ನಾಳೆ ರಾಜ್ಯ ಬಂದ್‌ಗೆ ಬಿಜೆಪಿ ಕರೆ

Team Udayavani, May 27, 2018, 12:06 PM IST

dvg-2.jpg

ದಾವಣಗೆರೆ: ರೈತರ ಸಾಲ ಮನ್ನಾಕ್ಕೆ ಸರ್ಕಾರದ ಮೇಲೆ ಒತ್ತಡ ಹೇರಲು ಮೇ 28ರಂದು ಕರ್ನಾಟಕ ರಾಜ್ಯ ಬಂದ್‌ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ನೀಡಿರುವ ಕರೆಗೆ ಜಿಲ್ಲೆಯ ಜನರು ಬೆಂಬಲಿಸಬೇಕೆಂದು ಬಿಜೆಪಿ ಜಿಲ್ಲಾಧ್ಯಕ್ಷ ಯಶವಂತರಾವ್‌ ಜಾಧವ್‌ ಮನವಿ ಮಾಡಿದ್ದಾರೆ.

ಶನಿವಾರ, ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಎಚ್‌.ಡಿ. ಕುಮಾರಸ್ವಾಮಿ ಚುನಾವಣೆಗೂ ಮುನ್ನ
ತಾವು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ 24 ತಾಸಿನೊಳಗೆ ರೈತರ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದರು. ಆದರೆ, ಅಧಿಕಾರ ವಹಿಸಿಕೊಂಡ ನಂತರ ಈ ಭರವಸೆ ಹುಸಿಯಾಗುವಂತೆ ಕಾಣುತ್ತಿದೆ. 

ಹಾಗಾಗಿ ಕುಮಾರಸ್ವಾಮಿ ತಾವು ನೀಡಿದ ಭರವಸೆ ಈಡೇರಿಸಲು ಆಗ್ರಹಿಸಿ ಬಂದ್‌ ಕರೆ ನೀಡಲಾಗಿದೆ. ರೈತರ ಹಿತದೃಷ್ಟಿಯಿಂದ ಜಿಲ್ಲೆಯ ವರ್ತಕರು, ಆಟೋ, ಬಸ್‌ ಚಾಲಕರು, ಮಾಲೀಕರು, ಎಲ್ಲಾ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ತಮ್ಮ ವ್ಯಾಪಾರ ವಹಿವಾಟು ಬಂದ್‌ ಮಾಡಿ, ಸಹಕರಿಸಬೇಕೆಂದು ಅವರು ಕೋರಿದರು. 

ರೈತನನ್ನು ದೇಶದ ಬೆನ್ನೆಲಬು ಎಂದು ಪರಿಗಣಿಸಲಾಗಿದೆ. ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕಾದುದು ನಮ್ಮೆಲ್ಲರ ಕರ್ತವ್ಯ ಆಗಿದೆ. ಆದರೆ, ಕುಮಾರಸ್ವಾಮಿ ರೈತರ ಜೀವನದೊಂದಿಗೆ ಆಟವಾಡಲು ಹೊರಟಿದ್ದಾರೆ. ಇಂತಹ ಆಟಕ್ಕೆ ಬ್ರೆಕ್‌ ಹಾಕಬೇಕು. ಜೊತೆಗೆ ರೈತರ ಸಾಲ ಮನ್ನಾಕ್ಕೆ ಕ್ರಮ ವಹಿಸಬೇಕೆಂದು ಬಂದ್‌ ಮೂಲಕ ಒತ್ತಾಯಿಸಲಾಗುವುದು ಎಂದು ಅವರು ತಿಳಿಸಿದರು.

ಮೇ 28ರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್‌ ಮಾಡಲು ನಮ್ಮ ಪಕ್ಷದ ಕಾರ್ಯಕರ್ತರು ಎಲ್ಲಾ ಕಡೆ ತೆರಳಿ, ಮನವಿ ಮಾಡಲಿದ್ದಾರೆ. ಶಾಂತಿಯುತ ಬಂದ್‌ ಆಚರಿಸಿ, ರೈತರಿಗೆ ಬೆಂಬಲ ನೀಡಬೇಕೆಂದು ಮನವಿ ಮಾಡಲಿದ್ದಾರೆ ಎಂದು ಅವರು ಹೇಳಿದರು.

ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಎಚ್‌.ಎನ್‌. ಶಿವಕುಮಾರ್‌, ರಮೇಶ ನಾಯ್ಕ, ರಾಜ್ಯ ಸ್ಲಂ ಮೋರ್ಚಾ ಮುಖಂಡ ಪಿಸಾಳೆ ಕೃಷ್ಣ, ಬೇತೂರು ಬಸವರಾಜ್‌ ಸುದ್ದಿಗೋಷ್ಠಿಯಲ್ಲಿದ್ದರು. 

15 ಲಕ್ಷ ರೂ. ಖಾತೆಗೆ ಹಾಕ್ತೇನೆ ಅಂದಿಲ್ಲ ಪ್ರಧಾನಿ ನರೇಂದ್ರ ಮೋದಿಯವರು ಚುನಾವಣೆಗೂ ಮುನ್ನ ತಾವು ಚುನಾವಣೆಯಲ್ಲಿ ಗೆದ್ದರೆ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಹಾಕುವುದಾಗಿ ಹೇಳಿದ್ದರು ಎಂದು ಕಾಂಗ್ರೆಸ್‌ ಸುಳ್ಳು ಪ್ರಚಾರ ಮಾಡುತ್ತಿದೆ. ವಾಸ್ತವದಲ್ಲಿ ಮೋದಿಯವರು ಎಲ್ಲೂ ಸಹ 15 ಲಕ್ಷ ರೂ. ಖಾತೆಗೆ ಹಾಕುವ ಕುರಿತು ಮಾತನಾಡಿಲ್ಲ. ನಮ್ಮ ಪಕ್ಷದ ಪ್ರಣಾಳಿಕೆಯಲ್ಲೂ ಈ ಅಂಶ ಇಲ್ಲ. ಕಪ್ಪು ಹಣ ತರುವುದಾಗಿ ಭರವಸೆ ನೀಡಿದ್ದು ನಿಜ. ಈ ಯತ್ನ ನಡೆಯುತ್ತಿದೆ.
 ಯಶವಂತರಾವ್‌ ಜಾಧವ್‌, ಬಿಜೆಪಿ ಜಿಲ್ಲಾಧ್ಯಕ್ಷ

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.