ನರೇಗಾದಲ್ಲಿ ಬಾಣಂತಿ, ಗರ್ಭಿಣಿಯರಿಗೆ ರಿಯಾಯಿತಿ
Team Udayavani, Dec 17, 2022, 6:35 AM IST
ದಾವಣಗೆರೆ: ನರೇಗಾ ಯೋಜನೆಯಡಿ ನಿರ್ವಹಿಸುವ ಕಾಮಗಾರಿ ಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗರ್ಭಿಣಿ ಹಾಗೂ ಬಾಣಂತಿಯರಿಗೆ ಕೆಲಸದ ಪ್ರಮಾಣ ದಲ್ಲಿ ವಿಶೇಷ ರಿಯಾಯಿತಿ ಘೋಷಿಸಿದೆ.
ಪ್ರಸ್ತುತ ನರೇಗಾ ಯೋಜನೆಯಡಿ ಭಾಗ ವಹಿಸುವ ಮಹಿಳೆಯರ ಪ್ರಮಾಣ ಶೇ. 51ರಷ್ಟಿದೆ. ಇದನ್ನು ಶೇ. 60ಕ್ಕೆ ಹೆಚ್ಚಿಸುವುದು ಇಲಾಖೆಯ ಗುರಿ. ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಕೆಲಸದ ಪ್ರಮಾಣದಲ್ಲಿ ಶೇ. 50ರಷ್ಟು ವಿಶೇಷ ರಿಯಾಯಿತಿ ನೀಡಲು ಇಲಾಖೆ ನಿರ್ಧರಿಸಿದೆ.
ನರೇಗಾದಡಿ ಕಾಮಗಾರಿಗಳಲ್ಲಿ ಕೆಲಸ ನಿರ್ವಹಿಸುವ 6 ತಿಂಗಳು ತುಂಬಿದ ಗರ್ಭಿಣಿ ಯರಿಗೆ ಮಗು ಜನನದವರೆಗೆ ಹಾಗೂ ಬಾಣಂತಿಯರಿಗೆ ಮಗುವಿನ ಜನನ ದಿನಾಂಕದಿಂದ 6 ತಿಂಗಳವರೆಗೆ ನಿಗದಿತ ಕೂಲಿ ಪಡೆಯಲು ನಿಗದಿಪಡಿಸಲಾದ ಕೆಲಸದ ಪ್ರಮಾಣದಲ್ಲಿ ಶೇ. 50ರಷ್ಟು ರಿಯಾಯಿತಿ ಘೋಷಿಸಲಾಗಿದೆ.
ರಿಯಾಯಿತಿಗೆ ಆರೋಗ್ಯ ಇಲಾಖೆ ನೀಡುವ ತಾಯಿ ಕಾರ್ಡ್ನ್ನು ಆಧಾರವಾಗಿ ಪರಿಗಣಿಸಲು ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Panchamasali ಎಂಬ ಕಾರಣಕ್ಕೆ ಯತ್ನಾಳ್ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ