರು ಸಾವಿರಾರು ಮಂದಿ ಸೇರಿದ್ದಾರೆ. ಹಲ್ಲೆ ಮಾಡಿದ ಪೊಲೀಸ್‌ ಪೇದೆಯನ್ನು ಸೇವೆಯಿಂದ ಅಮಾನತು ಮಾಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿ ಧರಣಿ ನಡೆಸಿದರು.

ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಧಿಕಾರಿ ಭೀಮಾಶಂಕರ್‌ ಗುಳೇದ್‌, ಜವಳಿ ಮತ್ತು ಮುಜರಾಯಿ ಸಚಿವ ರುದ್ರಪ್ಪ ಲಮಾಣಿ, ಶಾಸಕ ಡಿ.ಜಿ.ಶಾಂತನಗೌಡ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮತ್ತು ಬಂಜಾರಾ ಸಮಾಜದ ಮುಖಂಡರು ಆಗಮಿಸಿ ಶಾಂತಿ ಕಾಪಾಡಲು ಮನವಿ ಮಾಡಿದರು. ಇದಕ್ಕೆ ಒಪ್ಪದ ಪ್ರತಿಭಟನಾಕಾರರು ಧರಣಿ ಮುಂದುವರಿಸಿ ಠಾಣೆಗೆ ನುಗ್ಗಲು ಯತ್ನಿಸಿದಾಗ ಗುಂಪು ಚದುರಿಸಲು ಅಶ್ರುವಾಯು ಸಿಡಿಸಲಾಯಿತು. 

ಸೇವೆಯಿಂದ ತೆಗೆದು ಹಾಕಲು ಕಾನೂನು ಇಲ್ಲ. ಇದರ ಬಗ್ಗೆ ತನಿಖೆ ಮಾಡಲಾಗುವುದು ಪೊಲೀಸ್‌ ಪೇದೆಯನ್ನು ಸದ್ಯಕ್ಕೆ ಅಮಾನತು ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಧಿಕಾರಿಗಳು, ಆದೇಶದ ಪ್ರತಿಯನ್ನು ಧರಣಿ ನಿರತರಿಗೆ ತೋರಿಸಿದಾಗ ಧರಣಿ ವಾಪಾಸ್‌ ಪಡೆದು ಪ್ರತಿಭಟನಾಕಾರರು ತಮ್ಮ ಗ್ರಾಮಗಳಿಗೆ ತೆರಳಿದರು. ಘಟನೆಯಲ್ಲಿ ವಿಡಿಯೋ ಚಿತ್ರೀಕರಣ ಮಾಡಲಾಗಿದೆ.

ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದವರ ಮೇಲೆ ದೂರು ದಾಖಲು ಮಾಡಲಾಗುವುದು ಹಾಗೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್‌ ವರಿಷ್ಠಾಧಿಧಿಕಾರಿ ಭೀಮಾಶಂಕರ್‌ ತಿಳಿಸಿದರು. ಐಜಿಪಿ ಎಂ.ಎ.ಸಲೀಮ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿವಮೊಗ್ಗ, ದಾವಣಗೆರೆಯಿಂದ  ಮುಂಜಾಗ್ರತ ಕ್ರಮವಾಗಿ ಹೆಚ್ಚಿನ ಪೊಲೀಸರನ್ನು ಕರೆಸಲಾಗಿತ್ತು.  

ಟಾಪ್ ನ್ಯೂಸ್

Road mishap: ಖಾಸಗಿ ಬಸ್ – ಗೂಡ್ಸ್ ವಾಹನದ ನಡುವೆ ಅಪಘಾತ: ಇಬ್ಬರಿಗೆ ಸಣ್ಣಪುಟ್ಟ ಗಾಯ

Road mishap: ಖಾಸಗಿ ಬಸ್ – ಗೂಡ್ಸ್ ವಾಹನದ ನಡುವೆ ಅಪಘಾತ: ಇಬ್ಬರಿಗೆ ಸಣ್ಣಪುಟ್ಟ ಗಾಯ

shivamogga

Shimoga; ವಾಲ್ಮೀಕಿನಿಗಮದ ಚಂದ್ರಶೇಖರ್ ಆತ್ಮಹತ್ಯೆ: ಇಬ್ಬರು ಆರೋಪಿಗಳು ನ್ಯಾಯಾಲಯಕ್ಕೆ ಹಾಜರು

Panaji: Smart city ಕಾಮಗಾರಿಗಳ ವರದಿಯನ್ನು ಸರ್ಕಾರ ಸಿದ್ಧಪಡಿಸುತ್ತಿದೆ: ಗೋವಾ ಸಿಎಂ

Panaji: Smart city ಕಾಮಗಾರಿಗಳ ವರದಿಯನ್ನು ಸರ್ಕಾರ ಸಿದ್ಧಪಡಿಸುತ್ತಿದೆ: ಗೋವಾ ಸಿಎಂ

Chirathe

Chittapura: ಮೇಯಲು ತೆರಳಿದ್ದ ಹೋರಿ ಮೇಲೆ ಚಿರತೆ ದಾಳಿ

ಕೊಹ್ಲಿ, ರೋಹಿತ್ ಕರಿಯರ್ ಮುಗಿಸುವಂತಹ ಷರತ್ತು ಹಾಕಿದ ಗೌತಿ; ಒಪ್ಪಿಗೆ ಕೊಟ್ತಾ ಬಿಸಿಸಿಐ?

ಕೊಹ್ಲಿ, ರೋಹಿತ್ ಕರಿಯರ್ ಮುಗಿಸುವಂತಹ ಷರತ್ತು ಹಾಕಿದ ಗೌತಿ; ಒಪ್ಪಿಗೆ ಕೊಟ್ತಾ ಬಿಸಿಸಿಐ?

Gundlupete: ಕಚೇರಿಯ ಕೊಠಡಿಯಲ್ಲೇ ನೇಣಿಗೆ ಶರಣಾದ ಪೈನಾನ್ಸ್ ಸಿಬ್ಬಂದಿ… ಕಾರಣ ನಿಗೂಢ

Gundlupete: ಕಚೇರಿಯ ಕೊಠಡಿಯಲ್ಲೇ ನೇಣಿಗೆ ಶರಣಾದ ಫೈನಾನ್ಸ್ ಸಿಬ್ಬಂದಿ… ಕಾರಣ ನಿಗೂಢ

protest

BJP protest: ಶಾಸಕ ಅಭಯ ಪಾಟೀಲರನ್ನು ಹೊತ್ತುಕೊಂಡು ವ್ಯಾನ್ ಗೆ ಹಾಕಿದ ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Farmer

Reveled; ಮೃತಪಟ್ಟಿರುವ ರೈತರ ಹೆಸರಿನಲ್ಲೇ ಪಹಣಿ !

Lokayukta

ದಾವಣಗೆರೆ: ಕಂದಾಯ ಅಧಿಕಾರಿ ಮತ್ತು ಎಸ್‌ಡಿಎ ಲೋಕಾಯುಕ್ತ ಬಲೆಗೆ

ಯಾರಿಗೂ, ಯಾವ ಪಕ್ಷ ಗಳಿಗೂ ರೈತರ ಕಾಳಜಿ ಇಲ್ಲ: ಎಚ್‌. ಆರ್‌. ಬಸವರಾಜಪ್ಪ

ಯಾರಿಗೂ, ಯಾವ ಪಕ್ಷ ಗಳಿಗೂ ರೈತರ ಕಾಳಜಿ ಇಲ್ಲ: ಎಚ್‌. ಆರ್‌. ಬಸವರಾಜಪ್ಪ

6

Davangere: ಸರಣಿ ಅಪಘಾತ; ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ಸೇರಿ ಇಬ್ಬರಿಗೆ ಗಂಭೀರ ಗಾಯ

renukaacharya

BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ

MUST WATCH

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

udayavani youtube

ಮುಳ್ಳಯ್ಯನಗಿರಿ,ದತ್ತಪೀಠ, ಸೀತಾಳಯ್ಯನಗಿರಿಯಲ್ಲಿ ಜನಜಾತ್ರೆ; ಖಾಕಿ ಹೈ ಅಲರ್ಟ್

ಹೊಸ ಸೇರ್ಪಡೆ

tankar

ಆನಂದಪುರ – ಶಿಕಾರಿಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಮೃತ್ಯು

Doha; ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸಂಭ್ರಮ

Doha; ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸಂಭ್ರಮ

hejjaru movie releasing on July 19th

Hejjaru; ಪ್ಯಾರಲಲ್‌ ಲೈಫ್ ಸಿನಿಮಾ; ಜುಲೈ 19ಕ್ಕೆ ‘ಹೆಜ್ಜಾರು’ ರಿಲೀಸ್‌

Road mishap: ಖಾಸಗಿ ಬಸ್ – ಗೂಡ್ಸ್ ವಾಹನದ ನಡುವೆ ಅಪಘಾತ: ಇಬ್ಬರಿಗೆ ಸಣ್ಣಪುಟ್ಟ ಗಾಯ

Road mishap: ಖಾಸಗಿ ಬಸ್ – ಗೂಡ್ಸ್ ವಾಹನದ ನಡುವೆ ಅಪಘಾತ: ಇಬ್ಬರಿಗೆ ಸಣ್ಣಪುಟ್ಟ ಗಾಯ

shivamogga

Shimoga; ವಾಲ್ಮೀಕಿನಿಗಮದ ಚಂದ್ರಶೇಖರ್ ಆತ್ಮಹತ್ಯೆ: ಇಬ್ಬರು ಆರೋಪಿಗಳು ನ್ಯಾಯಾಲಯಕ್ಕೆ ಹಾಜರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.