750 ಎಕರೆ ಪ್ರದೇಶಾಭಿವೃದ್ಧಿಗೆ ಕ್ರಮ: ಎಸ್ಸೆಸ್‌

Team Udayavani, Jun 26, 2017, 12:38 PM IST

dvg1.jpg

ದಾವಣಗೆರೆ: ಕೇಂದ್ರ, ರಾಜ್ಯ ಸರ್ಕಾರದ ಸಹಯೋಗದಲ್ಲಿ ರೂಪಿತವಾಗಿರುವ ಸ್ಮಾರ್ಟ್‌ ಸಿಟಿ ಯೋಜನೆಯಡಿ ನಗರದ 750 ಎಕರೆ ಪ್ರದೇಶ ಅಭಿವೃದ್ಧಿಗೆ ಕ್ರಮ ವಹಿಸಲಾಗುತ್ತಿದೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದರು. ಭಾನುವಾರ ಮಂಡಿಪೇಟೆಯ ಲಕ್ಷ್ಮೀ ವೃತ್ತದಲ್ಲಿ ಸ್ಮಾರ್ಟ್‌ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಐದು ವರ್ಷದ ಈ ಸ್ಮಾರ್ಟ್‌ ಸಿಟಿ ಯೋಜನೆಯಡಿ ಅನೇಕ ಪ್ರದೇಶಗಳ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದರು. ಸ್ಮಾರ್ಟ್‌ ಸಿಟಿ ಮತ್ತು ಇತರೆ ಯೋಜನೆಗಳಡಿ ನಗರದ ಮಂಡಕ್ಕಿ ಭಟ್ಟಿಗಳಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿ, ಅಭಿವೃದ್ಧಿ ಪಡಿಸಲು ನೀಲನಕ್ಷೆ ತಯಾರಿಸಲಾಗಿದೆ.

ಕಸ ವಿಲೇವಾರಿ 37 ಕೋಟಿ ರೂ. ಅನುದಾನದಲ್ಲಿ ಸೋಲಾರ್‌ ದೀಪ, ಪಾದಚಾರಿ ಮಾರ್ಗ, ಸೈಕಲ್‌ ಹಾದಿ ನಿರ್ಮಾಣಕ್ಕೆ45 ಕೋಟಿ ರೂ. ಸೇರಿದಂತೆ ಹಲವಾರು ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ಪ್ರಮುಖವಾಗಿ ರಸ್ತೆ ಮರು ನಿರ್ಮಾಣ, ಒಳಚರಂಡಿ, ನೀರು ಸರಬರಾಜು ವ್ಯವಸ್ಥೆ ಭೂಗತ ವಿದ್ಯುತ್‌ ವ್ಯವಸ್ಥೆ ಸೇರಿದಂತೆ ಹಲವಾರು ಕಾಮಗಾರಿಗಳು ಯೋಜನೆಯಲ್ಲಿ ಸೇರಿವೆ ಎಂದು ತಿಳಿಸಿದರು. 

ನಗರ ವ್ಯಾಪ್ತಿಯಲ್ಲಿ ಇನ್ನು ಮುಂದೆ ಯಾವುದೇ ಕಸದ ತೊಟ್ಟಿ ಇಡದೆ ಮನೆಯಿಂದ ನೇರವಾಗಿ ವಾಹನದ ಮೂಲಕವೇ ಕಸ ಸಂಗ್ರಹಿಸಿ, ಘನತ್ಯಾಜ್ಯ ವಸ್ತು ನಿರ್ವಹಣೆ ಸ್ಥಳಕ್ಕೆ ಸಾಗಿಸಲು ಕ್ರಮ ಕೈಗೊಳ್ಳುವ ಕಾಮಗಾರಿಗೆ 37.01 ಕೋಟಿ ರೂ. ಕಾಯ್ದಿರಿಸಲಾಗಿದೆ ಎಂದು ತಿಳಿಸಿದರು. 

ನಗರದ ಹಳೆ ಪೂನಾ-ಬೆಂಗಳೂರು ರಸ್ತೆ,¤ ಜಗಳೂರು ರಸ್ತೆಯ ನಗರಪಾಲಿಕೆಯ ಬಸ್‌ ನಿಲ್ದಾಣ ಆಧುನೀಕರಣಗೊಳಿಸಲು 25 ಕೋಟಿ ರೂ. ಕಾಯ್ದಿರಿಸಲಾಗಿದೆ. ಸರ್ಕಾರಿ ಹಳೆ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಅಭಿವೃದ್ಧಿ, ಹಳೆ ತಾಲೂಕು ಕಚೇರಿಯನ್ನು ತೆರವುಗೊಳಿಸಿ, ಹೊಸ ಕಚೇರಿ ಕಟ್ಟಡ, ವಾಣಿಜ್ಯ ಸಂಕೀರ್ಣ ಕಟ್ಟಡ ನಿರ್ಮಿಸುವುದರ ಜೊತೆಗೆ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು. 

ದುರ್ಗಾಂಬಿಕಾ ದೇವಸ್ಥಾನದ ಸುತ್ತಲೂ ಪರಂಪರೆ ವಾತಾವರಣ ಮತ್ತು ಪಾದಚಾರಿ ರಸ್ತೆ ನಿರ್ಮಾಣ ಅಭಿವೃದ್ಧಿ ಪಡಿಸುವುದರ ಜೊತೆಗೆ ವಾಹನ ಸಂಚಾರ ರಹಿತ ರಸ್ತೆ ನಿರ್ಮಾಣ ಮಾಡಲಾಗುತ್ತದೆ. ಇದಕ್ಕಾಗಿ 6.67 ಕೋಟಿ ರೂ. ಕಾಯ್ದಿರಿಸಲಾಗಿದೆ ಎಂದರು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಹಾಲಿ 400 ಕೋಟಿ ರೂ. ಬಿಡುಗಡೆಯಾಗಿದೆ.

ಜೊತೆಗೆ ವಿವರವಾದ ಅಂದಾಜು ಪಟ್ಟಿ ತಯಾರಿಸಿ ಟೆಂಡರ್‌ ಕರೆಯುವುದರ ಬಗ್ಗೆ ಪಿಎಂಸಿಯಾಗಿ ಐಡೆಕ್‌ ಸಂಸ್ಥೆಯ ನೇಮಕವಾಗಿದ್ದು, ಪ್ರಥಮ ಹಂತವಾಗಿ 3 ರಸ್ತೆಗಳಿಗೆ ಅನುಮೋದನೆ ನೀಡಿದ್ದು, 2 ರಸ್ತೆಗಳ ಕಾಮಗಾರಿಗಳಿಗೆ ಈ ದಿನ ಚಾಲನೆ ನೀಡುತ್ತಿರುವುದು ಅತಿ ಸಂತೋಷದ ವಿಷಯವಾಗಿದೆ ಎಂದು ತಿಳಿಸಿದರು. ನಗರದಲ್ಲಿದ್ದ 150 ಪಾರ್ಕ್‌ಗಳ ಪೈಕಿ ಈಗಾಗಲೇ 50 ಪಾರ್ಕ್‌ಗಳನ್ನು ತೋಟಗಾರಿಕೆ ಇಲಾಖೆಯಿಂದ ಅಭಿವೃದ್ಧಿಪಡಿಸಲಾಗಿದೆ.

ಕುಂದವಾಡ ಕೆರೆಯಲ್ಲಿ ಕಾರಂಜಿ ನಿರ್ಮಾಣ ಮಾಡಲಾಗುತ್ತಿದೆ. ಇದರಿಂದ ವಾಯು ವಿಹಾರಿಗಳಿಗೆ ಅನುಕೂಲವಾಗಲಿದೆ ಎಂದರು. ವಿಧಾನ ಪರಿಷತ್‌ ಸದಸ್ಯ ಅಬ್ದುಲ್‌ ಜಬ್ಟಾರ್‌, ಮೇಯರ್‌ ಅನಿತಾಬಾಯಿ ಮಾಲತೇಶ್‌, ಉಪ  ಮೇಯರ್‌ ಮಂಜಮ್ಮ ಹನುಮಂತಪ್ಪ, ಪಾಲಿಕೆ ಸದ್ಯಸರಾದ ದಿನೇಶ್‌ ಕೆ.ಶೆಟ್ಟಿ, ಶಿವನಹಳ್ಳಿ ರಮೇಶ್‌,  ಲಕ್ಷ್ಮೀದೇವಿ ವೀರಣ್ಣ, ಶ್ರೀನಿವಾಸ್‌, ಚಂದ್ರಪ್ಪ, ಜಿಲ್ಲಾಧಿಕಾರಿ ಡಿ.ಎಸ್‌. ರಮೇಶ್‌, ಪ್ರಭಾರ ಆಯುಕ್ತ ರವೀಂದ್ರ ವೇದಿಕೆಯಲ್ಲಿದ್ದರು.

ಟಾಪ್ ನ್ಯೂಸ್

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.