ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಕ್ರಮ ತೆಗೆದುಕೊಳ್ಳುವವರೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ನಿರಂತರ ಪ್ರತಿಭಟನೆ: ಡಿ. ಹನುಮಂತಪ್ಪ

Team Udayavani, May 7, 2022, 5:07 PM IST

action

ದಾವಣಗೆರೆ: ಸಾರ್ವಜನಿಕರ ಸಮಸ್ಯೆ, ಕುಂದುಕೊರತೆ, ಅಹವಾಲುಗಳಿಗೆ ಸ್ಪಂದಿಸದೇ ಇರುವ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಬಹುಜನ ಸಮಾಜ ಪಾರ್ಟಿ ಜಿಲ್ಲಾ ಅಧ್ಯಕ್ಷ ಡಿ. ಹನುಮಂತಪ್ಪ ಒತ್ತಾಯಿಸಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರಾಭಿವೃದ್ಧಿ ಕೋಶ, ಭೂಸೇನಾ ನಿಗಮ, ಯುವಜನ ಸೇವಾ ಮತ್ತು ಕ್ರೀಡಾ, ಕಾರ್ಮಿಕ, ಸಮಾಜ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆಯಲ್ಲಿನ ಕೆಲ ಅಧಿಕಾರಿಗಳು ಸ್ವಯಂ ಜಿಲ್ಲಾಧಿಕಾರಿ ಅವರೇ ಆದೇಶ ನೀಡಿದರೂ ಪಾಲನೆ ಮಾಡದ ಅನೇಕ ಉದಾಹರಣೆ ಇವೆ. ಜಿಲ್ಲಾಧಿಕಾರಿಗಳು ಅಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಹರಿಹರ ನಗರಸಭೆ ವ್ಯಾಪ್ತಿಯಲ್ಲಿ ನೂರಾರು ಮಳಿಗೆಗಳನ್ನು ಅಧಿಕೃತವಾಗಿ ಪರಭಾರೆ ಮಾಡಲಾಗಿದೆ. ನಗರಸಭೆ ಸದಸ್ಯರೊಬ್ಬರು ಐದು ಮಳಿಗೆ ಪಡೆದುಕೊಂಡಿದ್ದಾರೆ. ಹಲವಾರು ವರ್ಷಗಳಿಂದ ಮಳಿಗೆಯಲ್ಲಿ ವ್ಯಾಪಾರ ನಡೆಸುತ್ತಿರುವರಿಗೆ ನೀಡುತ್ತಿರುವ ಕಿರುಕುಳದ ಬಗ್ಗೆ ಸಂಬಂಧಿತ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳೇ ಸೂಚನೆ ನೀಡಿದರೂ ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ. ತಮಗೆ ಬೇಕಾದವರ ಪರವಾಗಿ ಕೆಲಸ ಮಾಡಿದ್ದಾರೆ. ಹಲವಾರು ವರ್ಷಗಳಿಂದ ಇದ್ದವರ ಹೆಸರಲ್ಲೇ ಮಳಿಗೆ ಹಂಚಿಕೆ ಮಾಡಿ, ಮುಂದುವರೆಸಬೇಕು ಎಂದು ಒತ್ತಾಯಿಸಿದರು.

1.20 ಕೋಟಿ ಅನುದಾನದಲ್ಲಿ ಭೂ ಸೇನಾ ನಿಗಮದಿಂದ ಹರಿಜನ ರುದ್ರಭೂಮಿ ಅಭಿವೃದ್ಧಿ ನಾಲ್ಕು ವರ್ಷದಿಂದ ನಡೆಯುತ್ತಿದ್ದರೂ ಕಾಮಗಾರಿ ಪೂರ್ಣಗೊಂಡಿಲ್ಲ. ನಡೆದಿರುವುದು ಸಹ ಕಳಪೆ ಗುಣಮಟ್ಟದ ಕಾಮಗಾರಿ ಎಂದು ದೂರಿದ ಅವರು ಸಂಬಂಧಿತ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿಗಳು 15ದಿನಗಳಲ್ಲಿ ಕ್ರಮ ತೆಗೆದು ಕೊಳ್ಳಬೇಕು. ಇಲ್ಲವಾದಲ್ಲಿ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವವರೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ನಿರಂತರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ರಾಜ್ಯ ಕಾರ್ಯದರ್ಶಿ ಎಚ್‌. ಮಲ್ಲೇಶ್‌ ಮಾತನಾಡಿ, ರಾಜ್ಯದಲ್ಲಿ ಅವ್ಯಾಹತವಾಗಿರುವ ನಕಲಿ ಜಾತಿ ಪ್ರಮಾಣ ಪತ್ರ ಪಡೆದವರ ವಿರುದ್ಧ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಎಐಡಿಜಿಪಿ ಡಾ| ರವೀಂದ್ರನಾಥ್‌ ಸೂಕ್ತ ಕ್ರಮ ಕೈಗೊಂಡಿದ್ದರು. 89 ಅಧಿಕಾರಿಗಳ ವಜಾ, 1400ಕ್ಕೂ ಹೆಚ್ಚು ಅಧಿಕಾರಿಗಳ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ಹೂಡುವ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಬಹಿರಂಗಪಡಿಸಿದ ಎರಡೇ ದಿನಗಳಲ್ಲಿ ವರ್ಗಾವಣೆ ಮಾಡಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ. ಸರ್ಕಾರ ಪರಿಶಿಷ್ಟರ ಜಾತಿ ಪ್ರಮಾಣ ಪತ್ರ ದುರುಪಯೋಗ ಪಡಿಸಿಕೊಂಡವರ ಪರ ಇದೆ ಎಂದು ದೂರಿದ ಅವರು ಕೂಡಲೇ ಡಾ| ರವೀಂದ್ರನಾಥ್‌ ಅವರ ವರ್ಗಾವಣೆ ರದ್ಧುಪಡಿಸಿ, ಸಿಆರ್‌ಸಿ ಸೆಲ್‌ನಲ್ಲೇ ಮುಂದುವರೆಸಬೇಕು ಎಂದು ಒತ್ತಾಯಿಸಿದರು. ಯಶೋಧಾ ಪ್ರಕಾಶ್‌ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.