ನೌಕರರ ವಿವಿಧ ಬೇಡಿಕೆ ಈಡೇರಿಸಲು ಸಮ್ಮತಿ


Team Udayavani, May 12, 2017, 1:06 PM IST

dvg3.jpg

ಜಗಳೂರು: 7ನೇ ವೇತನ ಆಯೋಗ ರಚನೆಗೆ ರಾಜ್ಯ ಸರ್ಕಾರ ಒಲವು ತೋರಿದ್ದು, ಇನ್ನೇರಡು ತಿಂಗಳಲ್ಲಿ ಅಧ್ಯಕ್ಷರ ನೇಮಕಾತಿ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಭರವಸೆ ನೀಡಿದ್ದಾರೆಂದು ನೌಕರರ ಸಂಘದ ಅಧ್ಯಕ್ಷ ಆನಂದಪ್ಪ ಹೇಳಿದರು. 

ಪಟ್ಟಣದ ಎನ್‌ಜಿಪ ಸಭಾಂಗಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 6ರಂದು  ಧಾರವಾಡದಲ್ಲಿ ನಡೆದ ರಾಜ್ಯಮಟ್ಟದ ಕಾರ್ಯಕಾರಿಣಿ ಸಭೆಯಲ್ಲಿ 7ನೇ ವೇತನ ಆಯೋಗದ ರಚನೆ ಸೇರಿದಂತೆ ನೌಕರರ ಇತರೇ ಬೇಡಿಕೆಗಳಿಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಸಮ್ಮತಿ ಸೂಚಿಸಿದೆ ಅಲ್ಲದೇ 5 ಮತ್ತು 6ನೇ ವೇತನ ಆಯೋಗದಲ್ಲಾದ ವೇತನ ತಾರತಮ್ಯವನ್ನು ಸರಿಪಡಿಸಲಾಗುವುದು ಎಂದಿದೆ ಎಂದು ತಿಳಿಸಿದರು. 

ವೇತನ ಆಯೋಗ ರಚಿಸಲು ಈ ಹಿಂದಿನ ಸರ್ಕಾರಗಳ ಆರೇಳು ವರ್ಷಗಳ ಅವಧಿ ತೆಗೆದುಕೊಳ್ಳುತ್ತಿದ್ದವು. ಆದರೆ ಪ್ರಸ್ತುತ ರಾಜ್ಯ ಸರ್ಕಾರ 5ವರ್ಷಕ್ಕೆ ವೇತನ ಆಯೋಗ ರಚನೆ ಮುಂದಾಗಿರುವುದು ಸ್ವಾಗತಾರ್ಹ. ಆಯೋಗ ರಚಿಸಿ ನಾಲ್ಕು ತಿಂಗಳೊಳಗೆ ಸಮಿತಿಯ ವರದಿ ಪಡೆದು 7ನೇ ವೇತನ ಜಾರಿಗೊಳಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.

ಕಾಲಮಿತಿ ಬಡ್ತಿ ವೇತನ ಸಮರ್ಪಕವಾಗಿ ಜಾರಿಗೊಳಿಸಬೇಕು. ಕೇಂದ್ರ ಸರ್ಕಾರದ ನೌಕರರಿಗೆ ನೀಡುತ್ತಿರುವ ವೇತನ ಭತ್ಯೆಗಳು ಸೇರಿದಂತೆ ಇತರೇ ಸೌಲಭ್ಯಗಳನ್ನು ರಾಜ್ಯ ಸರ್ಕಾರದ ನೌಕರರಿಗೆ ನೀಡಬೇಕು. 2006ರಿಂದ ನೇಮಕವಾದ ನೌಕರರಿಗೆ ಜಾರಿಗೊಳಿಸಿರುವ ಪಿಂಚಣಿ ರಹಿತ ವ್ಯವಸ್ಥೆಯನ್ನು ಕೈಬಿಟ್ಟು ಪಿಂಚಣಿ ಸಹಿತ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದರು.

ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದಿಂದ ಸಹಕಾರ ಸಂಘ ಸ್ಥಾಪಿಸುವ ಪ್ರಕ್ರಿಯೆ ಮುಂದುವರಿದೆ. ಪತ್ತಿನ ಸಹಕಾರ ಸಂಘ ಒಟ್ಟು 12 ಲಕ್ಷರೂ. ಷೇರು ಇರಬೇಕೆಂಬ ನಿಯಮ ಇರುವುದರಿಂದ ಸದ್ಯದಲ್ಲಿ ನೌಕರರಿಗೆ ಷೇರು ನಿಗದಿಮಾಡಲಾಗುವುದು. 

2016ನೇ ಸಾಲಿನಲ್ಲಿ ನಿವೃತ್ತರಾದ ನೌಕರರಿಗೆ ರಾಜ್ಯ ಸಂಘದಿಂದ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ನಿವೃತ್ತಿಯಾದ ನೌಕರರು ತಾಲೂಕು ಸಂಘಕ್ಕೆ ಮಾಹಿತಿ ನೀಡುವಂತೆ ಅವರು ಕೋರಿದರು. ಜಿಲ್ಲಾ ಗೌರವಾಧ್ಯಕ್ಷ ನಾಗೇಶ್‌ ಗೌಡ, ಕಾರ್ಯದರ್ಶಿ ಲಕ್ಷಿಕಾಂತ್‌, ಖಜಾಂಚಿ ನೇತ್ರಾವತಿ, ನಿರ್ದೇಶಕರಾದ ಸುರೇಶ್‌ಬಾಬು,  ಅಜಮತ್ತವುಲ್ಲಾ ಈ ಸಂದರ್ಭದಲ್ಲಿ ಇದ್ದರು. 

ಟಾಪ್ ನ್ಯೂಸ್

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

1-imek

ನಮ್ಮ ‘ಐಮೆಕ್‌’ ಪ್ರಾಜೆಕ್ಟ್ ಗೆ ಜಿ7 ನಾಯಕರ ಬೆಂಬಲ!

vande bharat

ಜೂ.20ಕ್ಕೆ ಬೆಂಗಳೂರು-ಮಧುರೈ ವಂದೇ ಭಾರತ್‌: ಕರ್ನಾಟಕಕ್ಕೆ 9ನೇ ರೈಲು

1-sugopi

ಇಂದಿರಾ ಗಾಂಧಿ ಕಾಂಗ್ರೆಸ್‌ ಮಾತೆ: ಉಲ್ಟಾ ಹೊಡೆದ ಸುರೇಶ್‌ ಗೋಪಿ

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Kandagal: ಗಬ್ಬೆದು ನಾರುತ್ತಿರುವ ಮಲೀನ ನೀರು; ನರಕಯಾತನೆ ಅನುಭವಿಸುತ್ತಿರುವ ನಿವಾಸಿಗಳು

KARADI (2)

Jagalur ; ರೈತನ ಮೇಲೆ ಏಕಕಾಲಕ್ಕೆ ದಾಳಿ ಮಾಡಿದ ಮೂರು ಕರಡಿಗಳು

Shamanuru Shivashankarappa

Road ಅಲ್ಲಿ ಹೋಗುವವರು ಕಂಪ್ಲೆಂಟ್ ಕೊಟ್ಟರೆ ಅರೆಸ್ಟಾ?: ಬಿಎಸ್ ವೈ ಪರ ಶಾಮನೂರು

mp renukacharya

ಬಿಎಸ್ ವೈ ವಿರುದ್ದದ ಷಡ್ಯಂತ್ರದ ಹಿಂದೆ ಪ್ರಭಾವಿ ಸಚಿವರಿದ್ದಾರೆ: ರೇಣುಕಾಚಾರ್ಯ

17

Priyanka Jarakiholi: ಸಮಸ್ಯೆ ಇರುವ ಮಾತ್ರಕ್ಕೆ ಪ್ರತ್ಯೇಕ ರಾಜ್ಯ ಪ್ರಸ್ತಾವ ಸಲ್ಲ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

police crime

ಗೇಮಿಂಗ್‌ ಜೋನ್‌ ದುರಂತ: ಇನ್ನೂ ಇಬ್ಬರು ಪೊಲೀಸ್‌ ವಶಕ್ಕೆ

police USA

ಅಮೆರಿಕದಲ್ಲಿ 2 ಪ್ರತ್ಯೇಕ ಶೂಟೌಟ್‌: ಇಬ್ಬರು ಸಾವು

arrested

ಸಲ್ಮಾನ್‌ ಮನೆ ಹೊರಗೆ ಗುಂಡಿನ ದಾಳಿ: ರಾಜಸ್ಥಾನದ ವ್ಯಕ್ತಿ ಸೆರೆ

baby

UP ಕ್ಷುಲ್ಲಕ ಕಾರಣಕ್ಕೆ 2 ವರ್ಷದ ಮಗಳನ್ನು ಕಾಲುವೆಗೆಸೆದ ತಂದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.