5ರಿಂದ ಚಂದ್ರ ಸ್ಮರಣೆ ಕೃಷಿ ಮೇಳ


Team Udayavani, Mar 3, 2020, 12:10 PM IST

dg-tdy-2

ಹೊನ್ನಾಳಿ: ಲಿಂ| ಒಡೆಯರ್‌ ಮೃತ್ಯುಂಜಯ ಶಿವಾಚಾರ್ಯ ಸ್ವಾಮೀಜಿ ಹಾಗೂ ಲಿಂ| ಒಡೆಯರ್‌ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಪುಣ್ಯಾರಾಧನೆ ಅಂಗವಾಗಿ ಹಿರೇಕಲ್ಮಠದ ಸ್ಥಿರ ಪಟ್ಟಾಧ್ಯಕ್ಷರಾದ ಡಾ| ಒಡೆಯರ್‌ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳ ನೇತೃತ್ವದಲ್ಲಿ ಚಂದ್ರ ಸ್ಮರಣೆ ರಾಜ್ಯ ಮಟ್ಟದ ಕೃಷಿಮೇಳ-2020 ಮಾ.5ರಿಂದ 7ರವರೆಗೆ ಮೂರು ದಿನಗಳ ಕಾಲ ಹಿರೇಕಲ್ಮಠದ ಪಂಚಾಚಾರ್ಯ ಸಮುದಾಯ ಭವನದ ಹಿಂಭಾಗ ನಿರ್ಮಿಸಿರುವ ವಿಶಾಲ ಹಾಗೂ ಭವ್ಯ ವೇದಿಕೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಮಾ.5ರ ಬೆಳಗ್ಗೆ 10ಗಂಟೆಗೆ ಉದ್ಘಾಟನಾ ಸಮಾರಭ ಶ್ರೀಶೈಲ ಜಗದ್ಗುರು ಡಾ|ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು, ಉಜ್ಜಯನಿ ಜಗದ್ಗುರು ಸಿದ್ಧಲಿಂಗದೇಶೀಕೇಂದ್ರ ಶಿವಾಚಾರ್ಯ ಭಗವತ್ಪಾದರು ಹಾಗೂ ಕಾಶಿ ಜಗದ್ಗುರು ಡಾ| ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರ ಸಾನ್ನಿಧ್ಯದಲ್ಲಿ ಜರುಗುವುದು. ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ಅಧ್ಯಕ್ಷತೆ ವಹಿಸುವರು.ಕೃಷಿ ಮೇಳವನ್ನು ಪತಂಜಲಿ ಯೋಗ ಗುರು ಬಾಬಾ ರಾಮದೇವ್‌ ಉದ್ಘಾಟಿಸುವರು. ಶಾಸಕ ಶಾಮನೂರು ಶಿವಶಂಕರಪ್ಪ ವಸ್ತು ಪ್ರದರ್ಶನ ಉದ್ಘಾಟಿಸುವರು.  ಇಸ್ರೇಲ್‌ ತಂತ್ರಜ್ಞಾನ ಪ್ರಾತ್ಯಕ್ಷಿಕೆಯನ್ನು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸುವರು.  ಫಲಪುಷ್ಪ ಪ್ರದರ್ಶನವನ್ನು ಸಂಸದ ಜಿ.ಎಂ.ಸಿದ್ದೇಶ್ವರ ಉದ್ಘಾಟಿಸುವರು. ಕೃಷಿ ಗೋಷ್ಠಿಯನ್ನು ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿವಿ ಕುಲಪತಿ ಡಾ| ಎಂ.ಕೆ. ನಾಯಕ್‌ ಉದ್ಘಾಟಿಸುವರು. ಪ್ರಸಾದ ವಿತರಣಾ ಕೇಂದ್ರವನ್ನು ಮಾಜಿ ಶಾಸಕ ಡಿ.ಜಿ.ಶಾಂತನಗೌಡ ಉದ್ಘಾಟಿಸುವರು. ಅಂದು ಬೆಳಗ್ಗೆ 5ಕ್ಕೆ ಯೋಗ ಗುರು ಬಾಬಾ ರಾಮದೇವ ಅವರಿಂದ ಯೋಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮಾ.5ರ ಮಧ್ಯಾಹ್ನ 12ಕ್ಕೆ ಕೃಷಿ ಕವಿಗೋಷ್ಠಿ, ಮಧ್ಯಾಹ್ನ 3ಕ್ಕೆ ಧರ್ಮಸಭೆ ನೆರವೇರುವುದು. ಸಂಜೆ 7ಕ್ಕೆ ಆಳ್ವಾಸ್‌ ಸಾಂಸ್ಕೃತಿಕ ತಂಡದವರಿಂದ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ ನಡೆಯಲಿದೆ. ಮಾ.6ರ ಬೆಳಿಗ್ಗೆ 10.30ಕ್ಕೆ ಕೃಷಿ ಗೋಷ್ಠಿ, ಮಧ್ಯಾಹ್ನ 12.30ಕ್ಕೆ ಸಾಮೂಹಿಕ ವಿವಾಹ ಕಾರ್ಯಕ್ರಮ, ಮಧ್ಯಾಹ್ನ 3ಕ್ಕೆ ನಡೆಯುವ ಧರ್ಮಸಭೆಯನ್ನು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಉದ್ಘಾಟಿಸುವರು, ವಿವಿಧ ಮಠಾ ಧೀಶರು ನೇತೃತ್ವ ವಹಿಸುವರು. ಸಂಜೆ 7ಕ್ಕೆ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ, ಹೆಗ್ಗೊಡಿನ ನೀನಾಸಂ ಕಲಾ ತಂಡದವರಿಂದ ನಾಟಕ ಪ್ರದರ್ಶನ ನಡೆಯಲಿವೆ. ಮಾ.7ರ ಶನಿವಾರ ಬೆಳಿಗ್ಗೆ 10.30ಕ್ಕೆ ಕೃಷಿ ಗೋಷ್ಠಿ-2, ಮಧ್ಯಾಹ್ನ 3ಕ್ಕೆ ಧರ್ಮಸಭೆ ಉದ್ಘಾಟನೆ ಹಾಗೂ ಸ್ಮರಣ ಸಂಚಿಕೆ ಬಿಡುಗಡೆಯನ್ನು ಮುಖ್ಯಮಂತ್ರಿ ಬಿ.ಎಸ್‌ .ಯಡಿಯೂರಪ್ಪ ನೆರವೇರಿಸುವರು. ಶ್ರೀ ಚಂದ್ರಶೇಖರ ಶಿವಾಚಾರ್ಯಶ್ರೀ ಪ್ರಶಸ್ತಿ-2020 ಪ್ರದಾನವನ್ನು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನೆರವೇರಿಸುವರು.

ವಾಣಿಜ್ಯ ಸಂಕೀರ್ಣ ಉದ್ಘಾಟನೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಗುರುಕುಲ ಮಾದರಿ ಉದ್ಘಾಟನೆ ಉಪ ಮುಖ್ಯಮಂತ್ರಿ ಗೋಂವಿದ ಕಾರಜೋಳ, ಜಾಲತಾಣ ಉದ್ಘಾಟನೆ ಮಾಜಿ ಸಿಂ ಎಚ್‌.ಡಿ.ಕುಮಾರಸ್ವಾಮಿ, ರಸ್ತೆ ಸುರಕ್ಷಾ ಸಿಡಿ ಬಿಡುಗಡೆ ಗೃಹಮಂತ್ರಿ ಬಸವರಾಜ ಬೊಮ್ಮಾಯಿ, ಪುಷ್ಕರಣಿ ಉದ್ಘಾಟನೆ ಮಾಜಿ ಸಚಿವ ಡಿ.ಕೆ. ಶಿವಕುಮಾರ್‌, ಶಿರಸ್ತ್ರಾಣ(ಹೆಲ್ಮೆಟ್‌) ಉದ್ಘಾಟನೆ ಸಂಸದ ಜಿ.ಎಂ. ಸಿದ್ದೇಶ್ವರ ನೆರವೇರಿಸುವರು. ಸಚಿವರು, ಜನಪ್ರತಿನಿಧಿ  ಗಳು ಭಾಗವಹಿಸುವರು. ಶ್ರೀಶೈಲ ಜಗದ್ಗುರು, ಉಜ್ಜಯನಿ ಜಗದ್ಗುರು ಹಾಗೂ ಕಾಶಿ ಜಗದ್ಗುರುಗಳು ಸಾನ್ನಿಧ್ಯ ವಹಿಸುವರು.

ಸಂಜೆ 7ಕ್ಕೆ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮವನ್ನು ನಟ, ನಿರ್ದೇಶಕ ಜೋಗಿ ಪ್ರೇಮ್‌, ರಾಜೇಶ್‌ ಕೃಷ್ಣನ್‌, ಸಾಧು ಕೋಕಿಲ, ನಿರೂಪಕಿ ಅನುಶ್ರೀ, ಜಾನಪದ ಗಾಯಕ ಹನುಮಂತ ನಡೆಸಿಕೊಡುವರು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಆಯೋಜಕರು ಕೋರಿದ್ದಾರೆ.

ಮೂವರಿಗೆ ಪ್ರಶಸ್ತಿ : ಶೈಕ್ಷಣಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ರಾಣೆಬೆನ್ನೂರು ನಗರದ ಎ.ಸಿ. ಹಿರೇಮಠ, ಔದ್ಯೋಗಿಕ ಕ್ಷೇತ್ರದಲ್ಲಿ ಹಾವೇರಿ ಜಿಲ್ಲೆಯ ಕೋಡಿಯಾಲ ಹೊಸಪೇಟಿ ಜುಂಜಪ್ಪ ದೊಡ್ಡಬಸಪ್ಪ ಹೆಗ್ಗಪ್ಪನವರ ಮತ್ತು ಸಾಮಾಜಿಕ, ಕೃಷಿ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿನ ಸಾಧನೆಗಾಗಿ ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಕೊಂಬಳಿ ಗ್ರಾಮದ ಸೊಪ್ಪಿನ ಬಾಳಪ್ಪ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಟಾಪ್ ನ್ಯೂಸ್

siddaramaiah

ನಾರಾಯಣ ಗುರುಗಳನ್ನು ಅವಮಾನಿಸಿದ್ದಕ್ಕೆ ಬಿಜೆಪಿ ಕ್ಷಮೆ ಯಾಚಿಸಲಿ : ಸಿದ್ದರಾಮಯ್ಯ ಕಿಡಿ

jagaluru

ಕರ್ಫ್ಯೂ ನಡುವೆಯೂ ಜಗಳೂರು ಶಾಸಕನ ಜನ್ಮದಿನಾಚರಣೆ : ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗಿ

aravind-kejriwal

ಗೋವಾದಲ್ಲಿ ಬಿಜೆಪಿಯೇತರ ಪಕ್ಷಗಳೊಂದಿಗೆ ಚುನಾವಣೋತ್ತರ ಮೈತ್ರಿ ಸಾಧ್ಯ: ಕೇಜ್ರಿವಾಲ್

ra Ga

ಬಿಜೆಪಿಯ ‘ದ್ವೇಷ’ದ ರಾಜಕಾರಣ ದೇಶಕ್ಕೆ ಅತ್ಯಂತ ಹಾನಿಕಾರಕ:ರಾಹುಲ್ ಗಾಂಧಿ

1-assadsa

ಯುಪಿ: ಮಾಜಿ ಐಪಿಎಸ್ ಅಧಿಕಾರಿ ಅಸೀಮ್ ಅರುಣ್ ಬಿಜೆಪಿಗೆ ಸೇರ್ಪಡೆ

ಚಿಕ್ಕಮಗಳೂರು: ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಳ್ಳಿಗಳನ್ನೇ ಕೆಮ್ಮಿಸುತ್ತಿದ್ದಾರೆ.!

ಚಿಕ್ಕಮಗಳೂರು: ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಳ್ಳಿಗಳನ್ನೇ ಕೆಮ್ಮಿಸುತ್ತಿದ್ದಾರೆ.!

Untitled-1

ಸಂಕೇಶ್ವರ: ಮಹಿಳೆಯೋರ್ವಳ ಗುಂಡಿಕ್ಕಿ ಹತ್ಯೆ; ಬೆಚ್ಚಿ ಬಿದ್ದ ಗ್ರಾಮಸ್ಥರುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

jagaluru

ಕರ್ಫ್ಯೂ ನಡುವೆಯೂ ಜಗಳೂರು ಶಾಸಕನ ಜನ್ಮದಿನಾಚರಣೆ : ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗಿ

ಸದ್ಗಹಜಕಜಹಗ್ದಸಅ

ಸಂಕ್ರಾಂತಿ ನೆನೆಸಿಕೊಳ್ಳೋಕೇ ಭಯ

shivamogga news

ಲಿಂಗತ್ವ ಅಲ್ಪಸಂಖ್ಯಾತರಿಗೆ ಸೌಲಭ್ಯ ಒದಗಿಸಿ

davanagere news

ತಿಂಗಳಾಂತ್ಯದವರೆಗೆ ವಾರಾಂತ್ಯ ಕರ್ಫ್ಯೂ ವಿಸ್ತರಣೆ

davanagere news

ಕೊರೊನಾ ನಿಯಂತ್ರಣದಲ್ಲಿ ನಿರ್ಲಕ್ಷ್ಯ ಸಹಿಸಲ್ಲ

MUST WATCH

udayavani youtube

ವಿವಿಧ ಮುಹೂರ್ತಗಳು ಪರ್ಯಾಯದ ವಿಶೇಷತೆ

udayavani youtube

ಮೂಡಿಗೆರೆ : ಇಡೀ ಹಳ್ಳಿಯ ಜನರಿಗೆ ಕೆಮ್ಮು! ಇದು ಹೆದ್ದಾರಿ ಪ್ರಾಧಿಕಾರದ ಕಾಮಗಾರಿಯ ಫಲ

udayavani youtube

ಕಲಬುರಗಿ: ಮಾನಸಿಕ ಅಸ್ವಸ್ಥನ ಅವಾಂತರ; ಸಿಕ್ಕ ಸಿಕ್ಕ ವಾಹನಗಳಿಗೆ ಕಲ್ಲೇಟು

udayavani youtube

ನಾವು ಬದಲಾಗೋಣ ಪ್ರಕೃತಿಯನ್ನು ಘೋಷಿಸೋಣಭೂಮಿ ಸುಪೋಷನ ಆಂದೋಲನ

udayavani youtube

ಒಂದು ಕೆ.ಜಿ. ಬಾಳೆ ಹಣ್ಣಿಗೆ 2 ರೂ. : ಸಂಕಷ್ಟದಲ್ಲಿ ಬಾಳೆ ಬೆಳೆದ ರೈತ

ಹೊಸ ಸೇರ್ಪಡೆ

ಕುಷ್ಟಗಿ: ಇಸ್ಪೀಟ್ ಜೂಜಾಟ ಅಡ್ಡೆ ಮೇಲೆ ದಾಳಿ; 9 ಜನರು ವಶಕ್ಕೆ

ಕುಷ್ಟಗಿ: ಇಸ್ಪೀಟ್ ಜೂಜಾಟ ಅಡ್ಡೆ ಮೇಲೆ ದಾಳಿ; 9 ಜನರು ವಶಕ್ಕೆ

siddaramaiah

ನಾರಾಯಣ ಗುರುಗಳನ್ನು ಅವಮಾನಿಸಿದ್ದಕ್ಕೆ ಬಿಜೆಪಿ ಕ್ಷಮೆ ಯಾಚಿಸಲಿ : ಸಿದ್ದರಾಮಯ್ಯ ಕಿಡಿ

jagaluru

ಕರ್ಫ್ಯೂ ನಡುವೆಯೂ ಜಗಳೂರು ಶಾಸಕನ ಜನ್ಮದಿನಾಚರಣೆ : ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗಿ

aravind-kejriwal

ಗೋವಾದಲ್ಲಿ ಬಿಜೆಪಿಯೇತರ ಪಕ್ಷಗಳೊಂದಿಗೆ ಚುನಾವಣೋತ್ತರ ಮೈತ್ರಿ ಸಾಧ್ಯ: ಕೇಜ್ರಿವಾಲ್

ra Ga

ಬಿಜೆಪಿಯ ‘ದ್ವೇಷ’ದ ರಾಜಕಾರಣ ದೇಶಕ್ಕೆ ಅತ್ಯಂತ ಹಾನಿಕಾರಕ:ರಾಹುಲ್ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.