ಬಿಟ್‌ಕಾಯಿನ್ ವಿಚಾರವಾಗಿ ವಿಪಕ್ಷಗಳಿಂದ ಗಾಳಿಯಲ್ಲಿ ಗುಂಡು ಹೊಡೆದಂತೆ ಆರೋಪ:ಬಿ.ವೈ.ರಾಘವೇಂದ್ರ

Team Udayavani, Nov 11, 2021, 12:55 PM IST

BY-raghavendra

ದಾವಣಗೆರೆ: ಬಿಟ್‌ ಕಾಯಿನ್ ವಿಚಾರವಾಗಿ ವಿಪಕ್ಷಗಳು ಗಾಳಿಯಲ್ಲಿ ಗುಂಡು ಹೊಡೆದಂತೆ ಆರೋಪ ಮಾಡುತ್ತಿವೆ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ದೂರಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಟ್‌ ಕಾಯಿನ್ ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ ನಡೆದಿದ್ದಲ್ಲ. ಮೂರು ನಾಲ್ಕು ವರ್ಷಗಳ ಹಿಂದಿನದು. ಹಿಂದಿನಿಂದಲೂ ತನಿಖೆ ನಡೆಯುತ್ತಿದೆ. ತನಿಖೆ ನಡೆಯುತ್ತಿರುವಾಗ ಪ್ರತಿಕ್ರಿಯೆ ನೀಡಲು ಬರುವುದಿಲ್ಲ. ಕಾಂಗ್ರೆಸ್ ಮುಖಂಡರು ಮಾಡುತ್ತಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದರು.

ಕಾಂಗ್ರೆಸ್‌ ನವರು ಯಾವುದೇ ಹುರುಳಿಲ್ಲದ, ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ಬಿಟ್‌ ಕಾಯಿನ್ ಬಗ್ಗೆ ತನಿಖೆ ನಡೆದರೆ ಯಾರು ತಪ್ಪು ಮಾಡಿದ್ದಾರೆ ಎಂಬ ಸತ್ಯ ಸ್ಪಷ್ಟವಾಗುತ್ತದೆ. ಜನರಲ್ಲಿ ತಪ್ಪು ಕಲ್ಪನೆ ಬರುವಂತಹ ಕೆಲಸವನ್ನು ಕಾಂಗ್ರೆಸ್‌ ನವರು ಮಾಡುತ್ತಿದ್ದಾರೆ. ಯಾವುದೂ ಯಶಸ್ವಿಯಾಗುವುದಿಲ್ಲ. ಎಲ್ಲದಕ್ಕೂ ಸಮಯ ಬೇಕು. ಅಲ್ಲಿಯವರೆಗೆ ಕಾಯಬೇಕಾಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ:ಬಿಟ್ ಕಾಯಿನ್; ಆರೋಪ ಬಿಟ್ಟು ಕಾಂಗ್ರೆಸ್ ನಾಯಕರು ದಾಖಲೆ ಬಿಡುಗಡೆ ಮಾಡಲಿ: ಶೆಟ್ಟರ್ ಸವಾಲು

ಈಗ ವಿಧಾನ ಪರಿಷತ್ತು ಚುನಾವಣೆ ಘೋಷಣೆಯಾಗಿದೆ. ವಿರೋಧ ಪಕ್ಷದವರಿಗೆ ಯಾವುದಾದರೂ ವಿಷಯ ಬೇಕಾಗಿದೆ. ಮೊಸರಲ್ಲಿ ಕಲ್ಲು ಹುಡುಕುತ್ತಿರುವ ಕಾಂಗ್ರೆಸ್ ನಾಯಕರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ಕಾಂಗ್ರೆಸ್‌ನಿಂದ ಗಾಳಿಯಲ್ಲಿ ಗುಂಡು ಹೊಡೆದಂತೆ ಆರೋಪಗಳು ನಡೆಯುತ್ತಿವೆ ಎಂದು ತಿಳಿಸಿದರು.

ದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬಿಟ್‌ ಕಾಯಿನ್ ಆರೋಪ ಕುರಿತಂತೆ ವಿಚಾರಣೆ ನಡೆಯಲಿ ಎಂದು ಬಗ್ಗೆ ಅತ್ಯಂತ ಸ್ಪಷ್ಟವಾಗಿ ಹೇಳಿದ್ದಾರೆ. ವಿಚಾರಣೆ ನಡೆಯಲಿ. ತಪ್ಪು ಯಾರದ್ದು ಎಂಬುದು ಸ್ಪಷ್ಟವಾಗುತ್ತದೆ. ಸತ್ಯ ಏನು ಎಂಬುದು ಎಲ್ಲರಿಗೂ ಗೊತ್ತಾಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬಿಟ್‌ ಕಾಯಿನ್ ಬಗ್ಗೆ ಕಾಂಗ್ರೆಸ್ ಮುಖಂಡರು ಮಾಡುತ್ತಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ. ವಿಚಿತ್ರ ಏನು ಎಂದರೆ ಕಾಂಗ್ರೆಸ್ ಮುಖಂಡರೇ ಅದರಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಸ್ವತಃ ಮುಖ್ಯಮಂತ್ರಿಯವರೇ ತನಿಖೆ ಆಗುತ್ತಿದೆ. ಯಾರೇ, ಎಷ್ಟೇ ಪ್ರಭಾವಿಗಳು ಇದ್ದರೂ ಬಿಡುವ ಪ್ರಶ್ನೆ ಇಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್ ಮುಖಂಡರು ಬಿಜೆಪಿಯವರು ಭಾಗಿಯಾಗಿದ್ದಾರೆ ಎಂದು ಹೇಳುವ ಮೂಲಕ ರಾಜ್ಯದ ಜನತೆಯ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.

ವಿಧಾನ ಪರಿಷತ್ತು ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ವ್ಯಕ್ತವಾಗುತ್ತಿದೆ. ಮೇಲ್ಮನೆಯಲ್ಲೂ ಬಹುಮತ ಬೇಕು. ಸ್ಪಷ್ಟವಾದ ಬಹುಮತ ಕೊಟ್ಟರೆ ಜನರ ಹಿತದೃಷ್ಟಿಯಿಂದ ಮತ್ತು ಸರ್ಕಾರಕ್ಕೂ ಒಳ್ಳೆಯದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಟಾಪ್ ನ್ಯೂಸ್

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.