
ಅನ್ನದಾತರಿಂದ ಕೃಷಿ ಚಟುವಟಿಕೆ ಶುರು : ಈ ಬಾರಿ ಮುಂಗಾರುಪೂರ್ವ ಮಳೆ ಅಭಾವ
ಪ್ರಸಕ್ತ ವರ್ಷ 2.34 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆ ಗುರಿ
Team Udayavani, May 21, 2023, 4:27 PM IST

ದಾವಣಗೆರೆ: ಜಿಲ್ಲೆಯಾದ್ಯಂತ ಈ ಬಾರಿ ಮುಂಗಾರುಪೂರ್ವ ಮಳೆ ಸಮರ್ಪಕವಾಗಿ ಸುರಿಯದೇ ಇದ್ದರೂ ಸುರಿದಿರುವ ಒಂದೆರೆಡು ಮಳೆಯನ್ನೇ ಆಶ್ರಯಿಸಿ ಜಮೀನುಗಳಲ್ಲಿ ಕೃಷಿ ಚಟುವಟಿಕೆ ಗರಿಗೆದರಿದೆ.
ಇನ್ನೊಂದೆಡೆ ಕೃಷಿ ಇಲಾಖೆ ಮುಂಗಾರು ಕೃಷಿಗೆ ಅಗತ್ಯ ಬೀಜ, ಗೊಬ್ಬರ ದಾಸ್ತಾನು-ವಿತರಣೆಯ ಸಿದ್ಧತೆಯಲ್ಲಿ ತೊಡಗಿದೆ. ಪ್ರಸಕ್ತ ವರ್ಷ ಮುಂಗಾರುಪೂರ್ವ ಮಳೆ ವಾಡಿಕೆಗಿಂತ ಅರ್ಧದಷ್ಟು ಮಳೆ ಸುರಿದಿದೆ. ಅಂದರೆ ವಾಡಿಕೆ ಮಳೆ ಸರಾಸರಿ 70 ಮಿಮೀ ಆದರೆ ಈವರೆಗೆ 40 ಮಿಮೀಯಷ್ಟು ಮಾತ್ರ ಮಳೆ ಸುರಿದಿದೆ. ಮುಂದಿನ ದಿನಗಳಲ್ಲಿ ಮಳೆ ಸಕಾಲಕ್ಕೆ ಸುರಿಯುವ ಭರವಸೆಯೊಂದಿಗೆ ಅನ್ನದಾತರರು ತಮ್ಮ ಕೃಷಿ ಕಾಯಕದಲ್ಲಿ ಮಗ್ನರಾಗಿದ್ದಾರೆ.
ಜಿಲ್ಲೆಯಲ್ಲಿ ವಾರ್ಷಿಕ ಸರಾಸರಿ 659 ಮಿಮೀ ವಾಡಿಕೆ ಮಳೆಯಾಗುತ್ತದೆ. ಜಗಳೂರು ತಾಲೂಕಿನಲ್ಲಿ ಕನಿಷ್ಠ ಅಂದರೆ ಸರಾಸರಿ 528 ಮಿಮೀ ವಾಡಿಕೆ ಮಳೆಯಾದರೆ, ಚನ್ನಗಿರಿ ತಾಲೂಕಿನಲ್ಲಿ ಗರಿಷ್ಠ ಸರಾಸರಿ 840 ಮಿಮೀ ವಾಡಿಕೆ ಮಳೆಯಾಗುತ್ತದೆ. ಮುಂಗಾರಿನಲ್ಲಿ ಪ್ರಮುಖವಾಗಿ ಮೆಕ್ಕೆಜೋಳ, ಭತ್ತ, ರಾಗಿ, ಜೋಳ, ಕಬ್ಬು, ಸಿರಿಧಾನ್ಯಗಳು, ತೊಗರಿ, ಹೆಸರು, ಶೇಂಗಾ ಹಾಗೂ ಹತ್ತಿ ಬೆಳೆಯಲಾಗುತ್ತದೆ. ಮುಖ್ಯವಾಗಿ ಮಳೆಯಾಶ್ರಿತ ಬೆಳೆ ಬೆಳೆಯುವ ರೈತರು ಕೃಷಿ ಸಲಕರಣೆ, ಯಂತ್ರೋಪಕರಣಗಳನ್ನು ಸರಿಪಡಿಸಿಕೊಳ್ಳುತ್ತಿದ್ದಾರೆ. ಜತೆಗೆ ಭೂಮಿಯನ್ನು ಶುಚಿಗೊಳಿಸುವ, ಬಿತ್ತನೆಗೆ ಹದಗೊಳಿಸುವ ಕಾರ್ಯ ಶುರು ಮಾಡಿಕೊಂಡಿದ್ದಾರೆ. ಕೃಷಿ ಕಾರ್ಮಿಕರ ಕೊರತೆ ನಡುವೆಯೂ ಕುಟುಂಬದ ಸದಸ್ಯರ ಸಹಕಾರದೊಂದಿಗೆ ಅನ್ನದಾತರು ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡಿದ್ದು ಅಗತ್ಯ ಬಿತ್ತನೆ ಬೀಜ, ಗೊಬ್ಬರ ಖರೀದಿಗೂ ಮುಂದಾಗಿದ್ದಾರೆ. ಕಳೆದ ಬಾರಿಯಂತೆ ಈ ಬಾರಿಯೂ ಉತ್ತಮ ಮಳೆ ನಿರೀಕ್ಷೆ ಹೊಂದಿರುವ ರೈತರು, ಬೆಳೆ ಬದಲಾವಣೆಯತ್ತವೂ ಚಿತ್ತ ಹರಿಸಿದ್ದಾರೆ. ಮುಖ್ಯವಾಗಿ ಮೆಕ್ಕೆಜೋಳವನ್ನೇ ಬಿತ್ತನೆ ಮಾಡಿಕೊಂಡು ಬಂದಿದ್ದ ರೈತರು, ಈ ಬಾರಿ ಹತ್ತಿ, ತೊಗರಿಯತ್ತ ಸಹ ಮುಖ ಮಾಡುತ್ತಿದ್ದಾರೆ. ಈರುಳ್ಳಿ ಹೆಚ್ಚಾಗಿ
ಬೆಳೆಯುತ್ತಿದ್ದ ಜಗಳೂರು ತಾಲೂಕಿನ ರೈತರು “ಬಿಳಿ ಬಂಗಾರ’ ಖ್ಯಾತಿಯ ಹತ್ತಿ ಬೆಳೆಯಲು ಆಸಕ್ತಿ ತೋರುತ್ತಿದ್ದಾರೆ.
ಬಿತ್ತನೆ ಗುರಿ: ಜಿಲ್ಲೆಯಲ್ಲಿ ಪ್ರಸಕ್ತ ವರ್ಷ 2.34 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. 1.31 ಲಕ್ಷ ಹೆಕ್ಟೇರ್‌ನಲ್ಲಿ ಮೆಕ್ಕೆಜೋಳ, 69,234 ಹೆಕ್ಟೇರ್‌ನಲ್ಲಿ ಭತ್ತ, 14,170 ಹೆಕ್ಟೇರ್‌ನಲ್ಲಿ ಎಣ್ಣೆಬೀಜ, 9940 ಹೆಕ್ಟೇರ್‌ನಲ್ಲಿ ದ್ವಿದಳ ಧಾನ್ಯ, 7500 ಹೆಕ್ಟೇರ್‌ನಲ್ಲಿ ರಾಗಿ, 7283 ಹೆಕ್ಟೇರ್‌ನಲ್ಲಿ ಇತರ ಬೆಳೆ ಬೆಳೆಯುವ ಗುರಿಯನ್ನು ಕೃಷಿ ಇಲಾಖೆ ಹಾಕಿಕೊಂಡಿದೆ. ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಒಟ್ಟು 42,233 ಕ್ವಿಂಟಲ್ ಬಿತ್ತನೆ ಬೀಜದ ಬೇಡಿಕೆ ಇದ್ದು, ಇಲಾಖೆ ಸಾಕಷ್ಟು ಬಿತ್ತನೆ ಬೀಜ ದಾಸ್ತಾನು ಮಾಡಿಟ್ಟುಕೊಂಡಿದೆ. ಅದೇ ರೀತಿ ಕೃಷಿ ಇಲಾಖೆ ಮುಂಗಾರು ಹಂಗಾಮಿಗಾಗಿ ರಸಗೊಬ್ಬರ ಸಹ ದಾಸ್ತಾನು ಮಾಡಿಕೊಂಡಿದೆ. ಒಟ್ಟಾರೆ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗಾಗಿ ಕೃಷಿ ಚಟುವಟಿಕೆ ಚುರುಕುಗೊಂಡಿದ್ದು ಜಮೀನುಗಳು ಚಟುವಟಿಕೆಯ ತಾಣಗಳಾಗಿ ಮಾರ್ಪಟ್ಟಿವೆ.
ಬಹುಬೆಳೆಗೆ ಪ್ರೋತ್ಸಾಹ
ಕಳೆದ ವರ್ಷದಂತೆ ಈ ಬಾರಿಯೂ ಕೃಷಿ ಇಲಾಖೆ ಮಿಶ್ರ ಬೆಳೆ, ಅಂತರ ಬೆಳೆ ಪದ್ಧತಿಯನ್ನು ಪ್ರೋತ್ಸಾಹಿಸುತ್ತಿದೆ. ಹಿಂದಿನ ವರ್ಷಗಳಲ್ಲಿ ಮೆಕ್ಕೆಜೋಳದಲ್ಲಿ ಅಂತರ ಬೆಳೆಯಾಗಿ 14,500 ಹೆಕ್ಟೇರ್‌ನಲ್ಲಿ ತೊಗರಿ ಬೆಳೆಯಲಾಗಿತ್ತು. ಈ ಬಾರಿ 15 ಸಾವಿರ ಹೆಕ್ಟೇರ್‌ನಲ್ಲಿ ಅಂತರ ಬೆಳೆಯಾಗಿ ಬೆಳೆಯಲು ರೈತರನ್ನು ಪ್ರೋತ್ಸಾಹಿಸಲಾಗುತ್ತಿದೆ. ರೈತರಿಗೆ ಕಡಿಮೆ ಖರ್ಚಿನಲ್ಲಿ ಹೆಚ್ಚು ಇಳುವರಿಗೆ ಪಡೆಯಲು ಸಹಾಯವಾಗುವಂತೆ ಕೃಷಿ ಇಲಾಖೆ ವಿವಿಧ ಕೃಷಿ ಪದ್ಧತಿಗಳನ್ನೂ ಪ್ರೋತ್ಸಾಹಿಸುತ್ತಿದೆ. ಭತ್ತ ಹಾಗೂ ರಾಗಿಯಲ್ಲಿ ನಾಟಿ ಪದ್ಧತಿ, ಯಾಂತ್ರೀಕೃತ ನಾಟಿ, ಡ್ರಮ್ ಸೀಡರ್, ಚೆಲ್ಲು ಬತ್ತ, ಶ್ರೀ ಪದ್ಧತಿ, ಅಂತರ ಪದ್ಧತಿ, ಮಿಶ್ರ ಬೆಳೆ ಪದ್ಧತಿ, ಹನಿ ಹಾಗೂ ತುಂತುರು ನೀರಾವರಿಗಳ
ಬಗ್ಗೆ ರೈತರಿಗೆ ತಿಳಿವಳಿಕೆ ನೀಡುವ ಕಾರ್ಯ ಕೃಷಿ ಇಲಾಖೆಯಿಂದ ಆಗುತ್ತಿದೆ.
ಈ ಬಾರಿ ಮುಂಗಾರು ಪೂರ್ವ ಮಳೆ ವಾಡಿಕೆಗಿಂತ ಕಡಿಮೆಯಾಗಿದೆ. ಜೂನ್ ಮೊದಲ ವಾರದಲ್ಲಿ ಮುಂಗಾರು
ಆರಂಭವಾಗುವ ನಿರೀಕ್ಷೆ ಇದ್ದು, ಕೃಷಿ ಇಲಾಖೆಯಿಂದ ಅಗತ್ಯ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಮಾಡಿಕೊಳ್ಳಲಾಗುತ್ತಿದೆ.
-ಶ್ರೀನಿವಾಸ್ ಚಿಂತಾಲ್,
ಜಂಟಿ ನಿರ್ದೇಶಕರು, ಕೃಷಿ ಇಲಾಖೆ
-ಎಚ್.ಕೆ. ನಟರಾಜ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಜಲಾಶಯದಲ್ಲಿ ಮುಳುಗಿ ಸಾವನ್ನಪ್ಪಿದ ತಂದೆ ಮತ್ತು ಮಗ

Davanagere ನಾನು ಬಿಜೆಪಿ ಕಟ್ಟಾಳು, ಕಾಂಗ್ರೆಸ್ ಸೇರಲ್ಲ: ರೇಣುಕಾಚಾರ್ಯ

Davanagere Bandh: ದಾವಣಗೆರೆ ಬಂದ್ ಗೆ ಅಭೂತಪೂರ್ವ ಬೆಂಬಲ… ಅಂಗಡಿ ಮುಂಗಟ್ಟು ಬಂದ್

Davanagere: ಟ್ರ್ಯಾಕ್ಟರ್ ರ್ಯಾಲಿಗೆ ಮುಂದಾದ ರೈತರ ಬಂಧನ

BJP-JDS ಮೈತ್ರಿ ಕಳ್ಳರು ಕಳ್ಳರು ಸಂತೆ ಮಾಡಿದಂತಿದೆ: ಮುಖ್ಯಮಂತ್ರಿ ಚಂದ್ರು
MUST WATCH
ಹೊಸ ಸೇರ್ಪಡೆ

BJP MP ಮೇನಕಾ ಗಾಂಧಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಇಸ್ಕಾನ್

Karwar; ರಾ.ಹೆ.66 ರ ಟನಲ್ ನಲ್ಲಿ ಸಂಚಾರ ಪುನರಾರಂಭಕ್ಕೆ ಆಗ್ರಹಿಸಿ ದಿನವಿಡೀ ಪ್ರತಿಭಟನೆ

Belagavi;ಮೋಡ ಬಿತ್ತನೆಗೆ ಸಚಿವ ಸತೀಶ್ ಜಾರಕಿಹೊಳಿ ಚಾಲನೆ: ಪೂರಕ ವಾತಾವರಣ

Cauvery ಮತ್ತು ನಂಬಿಕೆ… ಜನಪ್ರತಿನಿಧಿಗಳ ಮೇಲೆ ನಮಗೇ ನಂಬಿಕೆ ಇಲ್ಲವೇ?

Katapadi: ಕೊರಗಜ್ಜನಿಗೆ ಲಾರಿ, ಟೆಂಪೋ ಮಾಲಕರ ಮೊರೆ