ಈಶ್ವರಪ್ಪ-ಸೋಮಲಿಂಗಪ್ಪ ಸಚಿವರಾಗಲಿ

Team Udayavani, Aug 1, 2021, 6:39 PM IST

1-18

ಬಳ್ಳಾರಿ: ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸಚಿವ ಸಂಪುಟದಲ್ಲಿ ಸಿರುಗುಪ್ಪ ವಿಧಾನಸಭೆ ಕ್ಷೇತ್ರದ ಶಾಸಕ ಎಂ.ಎಸ್‌.ಸೋಮಲಿಂಗಪ್ಪ ಅವರಿಗೆ ಸಚಿವ ಸ್ಥಾನ, ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಹಿಂದುಳಿದ ವರ್ಗಗಳ ಒಕ್ಕೂಟದ ಸಿರುಗುಪ್ಪ ತಾಲೂಕು ಅಧ್ಯಕ್ಷ ದಮ್ಮೂರು ಸೋಮಪ್ಪ ಆಗ್ರಹಿಸಿದರು.

ನಗರದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿರುಗುಪ್ಪ ಶಾಸಕ ಎಂ.ಎಸ್‌. ಸೋಮಲಿಂಗಪ್ಪ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಕ್ಷೇತ್ರದಲ್ಲಿ ಎಲ್ಲ ಸಮುದಾಯಗಳ ಅಭಿವೃದ್ಧಿಗಾಗಿ ಶ್ರಮಿಸಿರುವ ಇವರು ಜನರ ವಿಶ್ವಾಸಗಳಿಸಿದ್ದಾರೆ. ಮೇಲಾಗಿ ಈವರೆಗೂ ಯಾವೊಂದು ರಾಜಕೀಯ ಪಕ್ಷದ ಕದತಟ್ಟದೇ ಬಿಜೆಪಿಯಲ್ಲೇ ಉಳಿಯುವ ಮೂಲಕ ಪಕ್ಷ ನಿಷ್ಠೆ ಮೆರೆದಿದ್ದಾರೆ.

ಬಡಜನರ ಪರ ಗುಣಗಳುಳ್ಳ ಶಾಸಕ ಸೋಮಲಿಂಗಪ್ಪ ಅವರು ಸಚಿವರಾಗಲು ಎಲ್ಲ ಅರ್ಹತೆಗಳನ್ನು ಹೊಂದಿದ್ದು, ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಸೋಮಲಿಂಗಪ್ಪರಿಗೆ ಸಚಿವ ಸ್ಥಾನ ನೀಡಬೇಕು ಎಂದವರು ಪಕ್ಷದ ರಾಜ್ಯ, ರಾಷ್ಟ್ರೀಯ ನಾಯಕರನ್ನು ಒತ್ತಾಯಿಸಿದರು. ರಾಜ್ಯದಲ್ಲಿ ಬಿಜೆಪಿ ಪಕ್ಷದ ಅಭಿವೃದ್ಧಿಗೆ ಮಾಜಿ ಸಿಎಂ ಯಡಿಯೂರಪ್ಪರಷ್ಟೇ ಮಾಜಿ ಸಚಿವ ಈಶ್ವರಪ್ಪ ಸಹ ಶ್ರಮಿಸಿದ್ದಾರೆ.

ಪಕ್ಷದಲ್ಲೂ ಹಿರಿಯರಾಗಿದ್ದಾರೆ. ಆರ್‌ಎಸ್‌ಎಸ್‌, ಸಂಘ ಪರಿವಾರದ ಒಡನಾಡಿಯೂ ಆಗಿರುವ ಈಶ್ವರಪ್ಪ ದೇಶಭಕ್ತಿ, ರಾಷ್ಟ್ರ ಪ್ರೇಮವನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದಾರೆ. ಈ ಹಿಂದೆಯೇ ಒಮ್ಮೆ ಉಪಮುಖ್ಯಮಂತ್ರಿಗಳಾಗಿ ಮತ್ತು ವಿವಿಧ ಖಾತೆಗಳನ್ನು ನಿಭಾಯಿಸಿದ ಅನುಭವ ಅವರಿಗಿದೆ. ಹಾಗಾಗಿ ಸದಾ ಪಕ್ಷನಿಷ್ಠೆ ಮೆರೆಯುತ್ತಿರುವ ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪರನ್ನು ಉಪಮುಖ್ಯಮಂತ್ರಿ ಸ್ಥಾನವನ್ನು ನೀಡಬೇಕು ಎಂದು ಅವರು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ರಜಾಕ್‌, ಗವಿಸಿದ್ದಪ್ಪ, ಶರಣಪ್ಪ, ಹನುಮಂತಪ್ಪ, ಸುಧಾಕರ್‌, ಕಾವಲಿಗೌಡ, ಶೇಷಪ್ಪ, ರಾಘವೇಂದ್ರ ಸೇರಿ ಹಲವರು ಇದ್ದರು.

ಟಾಪ್ ನ್ಯೂಸ್

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.