ಮಳೆಗಾಲದಲ್ಲೂ ತಪ್ಪದ ನೀರಿನ ಬವಣೆ

Team Udayavani, Jul 30, 2018, 3:49 PM IST

Madhuri-Dixit-600.jpg

ಜಗಳೂರು: ಪಟ್ಟಣದ ಇಮಾಂ ಮತ್ತು ಇಂದಿರಾ ಬಡಾವಣೆಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿದ್ದು, ನೀರಿನ ಸಮಸ್ಯೆಯಿಂದ ನಿವಾಸಿಗಳು ಹೈರಾಣಾಗಿ ಹೋಗಿದ್ದಾರೆ. ತಿಂಗಳು ಎರಡು ತಿಂಗಳಿಗೊಮ್ಮೆ ಶಾಂತಿ ಸಾಗರದ ಕುಡಿಯುವ ನೀರು ಪೂರೈಕೆಯಾದರೆ ಈ ಬಡಾವಣೆಗಳ ನಿವಾಸಿಗಳಿಗೆ ಸಂಭ್ರಮವೋ ಸಂಭ್ರಮ. ಬಡವರಿಗಂತೂ ಕುಡಿಯುವ ನೀರು ಬಂದರೆ ಮನೆಯಲ್ಲಿ ಹಬ್ಬದ ವಾತಾವರಣ.

ಎರಡು-ಮೂರು ದಿನಕ್ಕೊಮ್ಮೆ ಬಿಡುವ ಬೋರ್‌ವೆಲ್‌ ನೀರು ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ ಎಂಬ ದೂರು ಇಲ್ಲಿನ
ನಿವಾಸಿಗಳಿಂದ ಕೇಳಿ ಬರುತ್ತಿದೆ. ಈ ಬೋರ್‌ ವೆಲ್‌ ನೀರು ಹಿಡಿಯಲು ಸಹ ನಾ ಮುಂದು ತಾ ಮುಂದು ಎಂಬ ಪೈಪೋಟಿ ಇಲ್ಲಿ ಸಾಮಾನ್ಯವಾಗಿದೆ. ಸಾರ್ವಜನಿಕ ನಳಗಳ ಮುಂದೆ ರಾಶಿ ರಾಶಿ ಕೊಡಗಳು ಕಾಣಸಿಗುತ್ತವೆ. ಸರದಿಯಂತೆ ನೀರು ಹಿಡಿದುಕೊಂಡರೆ ಸರಿ. ಸರದಿಯ ನಿಯಮ ಉಲ್ಲಂಘನೆಯಾದರೆ ಜಗಳಾಟ, ವಾಗ್ವಾದ ಗ್ಯಾರಂಟಿ.

ಬಡಾವಣೆಯಲ್ಲಿನ ನೀರಿನ ಸಮಸ್ಯೆಯಿಂದಾಗಿ ಸ್ವಂತ ಮನೆ ಇರುವವರೇ ಕೆಲವರು ಮನೆ ಖಾಲಿ ಮಾಡಿ ಬೇರೆ ಬಡಾವಣೆಗಳ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿದ್ದಾರೆ. ಉಳಿದ ಇತರರು ಸಮಸ್ಯೆಗೆ ಒಗ್ಗಿಕೊಂಡು ಅಧಿಕಾರಿಗಳಿಗೆ ಹಿಡಿ ಶಾಪಹಾಕಿ ಬದುಕುತ್ತಿದ್ದಾರೆ.

ಕುಡಿಯುವ ನೀರಿನ ಸಮಸ್ಯೆ ಇಂದು ನಿನ್ನೆಯದಲ್ಲ. ಅನೇಕ ವರ್ಷಗಳ ಸಮಸ್ಯೆ ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ
ಗೊತ್ತಿದ್ದರೂ ಕೂಡ ಶಾಶ್ವತ ಪರಿಹಾರ ಕಂಡುಕೊಳ್ಳಲು ಮುಂದಾಗಿಲ್ಲ. ಬೋರ್‌ವೆಲ್‌ ಕೊರೆದು ಪೈಪ್‌ಲೈನ್‌
ಅಳವಡಿಸಿದ ಕೂಡಲೇ ನೀರು ಕೊಡುತ್ತೇವೆ ಎಂದು ಪಪಂ ಅಧಿಕಾರಿಗಳು, ಜನಪ್ರತಿನಿಧಿಗಳು ಕಳೆದ ಮೂರು ವರ್ಷಗಳಿಂದ ಭರವಸೆ ನೀಡುತ್ತಲೇ ಬಂದಿದ್ದಾರೆ. ಆದರೆ ಸಮಸ್ಯೆ ಮಾತ್ರ ಬಗೆಹರಿದಿಲ್ಲ.

ಸಂಬಂಧಪಟ್ಟ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಇತ್ತ ಗಮನಹರಿಸಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕೆಂದು ಇಮಾಂ ಹಾಗೂ ಇಂದಿರಾ ಬಡಾವಣೆಯ ನಿವಾಸಿಗಳು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.